ಕುಂದಾಪುರ: ಬೆಳಕಿಲ್ಲದ ರಸ್ತೆಯಲ್ಲಿ ಮತ್ತೊಂದು ಬಲಿ; ಕಾರು ಢಿಕ್ಕಿಯಾಗಿ ವ್ಯಕ್ತಿ ಸಾವು
Team Udayavani, Mar 4, 2022, 7:00 AM IST
ಕುಂದಾಪುರ: ಕತ್ತಲ ಕೂಪದಂತಿರುವ ಕುಂದಾಪುರದ ಹೆದ್ದಾರಿಯಲ್ಲಿ ಗುರುವಾರ ರಾತ್ರಿ ಮತ್ತೂಂದು ಅವಘಡ ಸಂಭವಿಸಿದೆ. ಪಾದಚಾರಿಗೆ ಕಾರು ಢಿಕ್ಕಿಯಾಗಿ ಸ್ಥಳದಲ್ಲೇ ಪಾದಚಾರಿ ಸಾವನ್ನಪ್ಪಿದ ದುರ್ಘಟನೆ ರಾಷ್ಟ್ರೀಯ ಹೆದ್ದಾರಿಯ ನೆಹರೂ ಮೈದಾನ ಸಮೀಪ ನಡೆದಿದೆ.
ರಾಮದುರ್ಗ ಮೂಲದ ಕೂಲಿ ಕಾರ್ಮಿಕನಾಗಿದ್ದ ಶಿವಪ್ಪ (32) ಮೃತ ಪಟ್ಟವರು.
ರಾತ್ರಿ ಸುಮಾರು 7.45ರ ವೇಳೆಗೆ ಹೆದ್ದಾರಿ ಬದಿ ನಡೆದುಕೊಂಡು ಹೋಗುತ್ತಿದ್ದ ಯುವಕನಿಗೆ ಉಡುಪಿ ಕಡೆಯಿಂದ ಬಂದ ಕಾರು ಢಿಕ್ಕಿಯಾಗಿದ್ದು, ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಘಟನ ಸ್ಥಳಕ್ಕೆ ಕುಂದಾಪುರ ಸಂಚಾರಿ ಠಾಣಾ ಎಸ್‌ಐ ಸುಧಾಪ್ರಭು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಬೀದಿ ದೀಪವಿಲ್ಲದ್ದೇ ಕಾರಣ :
ಕುಂದಾಪುರದ ಮೇಲ್ಸೆತುವೆ ಕಾಮಗಾರಿ ಮುಗಿದು, ಸಂಚಾರ ಆರಂಭಗೊಂಡು ಸರಿ ಸುಮಾರು ಒಂದು ವರ್ಷ ಆಗುತ್ತಿದೆ. ಇನ್ನೂ ಸಹ ಫ್ಲೈಓವರ್, ಅಂಡರ್‌ಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿಗೆ ಕಾಮಗಾರಿಯ ಗುತ್ತಿಗೆ ವಹಿಸಿಕೊಂಡವರು ಬೀದಿ ದೀಪದ ವ್ಯವಸ್ಥೆ ಮಾಡಿಲ್ಲ. ಹೆದ್ದಾರಿಯಲ್ಲಿ ದಾರಿ ದೀಪವಿಲ್ಲದೆ ಇರುವುದರಿಂದ ವಾಹನ ಚಾಲಕರಿಗೆ ಪಾದಚಾರಿಗಳು ಕಾಣಿಸದೆ, ಅಪಘಾತಗಳು ಸಂಭವಿಸುತ್ತವೆ. ಬೆಳಕಿನ ವ್ಯವಸ್ಥೆ ಅಳವಡಿಸಲು ಹೆದ್ದಾರಿ ಪ್ರಾಧಿಕಾರದ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. “ಉದಯವಾಣಿ’ಯು ಈ ಬಗ್ಗೆ ಅನೇಕ ಬಾರಿ ವಿಶೇಷ ವರದಿ ಪ್ರಕಟಿಸಿತ್ತು.
ಆಕ್ರೋಶ :
ಇದು ಫ್ಲೈಓವರ್‌ನಲ್ಲಿ ಸಂಚಾರ ಆರಂಭಗೊಂಡ ಬಳಿಕ 6ನೇ ಅಪಘಾತ ಎನ್ನಲಾಗಿದೆ. ಬೀದಿದೀಪದ ವ್ಯವಸ್ಥೆಯಿಲ್ಲದೆ ಸಾಲು – ಸಾಲು ಅಪಘಾತ ವಾಗುತ್ತಿದ್ದರೂ, ಗಂಭೀರವಾಗಿ ಪರಿಗಣಿಸದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.