Kundapura: ಬೈಕ್ ಸವಾರರ ನಿದ್ದೆ ಕೆಡಿಸಿದ ಸರ್ವಿಸ್ ರಸ್ತೆ ಗುಂಡಿ
ಪ್ರಾಣ ಹಾನಿ ಸಂಭವಿಸುವ ಮುನ್ನ ಪ್ರಾಧಿಕಾರ ತುರ್ತು ಗಮನ ವಹಿಸಲಿ
Team Udayavani, Aug 8, 2024, 2:28 PM IST
ಕುಂದಾಪುರ: ಕುಂದಾಪುರದ ಫ್ಲೈಓವರ್ ಅಂಡರ್‌ಪಾಸ್ ದಾಟಿ ಉಡುಪಿ ಕಡೆಗೆ ಮುಂದುವರಿಯುವಾಗ ಹೋಟೆಲ್ ದಿವ್ಯಲಕ್ಷ್ಮೀ ಸಮೀಪ ಶ್ರೀದೇವಿ ನರ್ಸಿಂಗ್ ಹೋಂ ರಸ್ತೆಗಿಂತ ಮುಂದೆ ಹಾದು ಹೋಗುವ ಸರ್ವಿಸ್ ರಸ್ತೆಯಲ್ಲಿ ಬೃಹತ್ ಹೊಂಡ ನಿರ್ಮಾಣಗೊಂಡಿದೆ. ಅದರಲ್ಲಿ ಮಳೆ ನೀರು ನಿಂತು ಹೊಂಡ ಗಮನಕ್ಕೆ ಬಾರದೆ ತುಂಬಾ ಜನ ಬೈಕ್ ಸವಾರರು ಹೊಂಡದಲ್ಲಿ ಬಿದ್ದಿರುವ ಘಟನೆ ನಡೆಯುತ್ತಿದೆ. ಯಾವುದಾದರೂ ಪ್ರಾಣ ಹಾನಿ ಸಂಭವಿಸುವ ಮೊದಲೇ ಸಂಬಂಧಿತ ಪ್ರಾಧಿಕಾರ ತುರ್ತು ಗಮನ ವಹಿಸಿ ಇದರ ದುರಸ್ತಿ ಕಾರ್ಯಕ್ಕೆ ಮುಂದಾಗಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಇದೇ ರೀತಿಯ ಅನೇಕ ಗುಂಡಿಗಳು ಹಲವೆಡೆ ಇದ್ದು ಇದರ ಬಗ್ಗೆ ಸಂಬಂಧಿತ ಇಲಾಖೆ ಸರಿಪಡಿಸುವಲ್ಲಿ ಕ್ರಮ ಕೈಗೊಳ್ಳಬೇಕಾಗಿ ಸಾರ್ವಜನಿಕರು ತಮ್ಮ ಅಳಲು ತೋಡಿಕೊಂಡಿದ್ದಾರೆ. ದಿನನಿತ್ಯ ವಾಹನದಲ್ಲಿ ಓಡಾಡುವ ವಾಹನ ಚಾಲಕರಿಗೆ ಸಮರ್ಪಕವಾದ ರಸ್ತೆ ನಿರ್ಮಿಸಿಕೊಡುವುದು ಸಂಬಂಧಿತ ಪ್ರಾ ಧಿಕಾರದ ಆದ್ಯ ಕರ್ತವ್ಯವಾಗಿದೆ. ಆದರೆ ಇಲ್ಲಿ ಸುಂಕ ಸಂಗ್ರಹವಷ್ಟೇ ತಮ್ಮ ಕೆಲಸ ಎಂದು ಭಾವಿಸಿದಂತಿದೆ.
ಆಕಸ್ಮಿಕವಾಗಿ ನಡೆಯುವ ಅವ ಘಡಗಳನ್ನು ತಪ್ಪಿಸುವಲ್ಲಿ ಆಡಳಿತ ಸಹಾಯ ಮಾಡಬೇಕಾಗುತ್ತದೆ. ಕುಂದಾಪುರದ ಸರ್ವಿಸ್ ರಸ್ತೆಯಲ್ಲಿ ಬೈಕ್ ಸವಾರರಿಗೆ ತೆರೆದ ಗುಂಡಿಗಳು ತಲೆನೋವಾಗಿ ಪರಿಣಮಿಸಿದೆ. ಮೃತ್ಯುವಿಗೆ ಆಹ್ವಾನ ನೀಡಿದಂತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್
Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.