ಶಿರೂರು ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗೆ ಕೋವಿಡ್ ಸೋಂಕು ದೃಢ: ಆಸ್ಪತ್ರೆ ಸೀಲ್ ಡೌನ್
Team Udayavani, Jun 22, 2020, 12:54 PM IST
ಬೈಂದೂರು: ಇಲ್ಲಿನ ಶಿರೂರು ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿರೋರ್ವರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಈ ಹಿನ್ನಲೆಯಲ್ಲಿ ಈ ಸಮುದಾಯ ಕೇಂದ್ರವನ್ನು ಮೂರು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ.
ಸಮುದಾಯ ಕೇಂದ್ರದ ಸಿಬ್ಬಂದಿಗೆ ಸೋಂಕು ದೃಢವಾದ ಹಿನ್ನಲೆಯಲ್ಲಿ ಉಳಿದ ಎಲ್ಲಾ ಸಿಬ್ಬಂದಿ ವರ್ಗದವರನ್ನೂ ಕ್ವಾರಂಟೈನ್ ಮಾಡಲು ಸೂಚಿಸಲಾಗಿದೆ. ಮೂರು ದಿನಗಳ ಕಾಳ ಕೇಂದ್ರವನ್ನು ಸೀಲ್ ಡೌನ್ ಮಾಡಲಾಗಿದೆ.
ಇತರ ಸಿಬ್ಬಂದಿಗಳನ್ನು ಸದ್ಯ ಕ್ವಾರಂಟೈನ್ ಮಾಡಲಾಗಿದ್ದು, ಐದು ದಿನದ ಬಳಿಕ ಸೋಂಕಿತರ ನೇರ ಸಂಪರ್ಕಕ್ಕೆ ಬಂದವರ ಗಂಟಲು ದ್ರವ ಪರೀಕ್ಷೆ ಮಾಡಲಾಗುವುದು ಎಂದು ವೈದ್ಯಾಧಿಕಾರಿಯವರು ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಇದುವರೆಗೆ 1063 ಕೋವಿಡ್-19 ಪಾಸಿಟಿವ್ ಪ್ರಕರಣಗಳು ದೃಢವಾಗಿದೆ. ಇವರಲ್ಲಿ 965 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದು 96 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 267 ಜನರ ಮಾದರಿಗಳ ವರದಿ ಬರಬೇಕಿದೆ.
ಜಿಲ್ಲೆಯಲ್ಲಿ ಪ್ರಸ್ತುತ 741 ಮಂದಿ ಮನೆಗಳಲ್ಲಿ, 81 ಮಂದಿ ಐಸೊಲೇಶನ್ ವಾರ್ಡ್‌ನಲ್ಲಿ ಕ್ವಾರಂಟೈನ್ ನಲ್ಲಿದ್ದಾರೆ. 11 ಮಂದಿ ಐಸೊಲೇಶನ್ ವಾರ್ಡ್‌ಗೆ ಸೇರಿದ್ದು ಇಬ್ಬರು ಬಿಡುಗಡೆಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.