ಶಾನಾಡಿ: 30 ಅಡಿ ಆಳದ ಪಾಳು ಬಾವಿಗೆ ಬಿದ್ದ ಜಿಂಕೆ ಮರಿ ರಕ್ಷಿಸಿದ ಸ್ಥಳೀಯ ಯುವಕರ ತಂಡ
Team Udayavani, Jun 21, 2022, 8:05 PM IST
ತೆಕ್ಕಟ್ಟೆ: ಇಲ್ಲಿನ ಕೆದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾನಾಡಿ ಎಂಬಲ್ಲಿ ಸುಮಾರು 30 ಅಡಿ ಆಳದ ಪಾಳು ಬಾವಿಗೆ 1ವರ್ಷದ ಜಿಂಕೆಮರಿಯೊಂದು ಆಕಸ್ಮಿಕವಾಗಿ ಬಿದ್ದು ,ಸ್ಥಳೀಯರ ಸಮಯಪ್ರಜ್ಞೆಯಿಂದಾಗಿ ರಕ್ಷಿಸಿದ ಘಟನೆ ಜೂ.21 ರಂದು ಸಂಭವಿಸಿದೆ.
ಘಟನೆ : ಜೂ.21ರ ಮಧ್ಯಾಹ್ನ ಗಂಟೆ 12ರ ಸುಮಾರಿಗೆ ಇಲ್ಲಿನ ಶಾನಾಡಿಯ ಪ್ರಶಾಂತ್ ಶೆಟ್ಟಿ ಅವರಿಗೆ ಸಂಬಂಧಪಟ್ಟ ಜಾಗದಲ್ಲಿ ಗಿಡಗಂಟಿಗಳಿಂದ ಆವೃತ್ತವಾಗಿರುವ ಪಾಳುಬಿದ್ದ ಬಾವಿಗೆ ಜಿಂಕೆ ಮರಿಯೊಂದು ಆಕಸ್ಮಿಕವಾಗಿ ಬಿದ್ದಿರುವುದನ್ನು ಕಂಡ ಸ್ಥಳೀಯ ಹಿರಿಯ ಪ್ರಗತಿಪರ ಕೃಷಿಕ ಶಾನಾಡಿ ರಾಮಚಂದ್ರ ಭಟ್ ಅವರ ಸಮಯಪ್ರಜ್ಞೆಯಿಂದಾಗಿ ತತ್‌ಕ್ಷಣವೇ ಸಂಬಂಧಪಟ್ಟ ಅರಣ್ಯ ಇಲಾಖೆ ಹಾಗೂ ಸ್ಥಳೀಯರ ಗಮನಕ್ಕೆ ತಂದರು.
ಘಟನೆ ತಿಳಿದಾಕ್ಷಣವೇ ಸ್ಥಳಕ್ಕೆ ಆಗಮಿಸಿದ ಕುಂದಾಪುರ ವಲಯ ಅರಣ್ಯ ಇಲಾಖೆಯ ಮಹಿಳಾ ಸಿಬಂದಿ ವನಜಾ ಅವರು ಸ್ಥಳೀಯರೊಂದಿಗೆ ಸುರಕ್ಷಿತ ಕಾರ್ಯಚರಣೆಯ ಬಗ್ಗೆ ಚರ್ಚಿಸಿ ,ನಂತರ ಹಿರಿಯ ಪ್ರಗತಿಪರ ಕೃಷಿ ಶಾನಾಡಿ ರಾಮಚಂದ್ರ ಭಟ್ ಅವರ ಮಾರ್ಗದರ್ಶನದಂತೆ ಸುಮಾರು 30 ಅಡಿ ಎತ್ತರದ ಅಲ್ಯೂಮಿನಿಯಂ ಏಣಿ ಹಾಗೂ ಕಣ್ಣು ಬೀಳಿನ ಹೆಡಿಗೆಯನ್ನು ಬಳಸಿ ಸುರಿಯುವ ಮಳೆಯನ್ನು ಲೆಕ್ಕಿಸದೇ ಸ್ಥಳೀಯ ಯುವಕರಾದ ಸಂತೋಷ್ ಶಾನಾಡಿ, ಸುದರ್ಶನ್ ಹಾಗೂ ಮಣಿಯ ಅವರು ಹಗ್ಗದ ಸಹಾಯದಿಂದ ಬಾವಿಗೆ ಇಳಿದು ಸುಮಾರು ಒಂದು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಮಾನವೀಯತೆ ಮೆರೆದಿದ್ದಾರೆ. ಈ ಸಂದರ್ಭದಲ್ಲಿ ಪ್ರಶಾಂತ್ ಶೆಟ್ಟಿ, ಉದಯ ಶಾನಾಡಿ, ಯಶೋಧಾ ಭಟ್, ಮಹಾಬಲೇಶ್ವರ ಭಟ್ ಶಾನಾಡಿ, ದೇವಕಿ ಮತ್ತಿತರರು ಸಹಕರಿಸಿದರು.
-ವರದಿ: ಟಿ.ಲೋಕೇಶ್ ಆಚಾರ್ಯ ತೆಕ್ಕಟ್ಟೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಅಂಬರ್‌ಗ್ರೀಸ್ ಮಾರಾಟ ಜಾಲ: ಅಧಿಕಾರಿಗಳಿಗೆ ಹಲ್ಲೆಗೈದ ನಾಲ್ವರ ಬಂಧನ
Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!
Shiroor: ಡಿವೈಡರ್‌ಗೆ ಕಾರು ಢಿಕ್ಕಿ
Kundapura: ಕಸದಿಂದಲೇ ಕಲಾಕೃತಿ; ಕಾಲ್ತೋಡಿನಲ್ಲೊಂದು ಸುಂದರ ಅಂಗನವಾಡಿ
ಹೆಬ್ಬಾಗಿಲಿನಲ್ಲಿ ಆರಂಭವಾದ ಶಾಲೆ ಇಂದು ಈ ಊರ ಮಕ್ಕಳ ಪಾಲಿನ ಶಿಕ್ಷಣದ ಹೆಬ್ಬಾಗಿಲೇ ಆಗಿದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.