ಬೈಂದೂರು ಕ್ಷೇತ್ರದ ವಿವಿಧ ಕಡೆ ಕಾಂಗ್ರೆಸ್ ಭರ್ಜರಿ ರೋಡ್‌ ಶೋ

ಗೋಪಾಲ ಪೂಜಾರಿ ಪರ ಹೆಚ್ಚಿದ ಮತದಾರರ ಉತ್ಸಾಹ

Team Udayavani, May 7, 2023, 3:16 PM IST

1–fsdfsdf

ಬೈಂದೂರು: ಬೈಂದೂರು ಕಾಂಗ್ರೆಸ್ ಅಭ್ಯರ್ಥಿ ಕೆ.ಗೋಪಾಲ ಪೂಜಾರಿ ಬೈಂದೂರು ಭಾಗದಲ್ಲಿ ಭರ್ಜರಿ ರೋಡ್‌ ಶೋ ನಡೆಸಿದರು.ಸಾವಿರಾರು ಕಾರ್ಯಕರ್ತರು ವಾಹನ ಜಾಥಾ ಮೂಲಕ ಪ್ರಚಾರದಲ್ಲಿ ಭಾಗವಹಿಸಿದರು.ರಸ್ತೆಯುದ್ದಕ್ಕೂ ಮಹಿಳೆಯರು,ಹಿರಿಯರು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಹೂ ನೀಡಿ ಪ್ರೀತಿಯಿಂದ ಸ್ವಾಗತಿಸುವ ಮೂಲಕ ಬೆಂಬಲ ಸೂಚಿಸಿದರು.ಮಾತ್ರವಲ್ಲದೆ ಕ್ಷೇತ್ರಾದ್ಯಂತ ಗೋಪಾಲ ಪೂಜಾರಿಯವರ ವ್ಯಕ್ತಿತ್ವ ಹಾಗೂ ಸರಳತೆ ಕುರಿತು ಅಪಾರ ಬೆಂಬಲ ವ್ಯಕ್ತವಾಗಿದೆ.

ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಬೈಂದೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಗೋಪಾಲ ಪೂಜಾರಿ ನಾನು ಹಣ ಮಾಡುವ ಉದ್ದೇಶದಿಂದ ರಾಜಕೀಯಕ್ಕೆ ಬಂದಿಲ್ಲ.ನಾಲ್ಕು ಬಾರಿ ಈ ಕ್ಷೇತ್ರದ ಶಾಸಕನಾಗಿ ಸೇವೆ ಸಲ್ಲಿಸಿದ್ದೇನೆ.ರಾಜಕೀಯ ಹಾಗೂ ಉದ್ಯಮದಲ್ಲಿ ಸೋಲು ಕಂಡಾಗಲು ಕ್ಷೇತ್ರಬಿಟ್ಟು ತೆರಳಲಿಲ್ಲ.ಕಷ್ಟದಲ್ಲಿದ್ದಾಗಲು ಕ್ಷೇತ್ರದ ಜನ ಸಮಸ್ಯೆಯಲ್ಲಿದ್ದಾಗ ಸ್ಪಂಧಿಸಿದ್ದೇನೆ.ನಾನು ಕಾಲು ಮುರಿದುಕೊಂಡು ಕಷ್ಟದಲ್ಲಿದ್ದಾಗ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು,ಕಾರ್ಯಕರ್ತರು ನನಗೆ ದೈರ್ಯ ತುಂಬಿ ಸಾಂತ್ವನ ಹೇಳಿದ್ದಾರೆ.ಕಷ್ಟದ ಕಾಲದಲ್ಲೂ ಕೈ ಬಿಡದ ಬೈಂದೂರು ಜನತೆ ನನ್ನ ರಾಜಕೀಯ ಜೀವನದ ಕೊನೆಯ ಚುನಾವಣೆಯಲ್ಲಿ ಪ್ರಚಂಡ ಬಹುಮತದ ಮೂಲಕ ಆಶೀರ್ವಾದ ನೀಡುವ ವಿಶ್ವಾಸವಿದೆ ಎಂದರು.

ಬಿಜೆಪಿಯಿಂದ ವ್ಯಾಪಕ ಅಪಪ್ರಚಾರ
ಬೈಂದೂರು ಕ್ಷೇತ್ರದಲ್ಲಿ ಬಿಜೆಪಿಗೆ ಜನರಲ್ಲಿ ಮತ ಕೇಳುವ ಯಾವ ನೈತಿಕತೆಯೂ ಇಲ್ಲವಾಗಿದೆ.ಗ್ಯಾಸ್‌ ಸಿಲಿಂಡರ್‌ ಬೆಲೆ ಗಗನಕ್ಕೆ ಏàರಿದೆ.ದಿನಸಿ ವಸ್ತುಗಳು ದುಬಾರಿಯಾಗಿದೆ.ಹೀಗಾಗಿ ಜನಸಾಮಾನ್ಯರು ಬಿಜೆಪಿ ಸರಕಾರವನ್ನು ತ್ಯಜಿಸುತ್ತಿದ್ದಾರೆ.ಗೋಪಾಲ ಪೂಜಾರಿಯವರ ಜನಪ್ರಿಯತೆಯನ್ನು ಸಹಿಸದ ಬಿಜೆಪಿಗರು ಸುಳ್ಳು ಪ್ರಚಾರ ಸೇರಿದಂತೆ ಅಪಪ್ರಚಾರದಲ್ಲಿ ತೊಡಗಿದ್ದಾರೆ.ಆದರೆ ಬೈಂದೂರು ಕ್ಷೇತ್ರದ ಮತದಾರರು ಗೋಪಾಲ ಪೂಜಾರಿಯವರ ಪರ ಅಪಾರ ಒಲವು ಹೊಂದಿದ್ದಾರೆ.2013ರ ಚುನಾವಣೆಯಲ್ಲಿ ಮೊವತ್ತೂಂದು ಸಾವಿರದ ಮತಗಳ ಅಂತರದಲ್ಲಿ ಗೆಲುವು ಗಳಿಸಿದ್ದೇವು.ಈ ಬಾರಿ ಐವತ್ತುಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದೆ.ಪ್ರತಿ ಬೂತ್‌ ಮಟ್ಟದಲ್ಲೂ ಕಾಂಗ್ರೇಸ್‌ ಪರ ಅಲೆ ಇದೆ.ಈ ಕ್ಷೇತ್ರದಲ್ಲಿ ನಾಲ್ಕು ಬಾರಿ ಶಾಸಕನಾಗಿ ಸೇವೆ ನೀಡಿದ ಪೂಜಾರಿಯವರನ್ನು ಅವರ ಜೀವನದ ಕೊನೆಯ ಚುನಾವಣೆಯಲ್ಲಿ ಪ್ರಚಂಡ ಬಹುಮತದಿಂದ ಗೆಲ್ಲಿಸುತ್ತಾರೆ ಎಂದು ಬೈಂದೂರು ಬ್ಲಾಕ್‌ ಕಾಂಗ್ರೇಸ್‌ ಅಧ್ಯಕ್ಷ ಎಸ್‌.ಮದನ್‌ ಕುಮಾರ್‌ ಹೇಳಿದ್ದಾರೆ.

ಬೈಂದೂರು ಕ್ಷೇತ್ರದಲ್ಲಿ ನಿರೀಕ್ಷಿತ ಗೆಲುವು
ಈ ಚುನಾವಣೆಯಲ್ಲಿ ಕೆ.ಗೋಪಾಲ ಪೂಜಾರಿ ಯವರು ಮಾಡಿದ ಅಭಿವೃದ್ದಿ ಹಾಗೂ ಅವರು ಕ್ಷೇತ್ರದ ಜನರ ಜೊತೆ ಇಟ್ಟುಕೊಂಡಿರುವ ನಿರಂತರ ಸಂಪರ್ಕ ಹಾಗೂ ಕಾಂಗ್ರೆಸ್ ಪಕ್ಷದ ಗ್ಯಾರೆಂಟಿ ಯೋಜನೆಗಳು ಮತದಾರರ ವಿಶ್ವಾಸಗಳಿಸಿದೆ.ವಂಡ್ಸೆ ಬ್ಲಾಕ್‌ನ 120 ಮತಗಟ್ಟೆಗಳಲ್ಲಿಯೂ ಅತೀ ಹೆಚ್ಚಿನ ಅಂತರದಲ್ಲಿ ಮುನ್ನೆಡೆ ನೀಡಲಿದ್ದೇವೆ ಎಂದು ವಂಡ್ಸೆ ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್‌ ಕುಮಾರ್‌ ಶೆಟ್ಟಿ ಹೇಳಿದ್ದಾರೆ.

ಬೈಂದೂರು ಬಿಜೆಪಿಯಲ್ಲಿ ನಿಲ್ಲದ ಗೊಂದಲ,ಪ್ರಚಾರದಿಂದ ಹಿಂದೆ ಸರಿದ ಪ್ರಮುಖ ಮುಖಂಡರು: ಬೈಂದೂರು ಬಿಜೆಪಿಯಲ್ಲಿ ಚುನಾವಣೆ ಸಮೀಪಿಸುತ್ತಿದ್ದರು ಕೂಡ ಗೊಂದಲ ನಿವಾರಣೆಯಾಗಿಲ್ಲ.ಈಗಾಗಲೇ ಬಿಜೆಪಿಯಲ್ಲಿ ಪ್ರಮುಖ ಹುದ್ದೆಯಲ್ಲಿರುವ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.ಮಂಡಲ ಅಧ್ಯಕ್ಷರು ಸೇರಿದಂತೆ ಪ್ರಮುಖ ನಾಯಕರು ಬಿಜೆಪಿಯ ಪ್ರಚಾರದಿಂದ ಹಿಂದೆ ಸರಿದಿದ್ದಾರೆ.ಬಿಜೆಪಿಯ ಅಸಮಾಧಾನ ಚುನಾವಣೆ ಸಮೀಪಿಸುತ್ತಿದ್ದಂತೆ ಜಾಸ್ತಿಯಾಗತೊಡಗಿದೆ.ಮಾತ್ರವಲ್ಲದೆ ಹಿಂದಿನಿಂದಲೂ ಪಕ್ಷ ಸಂಘಟನೆಯಲ್ಲಿ ತೊಡಗಿದ ಕಾರ್ಯಕರ್ತರ ಬದಲು ಆರ್‌.ಎಸ್‌.ಎಸ್‌ ಕಾರ್ಯಕರ್ತರಿಗೆ ಜವಬ್ದಾರಿ ನೀಡಿರುವುದು ಪಕ್ಷದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನುವುದು ಕಾಂಗ್ರೇಸ್‌ ಕಾರ್ಯಕರ್ತರ ಅಭಿಪ್ರಾಯವಾಗಿದೆ.

ಕಾಂಗ್ರೆಸ್ ನಿಂದ ಭರ್ಜರಿ ಪ್ರಚಾರ
ಬಿಜೆಪಿಯ ಸುಳ್ಳುಗಳಿಗೆ ಕಾಂಗ್ರೆಸ್ ಸೋಶಿಯಲ್‌ ಮೀಡಿಯಾ ಭರ್ಜರಿ ತಿರುಗೇಟು ನೀಡಿದೆ.ಕಾರ್ಯಕರ್ತರು ಕೂಡ ಹಳ್ಳಿ ಹಳ್ಳಿಗಳಲ್ಲಿ ಪ್ರತಿ ಬೂತ್‌ ಮಟ್ಟದಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸುತ್ತಿದ್ದಾರೆ.ಕೊನೆಯ ಹಂತದಲ್ಲಿ ಕಾಂಗ್ರೇಸ್‌ ಭರ್ಜರಿ ಪ್ರಚಾರದಲ್ಲಿ ತೊಡಗಿರುವುದು ಕಾರ್ಯಕರ್ತರಿಗೆ ಇನ್ನಷ್ಟು ಹುಮ್ಮಸ್ಸು ನೀಡಿದೆ.

ಟಾಪ್ ನ್ಯೂಸ್

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.