ಶವ ಬದಲು ಪ್ರಕರಣ: ಜಿಲ್ಲಾಡಳಿತ ವಿಷಾದ


Team Udayavani, Aug 25, 2020, 5:59 AM IST

ಶವ ಬದಲು ಪ್ರಕರಣ: ಜಿಲ್ಲಾಡಳಿತ ವಿಷಾದ

ಕುಂದಾಪುರ: ಕೋವಿಡ್‌ನಿಂದ ಮೃತಪಟ್ಟ ನೇರಂಬಳ್ಳಿಯ ವ್ಯಕ್ತಿಯ ಶವದ ಬದಲು ಇನ್ನೊಂದು ಶವ ತಂದೊಪ್ಪಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಮನೆಯವರ ಬಳಿ ವಿಷಾದ ವ್ಯಕ್ತಪಡಿಸಿದೆ. ಜಿಲ್ಲಾಧಿಕಾರಿ ಜಿ. ಜಗದೀಶ್‌ ಹೇಳಿಕೆ ನೀಡಿ, ಮೃತರ ಮಗನನ್ನು ಸಂಪರ್ಕಿಸಿ ಘಟನೆಗೆ ವಿಷಾದ ಹೇಳಿ, ಕ್ಷಮೆ ಯಾಚಿಸಿದ್ದೇನೆ. ಇಂತಹ ಘಟನೆ ನಡೆಯಬಾರದು. ಸಂಬಂಧಪಟ್ಟವರಿಗೆ ನೋಟಿಸ್‌ ನೀಡಿದ್ದು ಕಾರಣ ಕೇಳಿ ಸೂಕ್ತ ಕ್ರಮ ಕೈಗೊಳ್ಳಲಾಗು ವುದು. ಮುಂದೆ ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಲಾಗುವುದು. ಮೃತದೇಹಗಳ ವಿಲೇವಾರಿಗೆ ಪ್ರತ್ಯೇಕ ಸಮಿತಿ ರಚಿಸಲಾಗಿದ್ದು 80ಕ್ಕೂ ಹೆಚ್ಚು ಶವಗಳನ್ನು ಸೂಕ್ತವಾಗಿ ಹಸ್ತಾಂತರಿಸಲಾಗಿದೆ ಎಂದಿದ್ದಾರೆ.

ಸರ್ಜನ್‌ ಹೇಳಿಕೆ
ಜಿಲ್ಲಾ ಶಸ್ತ್ರಚಿಕಿತ್ಸಕರು ಪ್ರಕಟನೆ ನೀಡಿದ್ದು, ಕೋವಿಡ್‌ ಆಸ್ಪತ್ರೆ ಯಲ್ಲಿ ಮೃತಪಟ್ಟ ಬಳಿಕ ಮೃತದೇಹವನ್ನು ಕವರ್‌ನಲ್ಲಿ ಇರಿಸಿ 9 ದೇಹಗಳನ್ನು ಕಾಪಿಡಬಲ್ಲ ಜಿಲ್ಲಾಸ್ಪತ್ರೆಯ ಶೀತಲೀಕರಣ ಘಟಕದಲ್ಲಿ ಇರಿಸಲಾಗಿತ್ತು. ಮೃತದೇಹಕ್ಕೆ ಕಟ್ಟಿದ ಟ್ಯಾಗ್‌ ಕವರ್‌ನ ಒಳಗೆ ಇದ್ದುದರಿಂದ ಕರ್ತವ್ಯದಲ್ಲಿದ್ದ ಡಿ ಗ್ರೂಪ್‌ ನೌಕರನಿಂದ ಪ್ರಮಾದವಾಗಿದೆ. ತನಿಖೆ ನಡೆಸಿ ಸೂಕ್ತ ಕ್ರಮ ಜರಗಿಸಲಾಗುವುದು. ವೈದ್ಯರು, ಸಿಬಂದಿ ಕೊರೊನಾ ಸಂದರ್ಭ ಒತ್ತಡದಿಂದ ಕೆಲಸ ಮಾಡುತ್ತಿದ್ದು ಸಿಬಂದಿ ಕೊರತೆ ನಡುವೆಯೂ ರಜೆ ಇಲ್ಲದೆ 24 ತಾಸು ದುಡಿಯುತ್ತಿದ್ದಾರೆ. ಸಾರ್ವಜನಿಕ ದೂರುಗಳಿಂದ ಕಾರ್ಯನಿರ್ವಹಿಸಲು ಸಾಧ್ಯವಾಗದೆ ಖನ್ನತೆ ಎದುರಿಸುವಂತಾಗಿದೆ. ರಾಜೀನಾಮೆ ಸಲ್ಲಿಸಿ ತೆರಳಲು ಅನೇಕರು ಸಿದ್ಧರಾಗಿದ್ದಾರೆ. ಆದ್ದರಿಂದ ವೈದ್ಯಕೀಯ ಸಿಬಂದಿಯ ಮನೋಸ್ಥೈರ್ಯ ಕುಂದಿಸುವ ಕೆಲಸವನ್ನು ಯಾರೂ ಮಾಡಬಾರದು ಎಂದಿದ್ದಾರೆ.

ಆಸ್ಪತ್ರೆ ಹೇಳಿಕೆ
ರೋಗಿ ದಾಖಲಾದ ಉಡುಪಿಯ ಡಾ| ಟಿ.ಎಂ.ಎ. ಪೈ ಆಸ್ಪತ್ರೆ ವತಿಯಿಂದ ಹೇಳಿಕೆ ನೀಡಲಾಗಿದ್ದು, ರೋಗಿ ಜು. 30ರಂದು ದಾಖಲಾಗಿದ್ದು ಕೋವಿಡ್‌-19 ಸೋಂಕಿತರಾ ಗಿದ್ದರು. ಬರುವಾಗ ನ್ಯುಮೋನಿಯಾ, ತೀವ್ರವಾದ ಹೈಪೊಕ್ಸಿಯಾ (ರಕ್ತದಲ್ಲಿ ಆಮ್ಲಜನಕ ಕೊರತೆ) ಇತ್ತು. ಸೂಕ್ತ ಚಿಕಿತ್ಸೆ ಪ್ರಾರಂಭಿಸಲಾಗಿತ್ತು. ಅವರು ಕಬ್ಬಿಣದ ಕೆಲಸ ಮಾಡುವವರಾಗಿದ್ದುದರಿಂದ ಶ್ವಾಸಕೋಶ ಮತ್ತು ತೀವ್ರವಾದ ಉಸಿರಾಟದ ತೊಂದರೆ ದಿನ ಕಳೆದಂತೆ ಹೆಚ್ಚಾಯಿತು. ಚಿಕಿತ್ಸೆ ನೀಡಿದ ವೈದ್ಯರ ತಂಡವು ರೋಗಿಯ ಪುತ್ರ ಮತ್ತು ಸೋದರಳಿಯನೊಂದಿಗೆ ಹಲವು ಬಾರಿ ರೋಗಿಯ ಸ್ಥಿತಿ ಬಗ್ಗೆ ಮಾತಾಡಿದ್ದಾರೆ. ರೋಗಿ ಆಯುಷ್ಮಾನ್‌ ಭಾರತ್‌ ಯೋಜನೆಯಡಿಯಲ್ಲಿ ದಾಖಲಾಗಿದ್ದರಿಂದ ಯಾವುದೇ ರೀತಿಯಲ್ಲಿ ಹಣ ಪಾವತಿಸುವಂತೆ ಸಂಬಂಧಿಕರಲ್ಲಿ ಹೇಳಿಲ್ಲ. ಆ. 23ರ ಮುಂಜಾವ 4.43ಕ್ಕೆ ಸಾವು ಸಂಭವಿಸಿದ್ದು ಸಂಬಂಧಿಕರಿಗೆ ಹಸ್ತಾಂತರಿಸಲು 5-6 ಗಂಟೆಗಳು ಬೇಕಾದ್ದರಿಂದ ಮೃತದೇಹವನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ಹಸ್ತಾಂತರಿಸಲಾಗಿದೆ. ಸರಿಯಾದ ಕಾರಣ ತಿಳಿಯದೆ, ರೋಗಿಯ ಕುಟುಂಬ ಸದಸ್ಯರು, ಪುತ್ರ ಚಿಕಿತ್ಸೆ ನೀಡಿದ್ದ ವೈದ್ಯರು ಮತ್ತು ಆಸ್ಪತ್ರೆಯ ವಿರುದ್ಧ ತಪ್ಪಾದ ಮತ್ತು ಬೇಜವಾಬ್ದಾರಿಯುತ ಹೇಳಿಕೆ ನೀಡಿದ್ದಾರೆ. ಆ. 5ರಿಂದ ಈ ವರೆಗೆ ಈ ಆಸ್ಪತ್ರೆಯಲ್ಲಿ ಬೇರೆ ಯಾವುದೇ ಮರಣ ಸಂಭವಿಸಿಲ್ಲದ ಕಾರಣ ನಮ್ಮ ಆಸ್ಪತ್ರೆಯಿಂದ ಬೇರೆ ಮೃತದೇಹವನ್ನು ಕಳುಹಿಸುವ ಸಾಧ್ಯತೆಯೇ ಇಲ್ಲ. ನಾವು ಕೋವಿಡ್‌-19ಕ್ಕೆ ಮೀಸಲಾದ ಆಸ್ಪತ್ರೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದು ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುವ ಪ್ರತಿಯೊಬ್ಬರಿಗೆ ಅಪಾಯವಿದ್ದರೂ ಕೆಲಸ ಮಾಡುತ್ತಿದ್ದೇವೆ ಎಂದು ವೈದ್ಯಕೀಯ ಅಧೀಕ್ಷಕರು ಹೇಳಿಕೆ ನೀಡಿದ್ದಾರೆ.

ದೃಢೀಕರಣದೊಂದಿಗೆ ಶವ ಹಸ್ತಾಂತರ
ಶವ ಅದಲು ಬದಲು ಘಟನೆಗೆ ಗೃಹಸಚಿವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಡಿ ದರ್ಜೆ ಸಿಬಂದಿ ಹಾಗೂ ಆ್ಯಂಬುಲೆನ್ಸ್‌ ಸಿಬಂದಿ ಮಾಡಿದ ತಪ್ಪಿನಿಂದಾಗಿ ಇಡೀ ಜಿಲ್ಲೆ ತಲೆತಗ್ಗಿಸುವಂತಾಗಿದೆ. ಇನ್ನು ಮಂದೆ ಬೆಳಗ್ಗೆ 9ರಿಂದ ಸಂಜೆ 6 ಗಂಟೆಯ ಒಳಗೆ ಮಾತ್ರ ಶವ ಹಸ್ತಾಂತರ ಪ್ರಕ್ರಿಯೆಯನ್ನು ಮನೆಯವರ ಸಮ್ಮುಖದಲ್ಲಿ ಮಾಡಲಾಗುವುದು. ಮನೆಯವರ ದೃಢೀಕರಣದ ಜತೆಗೆ ಆಯಾ ತಾಲೂಕಿನ ಆರೋಗ್ಯ ಅಧಿಕಾರಿಯ ಸಮ್ಮುಖದಲ್ಲಿಯೇ ಶವ ಪಡೆದುಕೊಳ್ಳಬೇಕು ಎಂದು ಶಾಸಕ ರಘುಪತಿ ಭಟ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Dangerous Stunt: ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಬಾಲಕನನ್ನು ಕೂರಿಸಿ ರೀಲ್ಸ್…

Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಏಕದಿನ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಸರಣಿ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

‌Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’

‌Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’

Metro line will pass over 314 houses

Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ

Udupi: A car fell into a huge pothole near Ambalapadi Junction

Udupi: ಅಂಬಲಪಾಡಿ ಜಂಕ್ಷನ್‌ ಬಳಿ ಬೃಹತ್‌ ಹೊಂಡಕ್ಕೆ ಬಿದ್ದ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

crime

Siddapura: ಬೈಕಿಗೆ ಕಾರು ಡಿಕ್ಕಿ; ಸವಾರರು ಗಂಭೀರ

accident2

Gangolli: ಸ್ಕೂಟರ್‌ – ಬೈಕ್‌ ಢಿಕ್ಕಿ; ಗಾಯ

5-kundapura

Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

saavu

New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

Dangerous Stunt: ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಬಾಲಕನನ್ನು ಕೂರಿಸಿ ರೀಲ್ಸ್…

Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.