Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!
Team Udayavani, May 15, 2024, 12:11 AM IST
ಸಿದ್ದಾಪುರ: ಕುಂದಾಪುರ ತಾಲೂಕಿನ ಸಿದ್ದಾಪುರದಲ್ಲಿ ಮಂಗಳವಾರ ಸಂಜೆ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಸಿದ್ದಾಪುರ ಗ್ರಾಮದ ಸ್ವಾಮಿಹಾಡಿಯ ಸುರೇಶ್ ಶೆಟ್ಟಿ (38) ಮೃತಪಟ್ಟವರು.
ಮಂಗಳವಾರ ಸಂಜೆ ಸಿದ್ದಾಪುರದಲ್ಲಿ ಸಿಡಿಲು ಸಹಿತ ಮಳೆಯಾಗಿದ್ದು, ಈ ಸಂದರ್ಭ ಸುರೇಶ್ ಅವರು ತನ್ನ ಕಿರಿಯ ಮಗನೊಂದಿಗೆ ಮನೆ ಸಮೀಪವೇ ಇದ್ದ ಮಾವಿನ ಮರದಿಂದ ಬಿದ್ದ ಮಾವಿನಹಣ್ಣು ತರಲು ತೆರಳಿದ್ದರು. ಆಗ ಭಾರೀ ಶಬ್ದದೊಂದಿಗೆ ಸಿಡಿಲು ಎರಗಿದ್ದು, ಅದು ಸುರೇಶ್ ಅವರ ಎದೆಯ ಭಾಗಕ್ಕೆ ಬಡಿದಿದೆ. ತಂದೆ ಬಿದ್ದಿರುವುದನ್ನು ಗಮನಿಸಿ ಮಗು ಮನೆಗೆ ಓಡಿ ಹೋಗಿ ಮನೆಯವರಿಗೆ ವಿಷಯ ತಿಳಿಸಿತು.
ಅಸ್ವಸ್ಥಗೊಂಡು ಬಿದ್ದಿದ್ದ ಅವರನ್ನು ಬದುಕಿಸುವ ಪ್ರಯತ್ನ ಮಾಡಲಾಗಿತ್ತಾದರೂ ಇದೇ ವೇಳೆ ಸಿದ್ಧಾಪುರ ಭಾಗದಲ್ಲಿ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಎದುರಾಗಿದ್ದರಿಂದ ಯಾರನ್ನೂ ಸಂಪರ್ಕಿಸಲು ಸಾಧ್ಯವಾಗಿರಲಿಲ್ಲ. ಆಸ್ಪತ್ರೆಗೆ ಕರೆದೊಯ್ಯಲು ವಿಳಂಬವಾಗಿದ್ದರಿಂದ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು.
ನಾಳೆ ಮಗುವಿನ ಜನ್ಮದಿನ
ಸುರೇಶ್ ಅವರ ಎರಡನೇ ಪುತ್ರನ ನಾಲ್ಕನೇ ವರ್ಷದ ಹುಟ್ಟುಹಬ್ಬ ಮೇ 16ರಂದು ನಡೆಯಲಿಕ್ಕಿತ್ತು. ಅದಕ್ಕಾಗಿಯೇ ಅವರು ಬೆಂಗಳೂರಿನಿಂದ ಬಂದು ಮನೆಯವರ ಜತೆ ಸಿದ್ಧತೆಯನ್ನೂ ನಡೆಸಿದ್ದರು. ಈ ನಡುವೆ ಕುಟುಂಬವನ್ನೇ ಸಿಡಿಲು ಕಣ್ಣೀರಿನಲ್ಲಿ ಮುಳುಗಿಸಿದೆ.
ಹೊಟೇಲ್ ಉದ್ಯೋಗಿ: ಹೆನ್ನಾಬೈಲುವಿನ ಬಸವ ಶೆಟ್ಟಿ ಅವರ ಪುತ್ರರಾದ ಸುರೇಶ್ ಬೆಂಗಳೂರಿನಲ್ಲಿ ಹೊಟೇಲ್ ಉದ್ಯೋಗಿಯಾಗಿದ್ದು, ಮಂಗಳವಾರ ಬೆಳಗ್ಗೆಯಷ್ಟೇ ಊರಿಗೆ ಬಂದಿದ್ದು, ಸಿದ್ದಾಪುರ ಸ್ವಾಮಿಹಾಡಿಯಲ್ಲಿರುವ ಪತ್ನಿಯ ತವರು ಮನೆಯಲ್ಲಿ ಉಳಿದುಕೊಂಡಿದ್ದರು.
ಸಿಡಿಲಾಘಾತದ ವೇಳೆ ಸುರೇಶ್ ಅವರ ಮಡದಿ, ಅತ್ತೆ, ನಾದಿನಿ ಹಾಗೂ ಓರ್ವ ಮಗ ಮನೆಯ ಒಳಗಿದ್ದುದರಿಂದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿದ್ದಾಪುರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಯಿತು.
ಮೃತರು ಪತ್ನಿ ವಿನೋದಾ, ಪುತ್ರರಾದ 8 ವರ್ಷದ ಸುಮೋದ್ ಹಾಗೂ 4 ವರ್ಷದ ಸವೊìದ ಅವರನ್ನು ಅಗಲಿದ್ದಾರೆ. ಕುಂದಾಪುರ ತಹಶೀಲ್ದಾರ್ ಶೋಭಾಲಕ್ಷ್ಮೀ ಹಾಗೂ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಿಡಿಲಾಘಾತಕ್ಕೆ ಸಿದ್ದಾಪುರ ಪರಿಸರದಲ್ಲಿ ಮೊಬೈಲ್ ನೆಟ್‌ವರ್ಕ್ ಹಾಗೂ ವಿದ್ಯುತ್ ಸಮಸ್ಯೆ ಎದುರಾಗಿದ್ದು ರಾತ್ರಿಯ ತನಕವೂ ದುರಸ್ತಿಯಾಗಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
Udupi: ವಿಶ್ವಶಾಂತಿಗೆ ಭಗವದ್ಗೀತೆಯೇ ಮೂಲಾಧಾರ: ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.