“ಕೋವಿಡ್-19 ಸೋಂಕಿತ ಗುಣಮುಖನಾಗಿರುವ ಕಾರಣ ಸೀಲ್‌ಡೌನ್ ಸಡಿಲಿಕೆ’
ವಡ್ಡರ್ಸೆ ಗ್ರಾ.ಪಂ.ನಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಭೆ
Team Udayavani, Jun 1, 2020, 5:21 AM IST
ಕೋಟ: ಕೋವಿಡ್-19 ಸೋಂಕಿಗೊಳಗಾಗಿ ಇದೀಗ ಗುಣಮುಖ ರಾಗಿರುವ ಬ್ರಹ್ಮಾವರ ಪೊಲಿಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ವಾಸವಿದ್ದ ವಡ್ಡರ್ಸೆ ಎಂ.ಜಿ. ಕಾಲನಿ ಹಾಗೂ ಯಾಳಕ್ಲು ಪ್ರದೇಶದ ಸೀಲ್‌ಡೌನ್ ತೆರವುಗೊಳಿಸಬೇಕು ಎನ್ನುವ ಸ್ಥಳೀಯರ ಮನವಿ ಮೇರೆಗೆ ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ರವಿವಾರ ವಡ್ಡರ್ಸೆ ಗ್ರಾ.ಪಂ.ನಲ್ಲಿ ಸಭೆ ನಡೆಸಿ ವಿವಿಧ ವಿಚಾರಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಇಲ್ಲಿನ ಒಂದು ಕಿ.ಮೀ. ವ್ಯಾಪ್ತಿಯ ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗಿದ್ದು 200ಕ್ಕೂ ಹೆಚ್ಚು ಮನೆಗಳಿಗೆ ಒಂದು ವಾರದಿಂದ ಸಂಚಾರ ಸ್ಥಗಿತಗೊಂಡಿದೆ ಹಾಗೂ ನಿತ್ಯ ಕೆಲಸಕ್ಕೆ ತೆರಳುವ ಕೂಲಿ ಕಾರ್ಮಿಕರು ಇನ್ನಿತರರಿಗೆ ಸಮಸ್ಯೆಯಾಗಿದೆ. ಇದೀಗ ಹೆಡ್ ಕಾನ್‌ಸ್ಟೆಬಲ್ ಅವರು ಸೋಂಕಿನಿಂದ ಗುಣಮುಖವಾಗಿದ್ದು ಕುಟುಂಬದವರಿಗೂ ಸೋಂಕು ತಗಲಲಿಲ್ಲ ಎನ್ನುವುದು ದೃಢವಾಗಿದೆ. ಆದ್ದರಿಂದ ಶೀಘ್ರವಾಗಿ ಇಲ್ಲಿನ ಸೀಲ್‌ಡೌನ್ ತೆರವುಗೊಳಿಸಿ ಸಹಜ ಜೀವನಕ್ಕೆ ಸಹಕರಿಸಬೇಕು ಎಂದು ಸ್ಥಳೀಯರು ಈ ಸಂದರ್ಭ ಸಚಿವರಿಗೆ ಮನವಿ ಸಲ್ಲಿಸಿದರು.
ಪರಿಶೀಲಿಸಿ ಕ್ರಮ
ಏಕಾಏಕಿಯಾಗಿ ಸೀಲ್‌ಡೌನ್ ತೆರವು ಗೊಳಿಸಲು ಸಾಧ್ಯವಿಲ್ಲ ಹಾಗೂ ಅದಕ್ಕೆ ಸರಕಾರದ ಒಪ್ಪಿಗೆ ಅಗತ್ಯವಿದೆ. ಕಂದಾಯ ಇಲಾಖೆಯ ಅಧಿಕಾರಿಗಳು ಆ ಪ್ರದೇಶವನ್ನು ಸರ್ವೆ ನಡೆಸಿ ಹೊಸ ಮಾರ್ಗಸೂಚಿಯಂತೆ 100 ಮೀ. ಅಥವಾ ಗುಂಪು ಮನೆಗಳನ್ನು ಸೀಲ್‌ಡೌನ್ ಮಾಡುವ ರೀತಿಯಲ್ಲಿ ತಹಶೀಲ್ದಾರರ ಮೂಲಕ ಎ.ಸಿ.ಯವರಿಗೆ ಮನವಿ ಸಲ್ಲಿಸಬೇಕು. ಅನಂತರ ಎ.ಸಿ.ಯವರು ಸ್ಥಳ ಪರಿಶೀಲಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ವರ್ಗಾಯಿಸಲಿದ್ದಾರೆ ಹಾಗೂ ಸರಕಾರದ ಅನುಮತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ. ಕಂದಾಯ ಇಲಾಖೆಯವರು ತತ್‌ಕ್ಷಣ ಈ ಕುರಿತು ವರದಿ ಸಿದ್ಧಪಡಿಸಿ ಎ.ಸಿ. ಮತ್ತು ಡಿ.ಸಿ.ಯವರ ಜತೆ ನಾನು ಚರ್ಚೆ ನಡೆಸುತ್ತೇನೆ ಎಂದು ಸಚಿವರು ತಿಳಿಸಿದರು. ಸ್ಥಳೀಯರು ತಮ್ಮ ಸಮಸ್ಯೆಗಳ ಕುರಿತು ತಿಳಿಸಿದರು.
ತಹಶೀಲ್ದಾರ್ ಕಿರಣ್ ಗೋರಯ್ಯ ವಡ್ಡರ್ಸೆ ಗ್ರಾ.ಪಂ. ಅಧ್ಯಕ್ಷೆ ಹೇಮಾ, ವಾರ್ಡ್ ಸದಸ್ಯ ಕೋಟಿ ಪೂಜಾರಿ, ಗ್ರಾ.ಪಂ. ಸದಸ್ಯರು. ತಾ.ಪಂ. ಸದಸ್ಯ ಗುಂಡು ಶೆಟ್ಟಿ, ಸಾೖಬ್ರಕಟ್ಟೆ ಪ್ರಾ.ಆ. ಕೇಂದ್ರದ ವೈದ್ಯಾಧಿಕಾರಿ ಡಾ| ಜಯಶೀಲ್ ಆಚಾರ್ಯ, ಪಿಡಿಒ ಉಮೇಶ್, ಆಶಾ, ಆರೋಗ್ಯ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಅರ್ಹ ಕುಟುಂಬಗಳಿಗೆ ಆಹಾರದ ಕಿಟ್
ಸೀಲ್‌ಡೌನ್ ಆಗಿರುವ ಪ್ರದೇಶದ ಜನರಿಗೆ ಹಲವು ದಿನಗಳಿಂದ ಕೆಲಸವಿಲ್ಲದೆ ಸಾಕಷ್ಟು ಸಮಸ್ಯೆಯಾಗಿದ್ದು,ಪರಿಹಾರಕ್ಕಾಗಿ ಮನವಿ ಸಲ್ಲಿಸಿದ್ದಾರೆ. ಹೀಗಾಗಿ ಸ್ಥಳೀಯ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಗ್ರಾ.ಪಂ. ಪಿಡಿಒ ಅವರ ಮೂಲಕ ಅರ್ಹ ಕುಟುಂಬಗಳನ್ನು ಗುರುತಿಸಲು ತಿಳಿಸಿದ್ದು ಈಗಾಗಲೇ 160 ಕುಟುಂಗಳನ್ನು ಗುರುತಿಸಲಾಗಿದೆ. ಇವರೆಲ್ಲರಿಗೆ ಶಾಸಕರು ಪಡಿತರ ಕಿಟ್‌ಗಳನ್ನು ವಿತರಿಸುವ ಭರವಸೆ ನೀಡಿದ್ದಾರೆ ಎಂದು ಗ್ರಾ.ಪಂ. ಸದಸ್ಯರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್
Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.