ಸೌಡ-ಶಂಕರನಾರಾಯಣ ಸೇತುವೆ ನಿರ್ಮಾಣಕ್ಕೆ ಕಾಲ ಸನ್ನಿಹಿತ

15 ಕೋ.ರೂ. ವೆಚ್ಚದ ಕಾಮಗಾರಿ

Team Udayavani, May 30, 2022, 10:19 AM IST

river

ಕುಂದಾಪುರ: ಅನೇಕ ವರ್ಷಗಳಿಂದ ಘೋಷಣೆಯಾಗಿ, ನನೆಗುದಿಗೆ ಬಿದ್ದಿದ್ದ ಬಹು ಬೇಡಿಕೆಯ ಸೌಡ-ಶಂಕರನಾರಾಯಣ ಸೇತುವೆಗೆ ಅಂತೂ ಟೆಂಡರ್‌ ಕರೆಯಲಾಗಿದೆ. ಇದರೊಂದಿಗೆ ಗಗನಕುಸುಮವಾಗಿದ್ದ ಸೌಡ ಸೇತುವೆ ಕಾಮಗಾರಿಗೆ ಚಾಲನೆ ನೀಡುವ ಕಾಲ ಸನ್ನಿಹಿತವಾಗಿದೆ.

ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರಾಹಿ ನದಿಗೆ ಅಡ್ಡಲಾಗಿ ಶಂಕರನಾರಾಯಣ ಗ್ರಾಮದ ಸೌಡದಲ್ಲಿ ಸೇತುವೆ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ. ಅದಕ್ಕೆ ಸಂಬಂಧಿಸಿದಂತೆ ಉಡುಪಿ ಲೋಕೋಪಯೋಗಿ ಇಲಾಖೆಯಿಂದ ಮೇ 23ಕ್ಕೆ ಆನ್‌ ಲೈನ್‌ ಮೂಲಕ ಟೆಂಡರ್‌ ಕರೆಯಲಾಗಿದೆ. ಟೆಂಡರ್‌ನಲ್ಲಿ ಭಾಗವಹಿಸಲು ಒಂದು ತಿಂಗಳ ಕಾಲಾವಕಾಶವಿದ್ದು, ಜೂ.23ರಂದು ಟೆಂಡರ್‌ ಪ್ರಕ್ರಿಯೆ ಅಂತ್ಯವಾಗಲಿದೆ.

15 ಕೋ.ರೂ. ವೆಚ್ಚ

ಈ ಸೌಡ – ಶಂಕರನಾರಾಯಣ ಸೇತುವೆಯು ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗೆ ಮತ್ತೂಂದು ಸಂಪರ್ಕ ಕೊಂಡಿಯಾಗಲಿದ್ದು, 15 ಕೋ.ರೂ. ವೆಚ್ಚದಲ್ಲಿ ಟೆಂಡರ್‌ ಕರೆಯಲಾಗಿದೆ. ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡ ಬಳಿಕ, ವರ್ಕ್‌ ಆರ್ಡರ್‌ ಆಗಲಿದ್ದು, ಆ ಬಳಿಕ ಕಾಮಗಾರಿಗೆ ಚಾಲನೆ ಸಿಗಲಿದೆ. ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟರ ಪ್ರಯತ್ನದಿಂದಾಗಿ ಅನುದಾನ ಮಂಜೂರಾಗಿದೆ.

ಶಾಸಕರಿಗೆ ಕೃತಜ್ಞತೆ

ಕಳೆದ ಚುನಾವಣೆ ಸಂದರ್ಭದಲ್ಲಿ ಬೈಂದೂರು ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟರು ಸೌಡ – ಶಂಕರನಾರಾಯಣ ಸೇತುವೆ ಮಾಡಿಕೊಡುವ ಭರವಸೆ ನೀಡಿದ್ದು, ಅದರಂತೆ ಸೇತುವೆಗೆ ಅನುದಾನ ಮಂಜೂರಾಗಿ, ಟೆಂಡರ್‌ ಕರೆಯಲಾಗಿದೆ. ಕೊಟ್ಟ ಮಾತು ಉಳಿಸಿಕೊಂಡ ಶಾಸಕರಿಗೆ ಈ ಭಾಗದ ಜನರು ಕೃತಜ್ಞತೆ ಸಲ್ಲಿಸಿದ್ದಾರೆ.

10 ಕಿ.ಮೀ. ಹತ್ತಿರ

ಸೌಡ ಸೇತುವೆಯಾದರೆ ಪ್ರಮುಖವಾಗಿ ಉಪ ನೋಂದಣಿ ಕಚೇರಿ ಸಹಿತ ಹತ್ತು ಹಲವು ಸರಕಾರಿ ಕಚೇರಿಗಳನ್ನು ಹೊಂದಿರುವ ಶಂಕರನಾರಾಯಣಕ್ಕೆ ಬರಲು ಹಾರ್ದಳ್ಳಿ-ಮಂಡಳ್ಳಿ, ಮೊಳಹಳ್ಳಿ, ಹೊಂಬಾಡಿ – ಮಂಡಾಡಿ, ಯಡಾಡಿ – ಮತ್ಯಾಡಿ, ಕೊರ್ಗಿ, ಜಪ್ತಿ, ಹೆಸ್ಕಾತ್ತೂರು ಗ್ರಾಮಗಳ ಜನರಿಗೆ ಅನುಕೂಲವಾಗಲಿದೆ. ಇನ್ನು ಸೌಡ ಭಾಗದ ಜನರು ಕುಂದಾಪುರ ಹಾಗೂ ಉಡುಪಿಗೆ ಬರಲು 10ರಿಂದ 12 ಕಿ.ಮೀ. ಹತ್ತಿರವಾಗಲಿದೆ. ಮಚ್ಚಟ್ಟು, ಸಿದ್ದಾಪುರ, ಹೊಸಂಗಡಿ, ಉಳ್ಳೂರು-74 ಭಾಗದ ಜನರಿಗೆ ಮಣಿಪಾಲ, ಉಡುಪಿಗೆ ತೆರಳಲು ಸಹ ಪ್ರಯೋಜನವಾಗಲಿದೆ.

ಭರವಸೆ ಈಡೇರಿಸಿದ್ದೇನೆ

ಚುನಾವಣೆ ಸಂದರ್ಭದಲ್ಲಿ ಗೆದ್ದರೆ ನಾನು ಅಲ್ಲಿನ ಜನರಿಗೆ ಸೇತುವೆ ಮಾಡಿಕೊಡುವ ಭರವಸೆ ನೀಡಿದ್ದೆ. ಅದರಂತೆ ಈಗ ಅನುದಾನ ಮಂಜೂರಾಗಿ, ಟೆಂಡರ್‌ಗೆ ಹೋಗಿದೆ. ಅದೆಲ್ಲ ಪ್ರಕ್ರಿಯೆ ಮುಗಿದು, ಆದಷ್ಟು ಬೇಗ ಕಾಮಗಾರಿಗೆ ಚಾಲನೆ ಸಿಗಲಿದೆ. ಆಗ ಜನರಿಗೆ ನೀಡಿದ್ದ ಭರವಸೆಯನ್ನು ಈಡೇರಿಸಿದ್ದೇನೆ. – ಬಿ.ಎಂ. ಸುಕುಮಾರ್‌ ಶೆಟ್ಟಿ, ಶಾಸಕರು

ಟೆಂಡರ್‌ ಪ್ರಕ್ರಿಯೆ

ಮೇ 23ಕ್ಕೆ ಟೆಂಡರ್‌ ಕರೆಯಲಾಗಿದೆ. ಟೆಂಡರ್‌ನಲ್ಲಿ ಭಾಗವಹಿಸಲು ಗುತ್ತಿಗೆದಾರರಿಗೆ ಒಂದು ತಿಂಗಳ ಕಾಲಾವಕಾಶವಿದೆ. ಟೆಂಡರ್‌ ಕಾರ್ಯ ಮುಗಿದ ಬಳಿಕ ಮುಂದಿನ ಪ್ರಕ್ರಿಯೆ ನಡೆಯಲಿದೆ. – ದುರ್ಗಾದಾಸ್‌, ಸಹಾಯಕ ಕಾರ್ಯ ಪಾಲಕ ಎಂಜಿನಿಯರ್‌, ಕುಂದಾಪುರ ಲೋಕೋಪಯೋಗಿ ಇಲಾಖೆ

ಸುದಿನ ವರದಿ

ಸೌಡ- ಶಂಕರ ನಾರಾಯಣ ಸೇತುವೆ ಬೇಡಿಕೆ ಬಗ್ಗೆ, ಒಮ್ಮೆ ಘೋಷಣೆಯಾಗಿ ಬಳಿಕ ನನೆಗುದಿಗೆ ಬಿದ್ದ ಕುರಿತು, ವಿಳಂಬದ ಬಗ್ಗೆಯೂ ‘ಉದಯವಾಣಿ ಸುದಿನ’ವು ನಿರಂತರ ವಿಶೇಷ ವರದಿಗಳನ್ನು ಪ್ರಕಟಿಸಿ, ಗಮನಸೆಳೆದಿತ್ತು.

ಟಾಪ್ ನ್ಯೂಸ್

Congress-Session

Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್‌ ಪಣ

INDIA ಕೂಟದಿಂದ ಕಾಂಗ್ರೆಸ್‌ ಹೊರಗಿಡಲು ಆಪ್‌ ಒತ್ತಾಯ!

INDIA ಕೂಟದಿಂದ ಕಾಂಗ್ರೆಸ್‌ ಹೊರಗಿಡಲು ಆಪ್‌ ಒತ್ತಾಯ!

Tamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈTamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈ

Tamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈ

Negotiation: ಹೆಬ್ಬಾಳ್ಕರ್‌-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ

ಲೋಕ ಚುನಾವಣೆಯಲ್ಲಿ ಪುರುಷರಗಿಂತ ಸ್ತ್ರೀಯರಿಗಿಂತ ಹೆಚ್ಚು ಮತದಾನ: ಚು.ಆಯೋಗ

ಲೋಕ ಚುನಾವಣೆಯಲ್ಲಿ ಪುರುಷರಗಿಂತ ಸ್ತ್ರೀಯರಿಗಿಂತ ಹೆಚ್ಚು ಮತದಾನ: ಚು.ಆಯೋಗ

1-horoscope

Daily Horoscope: ಧೈರ್ಯವನ್ನು ಕುಗ್ಗಿಸುವ ವಿದ್ಯಮಾನಗಳು, ವ್ಯಾಪಾರಿ ಗಳಿಗೆ ನಿರೀಕ್ಷಿತ ಲಾಭ

ಲಾಂಛನ ದುರ್ಬಳಕೆಗೆ 5 ಲಕ್ಷ ದಂಡ, ಜೈಲು? ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಚಿಂತನೆ

ಲಾಂಛನ ದುರ್ಬಳಕೆಗೆ 5 ಲಕ್ಷ ದಂಡ, ಜೈಲು? ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಚಿಂತನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

crime

Siddapura: ಬೈಕಿಗೆ ಕಾರು ಡಿಕ್ಕಿ; ಸವಾರರು ಗಂಭೀರ

accident2

Gangolli: ಸ್ಕೂಟರ್‌ – ಬೈಕ್‌ ಢಿಕ್ಕಿ; ಗಾಯ

5-kundapura

Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Congress-Session

Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್‌ ಪಣ

chirate( leopard)

Kasaragod: ಮುಳಿಯಾರಿನಲ್ಲಿ ಮನೆ ಮುಂದೆ ಐದು ಚಿರತೆ ಪ್ರತ್ಯಕ್ಷ

INDIA ಕೂಟದಿಂದ ಕಾಂಗ್ರೆಸ್‌ ಹೊರಗಿಡಲು ಆಪ್‌ ಒತ್ತಾಯ!

INDIA ಕೂಟದಿಂದ ಕಾಂಗ್ರೆಸ್‌ ಹೊರಗಿಡಲು ಆಪ್‌ ಒತ್ತಾಯ!

Tamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈTamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈ

Tamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈ

Negotiation: ಹೆಬ್ಬಾಳ್ಕರ್‌-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.