ಬಾಳೆಬರೆ ಘಾಟಿ: ವಾಹನ ಸಂಚಾರ ಆರಂಭ… ಕಾಮಗಾರಿಗಾಗಿ ಫೆ. 5ರಿಂದ ಮುಚ್ಚಿದ್ದ ರಸ್ತೆ
Team Udayavani, Apr 17, 2023, 7:40 AM IST
ಕುಂದಾಪುರ: ಕರಾವಳಿ ಹಾಗೂ ಮಲೆನಾಡನ್ನು ಬೆಸೆಯುವ ಬಾಳೆಬರೆ (ಹುಲಿಕಲ್) ಘಾಟಿಯ ಕಾಂಕ್ರಿಟೀಕರಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಶನಿವಾರ ರಾತ್ರಿಯಿಂದ ವಾಹನ ಸಂಚಾರ ಮತ್ತೆ ಆರಂಭಗೊಂಡಿದೆ.
ಕಾಂಕ್ರಿಟೀಕರಣ, ರಕ್ಷಣೆಯ ತಡೆಗೋಡೆ, ಚರಂಡಿ ಮತ್ತಿತರ ಕಾಮಗಾರಿಗಳಾಗಿ ಫೆ. 5ರಿಂದ ಎ. 5ರ ವರೆಗೆ ಈ ಘಾಟಿಯಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದರು. ಆ ಬಳಿಕ ಎ. 5ರಂದು ಕಾಮಗಾರಿ ಪೂರ್ಣಗೊಳ್ಳದ ಕಾರಣ ಮತ್ತೆ 10 ದಿನಗಳ ವರೆಗೆ ಸಂಚಾರ ನಿಷೇಧಿಸಲಾಗಿತ್ತು. ಈಗ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.
3.5 ಕಿ.ಮೀ. ಕಾಮಗಾರಿ
ಕುಂದಾಪುರ – ತೀರ್ಥಹಳ್ಳಿ ರಾಜ್ಯ ಹೆದ್ದಾರಿ ಹಾದುಹೋಗುವ ಬಾಳೆಬರೆ ಘಾಟಿಯ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ 3 ಕೋ.ರೂ. ವೆಚ್ಚದಲ್ಲಿ ಅಂದಾಜು 1 ಕಿ.ಮೀ. ಹಾಗೂ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ 10 ಕೋ.ರೂ. ವೆಚ್ಚದಲ್ಲಿ 2.5 ಕಿ.ಮೀ. ಸೇರಿದಂತೆ ಒಟ್ಟು 3.5 ಕಿ.ಮೀ. ದೂರದವರೆಗೆ ರಸ್ತೆ ಅಗಲ, ಕಾಂಕ್ರಿಟೀಕರಣ, ರಕ್ಷಣೆಯ ತಡೆಗೋಡೆ ನಿರ್ಮಾಣ ಕಾರ್ಯ ನಡೆದಿದೆ.
3.5 ಕಿ.ಮೀ. ಅಭಿವೃದ್ಧಿ ಬಾಕಿ
ಬಾಳೆಬರೆ ಘಾಟಿಯು ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆ ಸೇರಿ ಹುಲಿಕಲ್ ಚೆಕ್ ಪೋಸ್ಟ್ನಿಂದ ಹೊಸಂಗಡಿಯ ಘಾಟಿಯ ಬುಡದ ವರೆಗೆ 14.5 ಕಿ.ಮೀ. ದೂರವಿದೆ. ಶಿವಮೊಗ್ಗ ಜಿಲ್ಲೆಯ 8 ಕಿ.ಮೀ. ಪೈಕಿ ಈ ಹಿಂದೆ ಸ್ವಲ್ಪ ಕಾಂಕ್ರಿಟೀಕರಣ ಆಗಿದ್ದು, ಈಗ ಬಾಕಿಯಿದ್ದ 2.5 ಕಿ.ಮೀ.ನೊಂದಿಗೆ ಕಾಂಕ್ರಿಟೀಕರಣಗೊಂಡಿದೆ. ಉಡುಪಿ ಜಿಲ್ಲೆಯ 6.5 ಕಿ.ಮೀ. ಘಾಟಿಯ ಪೈಕಿ ಈ ಹಿಂದೆ 2 ಕಿ.ಮೀ., ಈಗ 1 ಕಿ.ಮೀ. ಸೇರಿದಂತೆ ಒಟ್ಟು 3 ಕಿ.ಮೀ. ಕಾಂಕ್ರಿಟೀಕರಣಗೊಂಡಂತಾಗಿದೆ. ಇನ್ನು ಜಿಲ್ಲೆಯ ವ್ಯಾಪ್ತಿಯಲ್ಲಿ 3.5 ಕಿ.ಮೀ. ಘಾಟಿ ರಸ್ತೆ ಕಾಂಕ್ರಿಟೀಕರಣ ಬಾಕಿ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.