ಮಾಜಿ ಶಾಸಕ, ಕರಾವಳಿಯ ಭೀಷ್ಮ ಎ.ಜಿ. ಕೊಡ್ಗಿ ಇನ್ನಿಲ್ಲ
Team Udayavani, Jun 13, 2022, 4:45 PM IST
ಕುಂದಾಪುರ : ಕರಾವಳಿ ಜಿಲ್ಲೆಯ ರಾಜಕಾರಣದಲ್ಲಿ ಅಪರೂಪದ ರಾಜಕೀಯ ಚಾಣಾಕ್ಷ ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ (ಎ.ಜಿ. ಕೊಡ್ಗಿ) ಅವರು ಅಸೌಖ್ಯದಿಂದ ಸೋಮವಾರ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಕರಾವಳಿ ಜಿಲ್ಲೆಯ ರಾಜಕಾರಣದಲ್ಲಿ ಅಪರೂಪದ, ರಾಜಕೀಯ ಚಾಣಾಕ್ಷನಾಗಿ ಸುದೀರ್ಘ 56 ವರ್ಷಗಳ ಕಾಲ ತೊಡಗಿಸಿಕೊಂಡು, ತಾನು ಗುರುತಿಸಿಕೊಂಡ ಪಕ್ಷದಲ್ಲಿ ನಿಷ್ಠೆ ಹಾಗೂ ಬದ್ಧತೆಯನ್ನು ತೋರಿಸಿ, ಪಕ್ಷಕ್ಕೆ ತನ್ನ ಆವಶ್ಯಕತೆಯಿಲ್ಲ ಎಂದೆನಿಸಿದಾಗ ರಾಜಕೀಯದ ಪಡಸಾಲೆಯಿಂದ ನಿರ್ಗಮಿಸಿದವರು ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ ಅವರು.
ಕುಂದಾಪುರ ತಾಲೂಕು ಅಮಾಸೆಬೈಲು ಕೃಷಿಕ ಕುಟುಂಬದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಕುಂದಾಪುರ ತಾಲೂಕಿನ ಅಮಾಸೆಬೈಲು ಗ್ರಾಮದ ಮಚ್ಚಟ್ಟು ಕೃಷ್ಣರಾಯ ಕೊಡ್ಗಿ ಅವರ ಮಗನಾಗಿ 1929ರ ಅ. 1ರಂದು ಕಾರ್ಕಳ ತಾಲೂಕಿನ ಮಂಜರಪಳಿಕೆ ಎಂಬಲ್ಲಿ ಜನಿಸಿದ ಎ.ಜಿ. ಕೊಡ್ಗಿ ವಿದ್ಯಾರ್ಥಿ ಜೀವನದಲ್ಲಿ 1942ರಲ್ಲಿ ಕ್ವಿಟ್ ಇಂಡಿಯಾ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ್ದರು. ಕಾನೂನು ಪದವಿ ಪಡೆದು ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ನಿಟ್ಟೂರು ಶ್ರೀನಿವಾಸ ರಾವ್ ಅವರೊಂದಿಗೆ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಕೆಲ ವರ್ಷ ವಕೀಲರಾಗಿ ಕೆಲಸ ನಿರ್ವಹಿಸಿದರು. ಬಳಿಕ ಕೃಷಿಯಲ್ಲಿಯೇ ಪರಿಪೂರ್ಣವಾಗಿ ತೊಡಗಿಸಿಕೊಂಡರು.
ತಾಲೂಕು ಬೋರ್ಡ್ ಅಧ್ಯಕ್ಷ, ಉಪಾಧ್ಯಕ್ಷರಾಗಿ, ಎಂಟು ವರ್ಷ ತಾಲೂಕು ಬೋರ್ಡ್ ಸದಸ್ಯರಾಗಿದ್ದರು. ಮಂಗಳೂರು ಜಿಲ್ಲಾ ಪರಿಷತ್ ಸದಸ್ಯ, ಆರ್ಥಿಕ ಸಮಿತಿ ಸದಸ್ಯ, 1972-83ರ ತನಕ ಎರಡು ಬಾರಿ ಬೈಂದೂರು ಶಾಸಕ, 2006-08ರ ತನಕ ರಾಜ್ಯ ಮೂರನೇ ಹಣಕಾಸು ಆಯೋಗ ಅಧ್ಯಕ್ಷ, ಬಳಿಕ ಅದರ ಕಾರ್ಯಪಡೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಸಹಕಾರ ಕ್ಷೇತ್ರದಲ್ಲಿ 6 ದಶಕಗಳಿಗಿಂತಲೂ ಅಧಿಕ ಸೇವೆ ಸಲ್ಲಿಸಿ, ಶಂಕರನಾರಾಯಣ ಸಿಎ ಬ್ಯಾಂಕ್ ಅಧ್ಯಕ್ಷ, ಕುಂದಾಪುರ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ, ಮಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ, ಸ್ಕ್ಯಾಮ್ಸ್ ನಿರ್ದೇಶಕ, ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರಿ ಸಂಘದ ಅಧ್ಯಕ್ಷರಾಗಿ, ಮಂಗಳೂರು ಎಪಿಎಂಸಿ ಅಧ್ಯಕ್ಷ , ಅಲ್ಲದೆ ರಾಜ್ಯ ಮಾರ್ಕೆಟಿಂಗ್ ಬೋರ್ಡ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. 1984-1992ರ ತನಕ ಕರ್ಣಾಟಕ ಬ್ಯಾಂಕ್ ನಿರ್ದೇಶಕರಾಗಿ ಸೇವೆ ನೀಡಿದ್ದಾರೆ.
ಇದನ್ನೂ ಓದಿ :ಭಾರೀ ಕುಸಿತದೊಂದಿಗೆ ಬಾಂಬೆ ಷೇರುಪೇಟೆ ವಹಿವಾಟು ಅಂತ್ಯ: ಲಾಭಗಳಿಸಿದ ಷೇರು ಯಾವುದು?
ಕರಾವಳಿ ಜಿಲ್ಲೆಯಲ್ಲಿ ಕಾಂಗ್ರೆಸ್ ಭದ್ರಕೋಟೆ ಭೇದಿಸಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ ಕೀರ್ತಿ ಕೊಡ್ಗಿಯವರಿಗೆ ಸಲ್ಲುತ್ತಿದೆ. ಕಾಂಗ್ರೆಸ್ ಪಕ್ಷದಲ್ಲಿರುವಾಗ ಜಿಲ್ಲಾ ಕಾಂಗ್ರೆಸ್ ಸದಸ್ಯ, ರಾಜ್ಯ ಕಾಂಗ್ರೆಸ್ ಸದಸ್ಯರಾಗಿ ದುಡಿದವರು. 1993ರಲ್ಲಿ ಬಿಜೆಪಿ ಸೇರಿದ ಕೊಡ್ಗಿ ಕುಂದಾಪುರ ತಾಲೂಕು ಬಿಜೆಪಿ ಅಧ್ಯಕ್ಷ, ಜಿಲ್ಲಾಧ್ಯಕ್ಷ, ರಾಜ್ಯ ಬಿಜೆಪಿ ಉಪಾಧ್ಯಕ್ಷ, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
2006 ರಾಜ್ಯದ ಮೂರನೇ ಹಣಕಾಸು ಆಯೋಗದ ಅಧ್ಯಕ್ಷರಾಗಿ, 2009ರಲ್ಲಿ ಹಣಕಾಸು ಆಯೋಗದ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಬಳಿಕ ರಾಜಕೀಯ ನಿವೃತ್ತಿ ಪಡೆದು ಅಮಾಸೆಬೈಲಿನ ಅಭಿವೃದ್ಧಿಗಾಗಿ ಪಣತೊಟ್ಟು ನಿಂತರು.
ಅದಕ್ಕಾಗಿಯೇ ಅಮಾಸೆಬೆ„ಲು ಚಾರಿಟೇಬಲ್ ಟ್ರಸ್ಟ್ ಆರಂಭಿಸಿ ಕರ್ಣಾಟಕ ಬ್ಯಾಂಕ್ ಅಮಾಸೆಬೈಲು ಗ್ರಾಮವನ್ನು ದತ್ತು ಸ್ವೀಕರಿಸುವಂತೆ ಮಾಡಿದರು. ಮಾದರಿ ಗ್ರಾಮವನ್ನಾಗಿಸಲು ಸಾಕಷ್ಟು ಯೋಜನೆಗಳನ್ನು ಕಾರ್ಯಗತಗೊಳಿಸಿದರು. ಅಮಾಸೆಬೈಲು ಗ್ರಾ.ಪಂ ವ್ಯಾಪ್ತಿಯ ಎಲ್ಲಾ ಕುಟುಂಬಗಳಿಗೆ ಮನೆ, ಶೌಚಾಲಯ ನಿರ್ಮಾಣ, ಶುದ್ಧ ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಬಡ ಕುಟುಂಬಗಳಿಗೆ ಆರೋಗ್ಯ ರಕ್ಷಣೆ, ಗ್ರಾಮದ ಎಲ್ಲಾ ಮಕ್ಕಳಿಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಕಲ್ಪಿಸುವುದು, ಅನಕ್ಷರಸ್ಥ ಶಿಕ್ಷಣ, ವಿಮೆ ಸೌಲಭ್ಯ, ಉದ್ಯೋಗ ಹೀಗೆ ನೂರಾರು ಯೋಜನೆಗಳು. ಅಮಾಸೆಬೈಲು ಗ್ರಾಮದಲ್ಲಿ 4 ಸಾವಿರ ಮನೆಗಳಿಗೆ ಸೋಲಾರ್ ಬೆಳಕು ಹರಿಸಿ, ಗ್ರಾಮವನ್ನು ಪೂರ್ಣ ಸೋಲಾರ್ ಗ್ರಾಮ ಎಂದು ಮಾಡಿದ ಹೆಗ್ಗಳಿಕೆಯೂ ಅವರದ್ದೇ. ಅದಕ್ಕಾಗಿ ಅಮಾಸೆಬೈಲು ಗ್ರಾ.ಪಂ.ನ ಸೋಲಾರ್‌ಯೋಜನೆಗೆ 7ನೆಯ ರಾಷ್ಟ್ರೀಯ ಸೂರ್ಯಮಿತ್ರ ಪ್ರಶಸ್ತಿ 2018-19 ದೊರೆತಿದೆ. 2020ರಲ್ಲಿ ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್, ಮಾಹೆ. ಎಂಇಎಂಜಿ ಹಾಗೂ ಮಣಿಪಾಲ ಮೀಡಿಯಾ ನೆಟ್‌ವರ್ಕ್ ಲಿ. ವತಿಯಿಂದ ಹೊಸವರ್ಷದ ಪ್ರಶಸ್ತಿಗೆ ಭಾಜನರಾಗಿದ್ದರು.
1993ರಲ್ಲಿ ಕುಂದಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ವರ್ಧಿಸಿ ಸೋತಾಗ ಧೃತಿಗೇಡದೇ ಜಯಗಳಿಸಿದ ಜಯರಾಮ ಶೆಟ್ಟಿಯವರೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಅಂದು ಆಸ್ಕರ್ ಫೆರ್ನಾಂಡಿಸ್ ಅವರ ಎದುರಿಗೆ ಜಯರಾಮ ಶೆಟ್ಟಿಯವರನ್ನು ನಿಲ್ಲಿಸಿ ಗೆಲ್ಲಿಸಿದ್ದು, ವಿನಯ ಕುಮಾರ್ ಸೊರಕೆ ಎದುರಿಗೆ ಮನೋರಮಾ ಮಧ್ವರಾಜ್ ಅವರನ್ನು ನಿಲ್ಲಿಸಿ ಗೆಲ್ಲಿಸಿದ್ದನ್ನು ಜನರು ಇಂದಿಗೂ ಸ್ಮರಿಸುತ್ತಾರೆ. ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಇಂಟರ್ ಮಿಡಿಯೆಟ್ ಮಾಡುತ್ತಿದ್ದಾಗ ದಿ| ಮಧ್ವರಾಜರು (ಮಾಜಿ ಶಾಸಕ) ಇವರ ಸಹಪಾಠಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.