ಆಜ್ರಿ: ಸಾರ್ವಜನಿಕ ಶೌಚಾಲಯವಿಲ್ಲದೆ ಪರದಾಟ


Team Udayavani, Aug 22, 2021, 3:30 AM IST

ಆಜ್ರಿ: ಸಾರ್ವಜನಿಕ ಶೌಚಾಲಯವಿಲ್ಲದೆ ಪರದಾಟ

ಆಜ್ರಿ: ಸರಕಾರಿ ಕಚೇರಿಗಳು, ವ್ಯಾಪಾರ ವಹಿವಾಟುಗಳಿಗೆ ನಿತ್ಯ ಬೇರೆ ಬೇರೆ ಹಳ್ಳಿಗಳಿಂದ ಆಜ್ರಿ ಪೇಟೆಗೆ ಬರುವ ಜನ ಸಾರ್ವಜನಿಕ ಶೌಚಾಲಯವಿಲ್ಲದೆ ಪರದಾಡುವಂತಾಗಿದೆ. ಬಹುತೇಕ ಅಂಗಡಿ ಮಳಿಗೆಗಳು, ಹೊಟೇಲ್‌, ಇನ್ನಿತರ ಕಟ್ಟಡ, ಕಚೇರಿಗಳಲ್ಲೂ ಯಾವುದೇ ಶೌಚಾಲಯಗಳಿಲ್ಲ. ಇಲ್ಲಿ ಕೆಲಸ ಮಾಡುವ ಸಿಬಂದಿ, ವರ್ತಕರು ಶೌಚಾಲಯವಿಲ್ಲದೆ ತೊಂದರೆ ಅನುಭವಿಸುವಂತಾಗಿದೆ.

ಆಜ್ರಿ ಪೇಟೆ ದಿನೇ ದಿನೇ ಬೆಳೆಯುತ್ತಿರುವ ಸಣ್ಣ ಪಟ್ಟಣವಾಗಿದ್ದು, ನಿತ್ಯ ನೂರಾರು ಮಂದಿ ಬೇರೆ ಬೇರೆ ಊರುಗಳಿಂದ ಪೇಟೆಗೆ ಬರುತ್ತಿರುತ್ತಾರೆ. ಇಲ್ಲಿನ ವರ್ತಕರು, ಪೇಟೆಗೆ ಅಗತ್ಯದ ಕೆಲಸಕ್ಕಾಗಿ ಬರುವ ಗ್ರಾಮಸ್ಥರು ಶೌಚಾಲಯವಿಲ್ಲದೆ ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ ಮಾಡುವಂತಾಗಿದೆ. ಇನ್ನು ಬೇರೆ ಬೇರೆ ಮಳಿಗೆಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರು, ಯುವತಿಯರು ಸಾರ್ವಜನಿಕ ಶೌಚಾಲಯವಿಲ್ಲದೆ ಭಾರೀ ತೊಂದರೆ ಅನುಭವಿಸುವಂತಾಗಿದೆ.

ಗ್ರಾಮ ಪಂಚಾಯತ್‌ ಕಚೇರಿ, ಗ್ರಾಮಕರಣಿಕರ ಕಚೇರಿ, ಅಂಚೆ ಕಚೇರಿ, ಸಹಕಾರಿ ಸಂಘ-ಸಂಸ್ಥೆಗಳು, ಪಶು ವೈದ್ಯಕೀಯ ಆಸ್ಪತ್ರೆ, ಹಾಲು ಉತ್ಪಾದಕರ ಸಹಕಾರಿ ಸಂಘ, ಉಪ ಆರೋಗ್ಯ ಕೇಂದ್ರ, ಪಡಿತರ ಅಂಗಡಿಗಳಿವೆ. ಇನ್ನು 16 ಅಂಗಡಿಗಳು, 1 ಮೆಡಿಕಲ್‌ ಹಾಗೂ 6 ಹೊಟೇಲ್‌ಗ‌ಳು ಇಲ್ಲಿವೆ. ಇಲ್ಲಿನ ಕೆಲಸಕ್ಕಾಗಿ ನಿತ್ಯ ಪೇಟೆಗೆ ಬರುವ ಜನರಿಗೆ ಸಾರ್ವಜನಿಕ ಶೌಚಾಲಯ ಇಲ್ಲದಿರುವುದರಿಂದ ಸಮಸ್ಯೆಯಾಗುತ್ತಿದೆ.

ಗ್ರಾಮಸಭೆಯಲ್ಲೂ ಪ್ರಸ್ತಾವ :

ಆಜ್ರಿ ಪೇಟೆಯಲ್ಲಿ ಸಾರ್ವಜನಿಕ ಶೌಚಾಲಯವಿಲ್ಲದೆ ಇಲ್ಲಿನ ವ್ಯಾಪಾರ ಮಳಿಗೆಗಳ ಮಾಲಕರು, ಕೆಲಸಗಾರರು, ರಿಕ್ಷಾ ಚಾಲಕರು, ಗ್ರಾಮಸ್ಥರು ಅನುಭವಿಸುವ ತೊಂದರೆಯ ಬಗ್ಗೆ ಗ್ರಾಮಸಭೆಯಲ್ಲೂ ಪ್ರಸ್ತಾವವಾಗಿತ್ತು. ಆದರೆ ಶೌಚಾಲಯ ಬೇಡಿಕೆ ಈಡೇರಿಸುವ ಸಂಬಂಧ ಯಾವುದೇ ಬೆಳವಣಿಗೆ ಮಾತ್ರ ಆಗಿಲ್ಲ.

ಇತರ ಸಮಸ್ಯೆಗಳೇನು? :

  • ಆಜ್ರಿ ಪೇಟೆಯಲ್ಲಿ ಚರಂಡಿ ಸಮಸ್ಯೆಯಿದ್ದು, ಮಳೆಗಾಲದಲ್ಲಿ ಮಳೆ ನೀರು ಹರಿದು ಹೋಗಲು ಸರಿಯಾದ ವ್ಯವಸ್ಥೆಯೇ ಇಲ್ಲ. ಇದರಿಂದಾಗಿ ಮಳೆ ನೀರೆಲ್ಲ ಪೇಟೆಯಲ್ಲಿಯೇ ನಿಂತು ಜನರಿಗೆ ತೊಂದರೆಯಾಗುತ್ತಿದೆ.
  • ಆಜ್ರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಇನ್ನೂ ಸಹ ತ್ಯಾಜ್ಯ ವಿಲೇವಾರಿ ಘಟಕ ಆರಂಭಗೊಂಡಿಲ್ಲ. ಇದರಿಂದಾಗಿ ಎಲ್ಲೆಂದರಲ್ಲಿ ಕಸದ ರಾಶಿ ಬಿದ್ದಿದೆ.
  • ಪಂಚಾಯತ್‌ ವ್ಯಾಪ್ತಿಯ ಕೆಲವೊಂದು ರಸ್ತೆಗಳು ಅಭಿವೃದ್ಧಿಯಾಗಬೇಕಿದೆ.
  • ಶೌಚಾಲಯವಿಲ್ಲದೆ ಜನರು ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ ಮಾಡುವುದರಿಂದ ನೈರ್ಮಲ್ಯದ ಕೊರತೆಯೂ ಕಾಡುತ್ತಿದೆ.

ತುಂಬಾ ಸಮಸ್ಯೆ :

ಆಜ್ರಿ ಪೇಟೆಯಲ್ಲಿ ಸಾರ್ವಜನಿಕ ಶೌಚಾಲಯವಿಲ್ಲದ ಕಾರಣ ಇಲ್ಲಿಗೆ ಬರುವ ಜನ, ಇಲ್ಲಿನ ಅಂಗಡಿಗಳಲ್ಲಿ ಕೆಲಸ ಮಾಡುತ್ತಿರುವವರು, ಅದರಲ್ಲೂ ಮಹಿಳೆಯರು, ಯುವತಿಯರು ತುಂಬಾ ಸಮಸ್ಯೆ ಅನುಭವಿಸುವಂತಾಗಿದೆ. ಈ ಸಮಸ್ಯೆಯನ್ನು ಸ್ಥಳೀಯಾಡಳಿತ ಹಾಗೂ ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ಆಜ್ರಿ ಪೇಟೆಗೆ ಆದಷ್ಟು ಬೇಗ ಸಾರ್ವಜನಿಕ ಶೌಚಾಲಯವನ್ನು ನಿರ್ಮಿಸಿಕೊಡಲಿ. ಆಜ್ರಿಯ ವರ್ತಕರು, ಗ್ರಾಮಸ್ಥರು

ಜಿ.ಪಂ.ಗೆ  ಪ್ರಸ್ತಾವನೆ ಸಲ್ಲಿಕೆ :

ಆಜ್ರಿ ಪೇಟೆಯಲ್ಲಿ ಸಾರ್ವಜನಿಕ ಶೌಚಾಲಯದ ಬೇಡಿಕೆ ಬಗ್ಗೆ ಗಮನದಲ್ಲಿದ್ದು, ಈ ಬಗ್ಗೆ ವರ್ತಕರು, ಗ್ರಾಮಸ್ಥರಿಂದ ಮನವಿ ಸಲ್ಲಿಕೆಯಾಗಿದೆ. ಗ್ರಾಮಸಭೆಯಲ್ಲೂ ಪ್ರಸ್ತಾಪವಾಗಿದೆ. ಈ ಸಂಬಂಧ ಪಂಚಾಯತ್‌ನಿಂದ ಈಗಾಗಲೇ ಜಿಲ್ಲಾ ಪಂಚಾಯ ತ್‌ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದಷ್ಟು ಬೇಗ ಸ್ವತ್ಛ ಭಾರತ್‌ ಮಿಷನ್‌ ಯೋಜನೆಯಡಿ ಶೌಚಾಲಯ ಮಂಜೂರಾಗುವ ನಿರೀಕ್ಷೆಯಿದೆ.  – ಗೋಪಾಲ ದೇವಾಡಿಗ, ಪಿಡಿಒ ಆಜ್ರಿ ಗ್ರಾ.ಪಂ.

 

-ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

11

Missing Case: ಪತಿ ನಾಪತ್ತೆ; ಪತ್ನಿಯ ದೂರು

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

9

Kota: ಶಿರಿಯಾರ; ಅಕ್ರಮ ಗಣಿಗಾರಿಕೆಗೆ ದಾಳಿ

POlice

Gangolli: ಅಕ್ರಮ ಕೆಂಪು ಕಲ್ಲು ಸಾಗಾಟ; ಪ್ರಕರಣ ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.