ಬೆಳ್ವೆ: ವಿದ್ಯಾರ್ಥಿ ಅಪಹರಣಕ್ಕೆ ಯತ್ನ?

Team Udayavani, Nov 17, 2019, 3:21 AM IST

nn-43

ಸಿದ್ದಾಪುರ: ಬೆಳ್ವೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿಯ ವಿದ್ಯಾರ್ಥಿ ಹರ್ಷಿತ್‌ (12) ಎಂಬಾತನನ್ನು ಆಮ್ನಿ ಕಾರಿನಲ್ಲಿ ಬಂದಿದ್ದ ತಂಡವೊಂದು ಅಪಹರಣ ಮಾಡಲು ಯತ್ನಿಸಿದೆ ಎಂದು ಹೇಳಲಾಗಿದ್ದು, ಈ ಸಂಬಂಧ ಶಂಕರ ನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ವಿವರ
ಹರ್ಷಿತ್‌ ಶನಿವಾರ ಬೆಳಗ್ಗೆ 8.30ರ ಸುಮಾರಿಗೆ ಮನೆಯಿಂದ ಶಾಲೆಗೆ ಬರುತ್ತಿದ್ದಾಗ ಬೆಳ್ವೆ ಗುಮ್ಮೊಲ ರಸ್ತೆಯ ಬದಿಯಲ್ಲಿ ನೀಲಿ ಬಣ್ಣದ ಆಮ್ನಿ ಕಾರು ನಿಂತಿತ್ತು. ಅದರೊಳಗಿದ್ದ ಓರ್ವನು ಬಾಲಕನಿಗೆ ಕಾರು ಹತ್ತುವಂತೆ ಹೇಳಿದ್ದು, ಹರ್ಷಿತ್‌ ಒಪ್ಪದಾಗ ಆತನಿಗೆ ಹೊಡೆದು ಯಾವುದೋ ದ್ರಾವಣ ಸಿಂಪಡಿಸಿ ಹೋಗಿದ್ದಾ ರೆಂದು ಆರೋಪಿಸಲಾಗಿದೆ.

ಸ್ವಲ್ಪ ಹೊತ್ತು ಕಳೆದು ಗುಮ್ಮೊಲ್‌ ಮಾರ್ಗವಾಗಿ ಬೆಳ್ವೆ ಕಡೆಗೆ ಸ್ಕೂಟಿಯಲ್ಲಿ ಬರುತ್ತಿದ್ದ ಯುವತಿಯರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಹುಡುಗನನ್ನು ಗಮನಿಸಿ ಬೆಳ್ವೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೇರಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹೆಬ್ರಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತ ಚೇತರಿಸಿಕೊಂಡಿದ್ದು ಆಸ್ಪತ್ರೆಯಿಂದ ಮನೆಗೆ ಮರಳಿದ್ದಾನೆ.

ಬೆಳ್ವೆ ಗ್ರಾಮದ ದೇವಸ್ಥಾನಬೆಟ್ಟು ರಾಜೀವ ಪೂಜಾರಿ ಅವರ ಮೂವರು ಮಕ್ಕಳಲ್ಲಿ ಕೊನೆಯವನಾಗಿರುವ ಹರ್ಷಿತ್‌ ಪ್ರತಿನಿತ್ಯ ಇದೇ ಮಾರ್ಗವಾಗಿ ಬೆಳ್ವೆ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದಾನೆ.

ಶಂಕರನಾರಾಯಣ ಹಾಗೂ ಅಮಾಸೆಬೈಲು ಪೊಲೀಸರು ಘಟನ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಸರದಲ್ಲಿರುವ ಸಿಸಿಕೆಮರಾಗಳನ್ನು ಪರಿಶೀಲಿಸಿದ್ದಾರೆ. ವಿದ್ಯಾರ್ಥಿಯ ತಾಯಿ ಸುಮತಿ ಪೂಜಾರಿ ನೀಡಿರುವ ದೂರಿನಂತೆ ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭಯದ ವಾತಾವರಣ
ತನಗೆ ಕಾರಿನಲ್ಲಿ ಬಂದವರು ಹೊಡೆದು ಮುಖಕ್ಕೆ ದ್ರಾವಣ ಸಿಂಪಡಿಸಿ ಹೋಗಿದ್ದಾರೆ ಎಂದು ಬಾಲಕ ಹೇಳಿರುವುದರಿಂದ ಪರಿಸರದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಪೊಲೀಸರು ಸೂಕ್ತ ತನಿಖೆ ಮಾಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

arest

Kundapura: ಅರಣ್ಯ ದಳದ ಸಿಬಂದಿಗೆ ಹಲ್ಲೆ: ಮತ್ತೋರ್ವನ ಬಂಧನ

dw

Siddapura: ವಿದ್ಯುತ್‌ ಲೈನಿಗೆ ಕೊಕ್ಕೆ ತಾಗಿ ಕಾರ್ಮಿಕ ಸಾವು

byndoor

Siddapura: ಪಾದಚಾರಿಗೆ ಪಿಕಪ್‌ ವಾಹನ ಢಿಕ್ಕಿ; ಗಂಭೀರ

12-

Kundapura: ಬಸ್‌ನಲ್ಲೇ ಹೃದಯಾಘಾತ; ಸಮಯಪ್ರಜ್ಞೆ ಮೆರೆದ ಬಸ್‌ ಚಾಲಕ, ಸಾರ್ವಜನಿಕರ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.