Rishab Shetty: ಕೆರಾಡಿ ಸರ್ಕಾರಿ ಪ್ರಾಥಮಿಕ ಶಾಲೆಗೆ “ಕಾಂತಾರ’ ಕಳೆ!

ಕಲಿತ ಶಾಲೆ ದತ್ತು ಪಡೆದು ಅಭಿವೃದ್ಧಿಪಡಿಸಿದ ಕಾಂತಾರ ಸ್ಟಾರ್

Team Udayavani, Aug 18, 2024, 10:36 AM IST

Rishab Shetty: ಕೆರಾಡಿ ಸರ್ಕಾರಿ ಪ್ರಾಥಮಿಕ ಶಾಲೆಗೆ “ಕಾಂತಾರ’ ಕಳೆ!

ಕುಂದಾಪುರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರದ ಮೂಲಕ ಕನ್ನಡ ಶಾಲೆಗಳ ಉಳಿವಿನ ಬಗ್ಗೆ ಜಾಗೃತಿಯ ಸಂಚಲನ ಸೃಷ್ಟಿಸಿದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಅವರು ತಾನು ಕಲಿತ ಕೆರಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನೇ ದತ್ತು ಪಡೆದು ಅದಕ್ಕೆ ಹೊಸ ಕಳೆ ನೀಡಿದ್ದಾರೆ.

ಕಾಂತಾರ ಚಿತ್ರದ ನಟನೆಗಾಗಿ ಶ್ರೇಷ್ಠ ನಟ ಪ್ರಶಸ್ತಿ ಪಡೆದಿರುವ ಅವರು ಕಳೆದ ಸ್ವಾತಂತ್ರ್ಯೋತ್ಸವ ದಿನದಂದೂ ಶಾಲೆಗೆ ಭೇಟಿ ನೀಡಿದ್ದರು. 71 ವರ್ಷಗಳ ಇತಿಹಾಸವಿರುವ ಕೆರಾಡಿ ಸರಕಾರಿ ಕನ್ನಡ ಹಿ.ಪ್ರಾ. ಶಾಲೆಯನ್ನು ಈ ಶೈಕ್ಷಣಿಕ ವರ್ಷದಿಂದ ಮುಂದಿನ ಐದು ವರ್ಷಗಳವರೆಗೆ ರಿಷಬ್‌ ಫೌಂಡೇಶನ್‌ ದತ್ತು ಪಡೆದಿದೆ. ಹೀಗಾಗಿ ಮುಚ್ಚುವ ಭೀತಿಯಲ್ಲಿದ್ದ ಶಾಲೆಗೆ ಮರುಜೀವ ಸಿಕ್ಕಿದೆ. ಶಿಕ್ಷಕರ ಕೊರತೆ, ಇನ್ನಿತರ ಸಮಸ್ಯೆಗಳಿಂದ ವರ್ಷದಿಂದ ವರ್ಷಕ್ಕೆ ಕಡಿಮೆ ಆಗುತ್ತಿದ್ದ ಮಕ್ಕಳ ಸಂಖ್ಯೆ ಈ ವರ್ಷದಿಂದ ಏರುಗತಿಯಲ್ಲಿದೆ. ಕಳೆದ ವರ್ಷ 71, ಈ ವರ್ಷ 93: ಕಳೆದ ವರ್ಷ ಈ ಶಾಲೆಯಲ್ಲಿ 71 ಮಕ್ಕಳು ಕಲಿಯುತ್ತಿದ್ದರು. ಈ ಬಾರಿ ಎಲ್‌ಕೆಜಿ, ಯುಕೆಜಿ, 1ರಿಂದ 8ನೇ ತರಗತಿಯವರೆಗೆ

ವಿವಿಧ ತರಗತಿಗಳಿಗೆ ಒಟ್ಟಾರೆ 25 ಮಕ್ಕಳು ಹೊಸದಾಗಿ ಸೇರ್ಪಡೆಯಾಗಿದ್ದಾರೆ. ಪ್ರಸ್ತುತ ಈ ಶಾಲೆಯಲ್ಲಿ 93 ಮಕ್ಕಳು ಕಲಿಯುತ್ತಿದ್ದಾರೆ. ಮುಂದಿನ ವರ್ಷದಿಂದ ಈ ಸಂಖ್ಯೆ ನೂರರ ಗಡಿ ದಾಟುವ ನಿರೀಕ್ಷೆಯಿದೆ. 1ನೇ ತರಗತಿಗೆ 12 ಮಕ್ಕಳು ಸೇರ್ಪಡೆಯಾಗಿದ್ದು, ಹೊಸದಾಗಿ ಆರಂಭಿಸಲಾದ ಎಲ್‌ಕೆಜಿ – ಯುಕೆಜಿಯಲ್ಲಿ 21 ಮಕ್ಕಳಿದ್ದಾರೆ. ತಲಾ ಇಬ್ಬರು ಸರಕಾರಿ, ಅತಿಥಿ ಶಿಕ್ಷಕರಿದ್ದು, ರಿಷಬ್‌ ಫೌಂಡೇಶನ್‌ ನಿಂದ 4 ಗೌರವ ಶಿಕ್ಷಕರು ಸೇರಿದಂತೆ ಒಟ್ಟು 8 ಮಂದಿ ಶಿಕ್ಷಕರು ಬೋಧಿಸುತ್ತಿದ್ದಾರೆ.

ಕೈರಂಗಳ ಶಾಲೆಯನ್ನೂ ದತ್ತು ಪಡೆದಿದ್ದರು:

ಗಡಿನಾಡು ಕಾಸರಗೋಡಲ್ಲಿ ಕನ್ನಡ ಶಾಲೆಗಳು ಮುಚ್ಚುತ್ತಿರುವುದನ್ನು “ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಮೂಲಕ ಮನೋಜ್ಞವಾಗಿ ಚಿತ್ರಿಸಿದ್ದರು. ಆ ಬಳಿಕ ರಾಜ್ಯದಲ್ಲಿಯೂ ಕೆಲವೆಡೆಗಳಲ್ಲಿ ಕನ್ನಡ ಶಾಲೆಗಳ ಉಳಿಸುವ ಅಭಿಯಾನ ಆರಂಭಗೊಂಡವು. ಬಂಟ್ವಾಳ ತಾಲೂಕಿನ ಕೈರಂಗಳ ಕನ್ನಡ ಮಾಧ್ಯಮ ಹಿ.ಪ್ರಾ. ಶಾಲೆಯಲ್ಲಿ ಈ ಚಿತ್ರದ ಚಿತ್ರೀಕರಣ ನಡೆದಿತ್ತು. ಆಗ ಈ ಶಾಲೆಯಲ್ಲಿ 42 ಮಕ್ಕಳಿದ್ದು, ಆ ಬಳಿಕ ಮಕ್ಕಳ ಸಂಖ್ಯೆ 17ಕ್ಕೆ ಕುಸಿದು, ಮುಚ್ಚುವ ಹಂತದಲ್ಲಿತ್ತು. ಆದರೆ ತನ್ನ ಸಿನೆಮಾಕ್ಕಾಗಿ ಬಳಸಿ, ಕೈ ಕಟ್ಟಿ ಕುಳಿತುಕೊಳ್ಳದ ರಿಷಬ್‌ ಶೆಟ್ಟರು, ಈ ಕೈರಂಗಳ ಶಾಲೆಯನ್ನು ದತ್ತು ಪಡೆದು, ಮಾದರಿ ಶಾಲೆಯಾಗಿ ರೂಪಿಸುವ ಪಣ ತೊಟ್ಟಿದ್ದರು. ಮುಂದೆ ಶಾಲೆಯಲ್ಲಿ ಮಕ್ಕಳ ಸಂಖ್ಯೆ ವರ್ಷದೊಳಗೆ 84ಕ್ಕೆ ಏರಿತ್ತು.

ಏನೆಲ್ಲ ಅಭಿವೃದ್ಧಿ?:

  • ಆಟದ ಮೈದಾನ ವಿಸ್ತರಣೆ,ಕಟ್ಟಡಕ್ಕೆ ಸುಣ್ಣಬಣ್ಣ
  • ಮಕ್ಕಳನ್ನು ಕರೆತರಲು 2 ಶಾಲಾ ವಾಹನ ವ್ಯವಸ್ಥೆ
  • ಶಾಲೆ ಪಕ್ಕದ ಇಬ್ಬರನ್ನು ಬಿಟ್ಟು 91 ಮಕ್ಕಳಿಗೂ ವಾಹನ ಸೌಲಭ್ಯ
  • ಎರಡು ಕೊಠಡಿಗಳಿಗೆ ಟೈಲ್ಸ್‌ ಅಳವಡಿಕೆ, ನಲಿ-ಕಲಿ ಪರಿಕರಗಳು
  • ಶುದ್ಧ ನೀರಿನ ಘಟಕ, ಎಲ್‌ ಕೆಜಿ- ಯುಕೆಜಿ ಮಕ್ಕಳಿಗೆ ಸಮವಸ್ತ್ರ
  • ಹೊಸದಾಗಿ ಶೌಚಾಲಯ ನಿರ್ಮಾಣ
  • ಕಂಪ್ಯೂಟರ್‌ ಲ್ಯಾಬ್‌, ಪ್ರಿಂಟರ್‌, ಪ್ರಾಜೆಕ್ಟರ್‌ ಶೀಘ್ರ ಒದಗಣೆ

ಮಾದರಿ ಶಾಲೆ ಗುರಿ:

ಸರಕಾರಿ ಹಿ.ಪ್ರಾ. ಶಾಲೆಯ ಕಾಸರಗೋಡು ಚಿತ್ರದ ಮುಂದುವರಿದ ಭಾಗವಾಗಿ ಈ ಕೈಂಕರ್ಯ ಕೈಗೊಂಡಿದ್ದೇವೆ. ಶಾಲೆಯ ತುರ್ತು ಬೇಡಿಕೆಗಳನ್ನು ಈಗಾಗಲೇ ಪೂರೈಸಲಾಗಿದೆ. ಎಲ್ಲ ರೀತಿಯ ಸೌಕರ್ಯ ಒದಗಿಸಲಾಗುವುದು. ಮಕ್ಕಳ ಸಂಖ್ಯೆ ಇನ್ನಷ್ಟು ಹೆಚ್ಚಾಗಬೇಕು. ಅದಕ್ಕೆ ಪೋಷಕರು, ಗ್ರಾಮಸ್ಥರ ಸಹಕಾರವೂ ಬೇಕು. – ರಿಷಬ್‌ ಶೆಟ್ಟಿ, ನಟ, ನಿರ್ದೇಶಕ

ಹೆಮ್ಮೆಯ ಸಂಗತಿ:

ಈ ಬಾರಿ ಮಕ್ಕಳ ದಾಖಲಾತಿಯೂ ಹೆಚ್ಚಾಗಿದೆ. ಬೆಳ್ಳಾಲ, ಚಿತ್ತೂರು ಭಾಗಕ್ಕೆ ಹೋಗುತ್ತಿದ್ದ ಮಕ್ಕಳು ಇಲ್ಲಿಗೆ ಬಂದಿದ್ದಾರೆ. ಗ್ರಾಮೀಣ ಭಾಗದ ಶಾಲೆಗೆ ರಿಷಬ್‌ ಫೌಂಡೇಶನ್‌ ಸಕಲ ವ್ಯವಸ್ಥೆಯನ್ನು ನೀಡುತ್ತಿದೆ.  ಭಾಸ್ಕರ್‌ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯರು

ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

ಹೋಟೆಲ್ ಕೊಠಡಿಯಲ್ಲೇ ಹಿರಿಯ ವೈದ್ಯ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Rakesh Adiga in Maryade Prashne movie

Rakesh Adiga: ನಾನು ಮಿಡಲ್‌ ಕ್ಲಾಸ್‌ ಹುಡುಗ ಮರ್ಯಾದೆ ಉಳಿಸಿ!

JPC misused for drama in by-election: HK Patil

Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Thekkatte: ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿದೆ ಗೋ ಕಳವು ಪ್ರಕರಣ

5

Siddapura: ಅದೃಷ್ಟ ತಂದ ಲಾರಿ ಧರ್ಮಸ್ಥಳ ಕ್ಷೇತ್ರಕ್ಕೆ ಸಮರ್ಪಣೆ

4

Wandse, ಚಿತ್ತೂರು, ಇಡೂರು: ಹೊಂಡಗಳಿಗೆ ಮುಕ್ತಿ ಕೊಡಿ

2(1)

Karkala: ಸೆಲ್ಫಿ ಕಾರ್ನರ್‌ ಮಾಡಿದರೂ ತ್ಯಾಜ್ಯ ಎಸೆತ ನಿಂತಿಲ್ಲ!

4-mng

Kundapura: ಉದಯ ಜುವೆಲರ್ಸ್‌ ನ. 14ರ ವರೆಗೆ ದೀಪೋದಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ

ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ

24-tma-pai

Karkala: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ 24*7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ

12(2)

Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ

11

Malpe: ಕೋಡಿಬೆಂಗ್ರೆ-ಹಂಗಾರಕಟ್ಟೆ ಸಂಪರ್ಕ ಇನ್ನು ದೂರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.