ನುಕ್ಯಾಡಿ ದೇಗುಲ ಸಂಪರ್ಕ ರಸ್ತೆಗೆ ಕಾಂಕ್ರೀಟ್ ಭಾಗ್ಯ
2.5 ಕೋ.ರೂ. ವೆಚ್ಚದಲ್ಲಿ 2 ಕಿ.ಮೀ. ರಸ್ತೆ ಅಭಿವೃದ್ಧಿ
Team Udayavani, Jun 2, 2022, 10:53 AM IST
ಕುಂದಾಪುರ: ಅಂಪಾರು ಗ್ರಾಮದ ನುಕ್ಯಾಡಿಯ ಉದ್ಭವ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನ ವನ್ನು ಸಂಪರ್ಕಿಸುವ ರಸ್ತೆಯ ಕಾಂಕ್ರೀಟ್ ಕಾಮಗಾರಿ ನಡೆಯುತ್ತಿದೆ. ಆ ಮೂಲಕ ದಶಕಗಳಿಗೂ ಹೆಚ್ಚು ಕಾಲದಿಂದ ಈ ರಸ್ತೆಯ ಅಭಿವೃದ್ಧಿಗೆ ಬೇಡಿಕೆ ಕೇಳಿಬಂದಿದ್ದು, ಈ ಬಾರಿ ಈಡೇರಿದಂತಾಗಿದೆ.
ಅಂಪಾರು – ಶಂಕರನಾರಾಯಣ ರಾಜ್ಯ ಹೆದ್ದಾರಿಯಿಂದ ಒಳಗೆ ಸುಮಾರು 2 ಕಿ.ಮೀ. ದೂರದಲ್ಲಿ ಈ ದೇವಸ್ಥಾನ ವಿದೆ. ಸುಮಾರು 2 ಕಿ.ಮೀ. ದೂರದವರೆಗೆ ಮಣ್ಣಿನ ರಸ್ತೆ ಯಾಗಿಯೇ ಇದ್ದು, ಜನ ಬೇಸಗೆಯಲ್ಲಿ ಧೂಳಿನಿಂದ ಹಾಗೂ ಮಳೆಗಾಲದಲ್ಲಿ ಕೆಸರುಮಯಯಿಂದಾಗಿ ತೊಂದರೆ ಅನುಭವಿಸುತ್ತಿದ್ದರು. ಈಗ ‘ನಮ್ಮ ಗ್ರಾಮ ನಮ್ಮ ರಸ್ತೆ’ ಯೋಜನೆಯಡಿ ಅಭಿವೃದ್ಧಿಯಾಗಿದ್ದು, ದೇಗುಲಕ್ಕೆ ಬರುವ ಭಕ್ತರು, ಸ್ಥಳೀಯ ಜನರಿಗೆ ಅನುಕೂಲವಾಗಲಿದೆ.
ಗುಡ್ಡೆ ಗಣಪತಿ
ನುಕ್ಯಾಡಿಯ ಪ್ರಕೃತಿ ರಮಣೀಯ ಸ್ಥಳದಲ್ಲಿ ನೆಲೆ ನಿಂತ ಉದ್ಭವ ಶ್ರೀ ಸಿದ್ಧಿ ವಿನಾಯಕ ದೇವರು ನಂಬಿದ ಭಕ್ತರಿಗೆ ಸಂತಾನ ಭಾಗ್ಯ ಕರುಣಿಸುವ ದೇವರಾಗಿ, ಗುಡ್ಡೆ ಗಣಪತಿಯೆಂದೇ ಪ್ರಖ್ಯಾತಿ ಪಡೆದಿದ್ದಾನೆ. ಸಂತಾನ ಪ್ರಾಪ್ತಿಯಾದರೆ ಗಂಟೆ ಒಪ್ಪಿಸುವ ಹರಕೆಯೂ ಇದೆ. ಇಲ್ಲಿಗೆ ಅಂಪಾರು, ಶಂಕರನಾರಾಯಣ, ಹಾಲಾಡಿ, ಉಳ್ಳೂರು 74, ಸಿದ್ದಾಪುರ, ಕ್ರೋಢಬೈಲೂರು, ವಾಲ್ತೂರು, ಕಾವ್ರಾಡಿ ಮತ್ತಿತರ ಗ್ರಾಮಗಳ ಭಕ್ತರು ಸೇರಿದಂತೆ ಕುಂದಾಪುರ, ತೀರ್ಥಹಳ್ಳಿಯಿಂದಲೂ ಭಕ್ತರು ಬರುತ್ತಾರೆ.
ಸುದಿನ ವರದಿ
ನುಕ್ಯಾಡಿ ಶ್ರೀ ಸಿದ್ಧಿ ವಿನಾಯಕ ದೇಗುಲವನ್ನು ಸಂಪರ್ಕಿಸುವ ರಸ್ತೆ ಕಾಂಕ್ರೀಟ್ ಕಾಮಗಾರಿ ಬೇಡಿಕೆ ಬಗ್ಗೆ ‘ಉದಯವಾಣಿ ಸುದಿನ’ವು ಕಳೆದ ವರ್ಷದ ಜ. 30ರಂದು ‘ನುಕ್ಯಾಡಿ ದೇಗುಲ: ಸಂಪರ್ಕ ರಸ್ತೆ ಅಭಿವೃದ್ಧಿ ಬೇಡಿಕೆ’ ಎನ್ನುವುದಾಗಿ ವಿಶೇಷ ವರದಿ ಪ್ರಕಟಿಸಿತ್ತು.
ಈಶ್ವರಪ್ಪರಿಂದ ಅನುದಾನ
ನುಕ್ಯಾಡಿಯ ಉದ್ಭವ ಶ್ರೀ ಸಿದ್ಧಿ ವಿನಾಯಕ ದೇಗುಲಕ್ಕೆ ಕಳೆದ ವರ್ಷದ ಜನವರಿಯಲ್ಲಿ ಆಗ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿದ್ದ ಕೆ.ಎಸ್. ಈಶ್ವರಪ್ಪ ಭೇಟಿ ನೀಡಿದ್ದರು. ಈ ವೇಳೆ ರಸ್ತೆ ಅಭಿವೃದ್ಧಿ ಬಗ್ಗೆ ದೇವಸ್ಥಾನ ಹಾಗೂ ಊರವರಿಂದ ಮನವಿ ಸಲ್ಲಿಸಲಾಗಿತ್ತು. ಆಗ ಮಾಡಿಕೊಡುವ ಭರವಸೆ ನೀಡಿದ್ದರು. ‘ನಮ್ಮ ಗ್ರಾಮ ನಮ್ಮ ರಸ್ತೆ’ಯಡಿ 2.5 ಕೋ.ರೂ. ಅನುದಾನವನ್ನು ಮಂಜೂರು ಮಾಡಿದ್ದರು. ದೇವಸ್ಥಾನದ ಆಡಳಿತ ಮಂಡಳಿ, ಅರ್ಚಕ ವೃಂದ, ಭಕ್ತರು ಮಾಜಿ ಸಚಿವ ಈಶ್ವರಪ್ಪ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಇದಕ್ಕೂ ಹಿಂದೆ 2012ರಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮುತುವರ್ಜಿಯಲ್ಲಿ ಸುಮಾರು 500 ಮೀ. ದೂರದವರೆಗೆ ಡಾಮರು ಕಾಮಗಾರಿಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.