World Bunts Conference: ಬಂಟರ ಸಂಘಟನಾತ್ಮಕ ಒಗ್ಗಟ್ಟಿಗೆ ಒತ್ತು


Team Udayavani, Oct 27, 2023, 11:30 AM IST

6-bunts

ಉಡುಪಿ: ವಿಶ್ವದಾದ್ಯಂತ ಹರಡಿರುವ ಬಂಟ ಸಮುದಾಯದ ಒಗ್ಗೂಡಿಸುವಿಕೆ ಮತ್ತು ಯುವ ಜನತೆಗೆ ತುಳುನಾಡ ಸಿರಿ, ದೈವ-ದೇವರು, ಸಂಸ್ಕೃತಿ, ಸಂಸ್ಕಾರ, ಇತಿಹಾಸವನ್ನು ತಿಳಿಸಿ ಭಾವನಾತ್ಮಕವಾಗಿ, ಸಂಘಟನಾತ್ಮಕವಾಗಿ ಇನ್ನಷ್ಟು ಅವರನ್ನು ಬಲಪಡಿಸುವುದಲ್ಲದೇ, ಸಮುದಾಯದ ಕಡು ಬಡವರನ್ನು ಮುಖ್ಯವಾಹಿನಿಗೆ ತರುವ ಮಹತ್ತರವಾದ ಆಶಯ ಸಮ್ಮೇಳನದ್ದು ಎನ್ನುತ್ತಾರೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಅವರ ವಿವರಣೆ.

ಅ. 28 ಮತ್ತು 29 ರಂದು ಉಡುಪಿಯಲ್ಲಿ ನಡೆಯುವ ವಿಶ್ವ ಬಂಟರ ಸಮ್ಮೇಳನದ ಸಿದ್ಧತೆ ಬಗ್ಗೆ “ಉದಯವಾಣಿ’ಯೊಂದಿಗೆ ಮಾತನಾಡಿದ ಅವರು, ಭಾರತದ ವಿವಿಧ ರಾಜ್ಯಗಳು ಸಹಿತವಾಗಿ ಅಮೆರಿಕ, ಯುಎಇ, ಬಹ್ರೈನ್‌, ಮಸ್ಕತ್‌, ಒಮನ್‌, ಆಸ್ಟ್ರೇಲಿಯ ಸೇರಿದಂತೆ ವಿವಿಧೆಡೆ ಸುಮಾರು 150 ಬಂಟರ ಸಂಘಗಳಿವೆ. ಇವೆಲ್ಲವನ್ನೂ ಒಗ್ಗೂಡಿಸಿ ಸಂಘಟನೆಯನ್ನು ಇನ್ನಷ್ಟು ಸದೃಢಗೊಳಿಸಲಾಗುವುದು. ಯುವಜನರಿಗೆ ನಮ್ಮ ಇತಿಹಾಸ, ಸಂಸ್ಕೃತಿಯನ್ನು ಪರಿಚಯಿಸಿ, ಅದನ್ನು ಮುಂದುವರಿಸಿಕೊಂಡು ಹೋಗಲು ಪ್ರೇರಣೆ ನೀಡಿದಂತಾಗಲಿದೆ. ಈಗಾಗಲೆ ಎಲ್ಲ ಬಂಟರ ಸಂಘದಲ್ಲೂ ಯುವ ಘಟಕ ಇದೆ ಮತ್ತು ಹೆಚ್ಚು ಕ್ರಿಯಾಶೀಲ ಆಗಿದೆ ಎಂದರು.

ಶಕ್ತಿ ಪ್ರದರ್ಶನವಲ್ಲ

ಈ ಸಮ್ಮೇಳನವು ಬಂಟ ಸಮುದಾಯದ ಶಕ್ತಿ ಪ್ರದರ್ಶನವಲ್ಲ. ಆದರೆ ಸಮುದಾಯ ಎಲ್ಲದರಲ್ಲೂ ಸಮರ್ಥವಾಗಿದೆ ಎಂಬುದನ್ನು ಪ್ರಸ್ತುತಪಡಿಸಲಿದ್ದೇವೆ. ಸರಕಾರದ ಅಗತ್ಯ ಸೌಲಭ್ಯ ನಮ್ಮ ಸಮುದಾಯಕ್ಕೂ ಸಿಗಬೇಕು. ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಮಂಡಳಿ ಸ್ಥಾಪಿಸಿ ಅನುದಾನ ನೀಡಬೇಕು. ಸದ್ಯ ಬಂಟ ಸಮುದಾಯವು 3ಬಿ ಅಡಿ ಬರಲಿದ್ದು, ಉದ್ಯೋಗ ಅಥವಾ ಶಿಕ್ಷಣದಲ್ಲಿ ಮೀಸಲು ಸಿಗುತ್ತಿಲ್ಲ. ಹೀಗಾಗಿ ಸಮುದಾಯವನ್ನು 2ಎ ಅಡಿ ತರಬೇಕು ಎನ್ನುವ ಒಕ್ಕೊರಲ ಧ್ವನಿಯು ಸಮ್ಮೇಳನದ ಮೂಲಕ ಮೊಳಗಲಿದೆ. ಸರಕಾರದಿಂದ ಸಿಗಬೇಕಾದ ಸವಲತ್ತು ಪಡೆಯಲು ಶಕ್ತರಿದ್ದೇವೆ ಎಂಬುದನ್ನು ಪ್ರದರ್ಶಿಸಲಾಗುವುದು ಎಂದರು.

ಶಿಕ್ಷಣ, ಉದ್ಯೋಗ

ನಮ್ಮ ಸಮುದಾಯದಲ್ಲಿ ವಸತಿಹೀನ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ಆರ್ಥಿಕ ನೆರವು, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ ಹಾಗೂ ಸಮುದಾಯದ ಬಡ ಕುಟುಂಬದವರ ಮದುವೆಗೆ ಆರ್ಥಿಕ ಸಹಕಾರ ಹಾಗೂ ವೈದ್ಯಕೀಯ ಸಹಾಯ ಸೇರಿದಂತೆ ಹಲವು ಸಮಾಜಮುಖೀ ಕಾರ್ಯವನ್ನು ಒಕ್ಕೂಟದಿಂದ ಮಾಡಲಾಗುತ್ತಿದೆ. ಇದರಲ್ಲಿ ಶೇ.20ರಷ್ಟು ನೆರವು ಬೇರೆ ಸಮುದಾಯಕ್ಕೂ ನೀಡುತ್ತಿದ್ದೇವೆ. ಈ ಸಮ್ಮೇಳನದಲ್ಲಿ ಬಂಟ ಸಮುದಾಯದ ಉದ್ಯೋಗದಾತರು ಹಾಗೂ ದಾನಿಗಳ ಸಮಾಗಮ ನಡೆಯಲಿದೆ. ಆ ಮೂಲಕ ಸಮುದಾಯದ ನಿರುದ್ಯೋಗಿಗಳಿಗೆ ಉದ್ಯೋಗ ಒದಗಿಸುವ ವ್ಯವಸ್ಥಿತ ಚೌಕಟ್ಟು ರಚಿಸುವ ಆಲೋಚನೆ ಇದೆ.

ಎಲ್ಲರೊಂದಿಗೂ ನಾವು

ಬಂಟರು ಎಲ್ಲರೊಂದಿಗೂ ಇದ್ದಾರೆ ಹಾಗೂ ಎಲ್ಲ ಸಮುದಾಯದವರು ನಮ್ಮ ಸಮುದಾಯದೊಂದಿಗೆ ಇದ್ದಾರೆ. ಅವರೊಂದಿಗೆ ಪ್ರೀತಿ, ಬಾಂಧವ್ಯ ಚೆನ್ನಾಗಿದ್ದು, ಈ ಸಮ್ಮೇಳನದಲ್ಲಿ ಬೇರೆಯವರೂ ಪಾಲ್ಗೊಳ್ಳುವರು. ಎಲ್ಲರೂ ಒಟ್ಟಾಗಿದ್ದಾಗ ಶಾಂತಿಯ ಬದುಕು ಸಾಧ್ಯ ಹಾಗೂ ದಾನದ ಮೂಲಕ ಹೆಸರು ಶಾಶ್ವತವಾಗಿ ಉಳಿದೀತು. ರಾಜಕಾ ರಣಿಗಳಿಗೆ ಸಮುದಾಯದ ಮೇಲೆ ನೈಜ ಕಾಳಜಿ ಇರಲಿ. ಚುನಾವಣೆಗೆ ಸೀಮಿತವಲ್ಲ. ಸರಕಾರದ ಸೌಲಭ್ಯ ಪಡೆಯಲು ರಾಜಕೀಯವಾಗಿ ಸದೃಢರಾಗಬೇಕು.

ಸಾಧಕರ ಸಮಾಗಮ

ಕ್ರೀಡೆ, ಸಿನೆಮಾ, ರಾಜಕೀಯ, ಕಲೆ, ಸಮಾಜ ಸೇವೆ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರು ಸಮ್ಮೇಳನದಲ್ಲಿ ಇರುವರು. ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಮೂಲಕ ಇಡೀ ಸಮುದಾಯವು ಒಂದು ಕುಟುಂಬದಂತೆ ಬೆರೆಯಲಿದೆ ಎಂಬುದೇ ಸಂತಸದ ಸಂಗತಿ ಎನ್ನುತ್ತಾರೆ ಅವರು.

ಟಾಪ್ ನ್ಯೂಸ್

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

6

Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.