“ಶ್ರದ್ಧಾಭಕ್ತಿಯಿಂದ ಪೂಜಿಸಿದರೆ ಇಷ್ಟಾರ್ಥ ಸಿದ್ಧಿ: ಕಾಳಹಸ್ತೇಂದ್ರ ಶ್ರೀ
Team Udayavani, Apr 25, 2019, 6:30 AM IST
ಉಡುಪಿ: ಅಮ್ಮನ ಆಶೀರ್ವಾದದಿಂದ ಭವ್ಯ ಸುಂದರ ಮಂದಿರ ನಿರ್ಮಾಣವಾಗಿದೆ. ದೇವರನ್ನು ಶ್ರದ್ಧಾಭಕ್ತಿಯಿಂದ ಪೂಜಿಸಿದರೆ ನಮ್ಮ ಇಷ್ಟಾರ್ಥ ನೆರವೇರಿ ಸಕಲ ಸಂಪತ್ತು ದೇವರು ದಯಪಾಲಿಸುವರು. ಆದ್ದರಿಂದ ನಾವು ಧರ್ಮದ ಮಾರ್ಗದಲ್ಲಿ ನಡೆಯಬೇಕು ಎಂದು ಕಟಪಾಡಿ ಶ್ರೀಮತ್ ಆನೆಗುಂದಿ ಜಗದ್ಗುರು ಮಹಾ ಸಂಸ್ಥಾನಂ ಸರಸ್ವತಿ ಪೀಠಾಧೀಶ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಶ್ರೀಗಳು ಹೇಳಿದರು .
ಅವರು ಎ.24ರಂದು ಉಡುಪಿ ಪುತ್ತೂರು ಶ್ರೀ ಕಾಳಿಕಾಂಬಾ ಭಜನಾ ಮಂದಿರ ಇದರ ಪುನಃ ಪ್ರತಿಷ್ಠೆ , ಸುವರ್ಣ ಮಹೋತ್ಸವ , ಭಜನ ಮಂಗಲೋತ್ಸವದ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
ವೇ| ಮೂ| ಪುತ್ತೂರು ಶ್ರೀನಿವಾಸ ತಂತ್ರಿ, ಬಾರಕೂರು ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀಧರ ಆಚಾರ್ಯ, ಶ್ರೀ ಕಾಳಿಕಾಂಬಾ ಭಜನ ಮಂದಿರದ ಅಧ್ಯಕ್ಷ ಅಪ್ಪು ಆಚಾರ್ಯ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಹರೀಶ ಆಚಾರ್ಯ, ಕೋಶಾಧಿಕಾರಿ ಶ್ರೀಧರ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು. ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ದಿನೇಶ ಆಚಾರ್ಯ ಸ್ವಾಗತಿಸಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.