ತಪಾಸಣೆಯ ಭಯ: ಸದ್ದಿಲ್ಲದೆ ಹರಡುತ್ತಿದೆ ಕೋವಿಡ್

Team Udayavani, Jun 4, 2021, 5:30 AM IST

ತಪಾಸಣೆಯ ಭಯ: ಸದ್ದಿಲ್ಲದೆ ಹರಡುತ್ತಿದೆ ಕೋವಿಡ್

ಬೈಂದೂರು: ಬೈಂದೂರು ಭಾಗದ ಗ್ರಾಮೀಣ ಭಾಗವಾದ ಗಂಗನಾಡು, ಮಧ್ದೋಡಿ, ಹೊಸೂರು ಮುಂತಾದೆಡೆ ಜ್ವರ ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಇದರ ಚಿಕಿತ್ಸೆಗೆ ಆರೋಗ್ಯ ಕೇಂದ್ರಕ್ಕೆ ಬರದೆ  ಮನೆಯಲ್ಲಿಯೇ ಔಷಧ ಪಡೆದು ಸೋಂಕು ಉಲ್ಬಣಿಸಿದ ಹಲವು ಉದಾಹರಣೆಗಳು ಹಳ್ಳಿ ಭಾಗದಲ್ಲಿ  ಕಂಡುಬರುತ್ತಿವೆ.

ಭಯ ಆತಂಕ ದೂರಾಗಬೇಕಿದೆ :

ಕೋವಿಡ್ ಆರಂಭವಾದಾಗ ಬೆಂಗಳೂರು, ಮುಂಬಯಿ ಮುಂತಾದ ಪಟ್ಟಣ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದವರು ಗ್ರಾಮೀಣ ಭಾಗದ ಮನೆಗಳಿಗೆ ವಾಪಸಾದರು. ಕಳೆದೊಂದು ತಿಂಗಳಿಂದ ಹೊಸೂರು ಸೇರಿದಂತೆ ಹಲವು ಊರಿನ ಜನ  ಜ್ವರದಿಂದ ಬಳಲುತ್ತಿದ್ದಾರೆ. ಆಸ್ಪತ್ರೆಗೆ ತೆರಳಲು ಹೆದರಿ ಸ್ಥಳೀಯ ಔಷಧಾಲಯದಿಂದ ಔಷಧ ಪಡೆದು ಮನೆಯಲ್ಲೇ ಇದ್ದಾರೆ. ಇದರಲ್ಲಿ ಕೆಲವರು ಗುಣಮುಖರಾದರೆ ಇನ್ನು ಕೆಲವರು ಸೋಂಕು ವಾಸಿಯಾಗದೆ ನರಳುತ್ತಿದ್ದಾರೆ. 2-3 ಮಂದಿ ಸಾವನ್ನಪ್ಪಿದ ನಿದರ್ಶನಗಳೂ ಇವೆ.  ಆರೋಗ್ಯ ಇಲಾಖೆ, ಜಿಲ್ಲಾಡಳಿತ  ಗಮನ ಹರಿಸದಿದ್ದಲ್ಲಿ  ಸೋಂಕಿತರ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಗಳಿವೆ.

ಕೃಷಿ ಚಟುವಟಿಕೆಯಲ್ಲಿ ಹಿನ್ನೆಡೆಯಾಗುವ ಆತಂಕ :

ಸಾಮಾನ್ಯವಾಗಿ ಜೂನ್‌ ತಿಂಗಳು ಆರಂಭವಾದರೆ ಗ್ರಾಮೀಣ ಭಾಗದಲ್ಲಿ ಕೃಷಿ ಚಟುವಟಿಕೆ ಆರಂಭವಾಗುತ್ತದೆ. ಬಿತ್ತನೆ ಸೇರಿದಂತೆ ಸಾಮೂಹಿಕ ಕೃಷಿ ಕಾರ್ಯ ಮಾಡ ಬೇಕಾಗಿರುವುದು ಅನಿವಾರ್ಯ. ಹೀಗಾಗಿ ಸೋಂಕು ಹೆಚ್ಚುವ ಕಾರಣ ಒಂದೆಡೆಯಾದರೆ ಪರೀಕ್ಷೆ ಮಾಡಿಕೊಂಡು ಕೊರೊನಾ ದೃಢಪಟ್ಟರೆ ಕ್ವಾರಂಟೈನ್‌ ಅಥವಾ ಆಸ್ಪತ್ರೆ ಸೇರಿದರೆ ಕೃಷಿ ಕಾರ್ಯಕ್ಕೆ ತೊಂದರೆಯಾಗುತ್ತದೆ ಎನ್ನುವ ಯೋಚನೆ ಕೂಡ ಈ ಸಮಸ್ಯೆಗೆ ಕಾರಣವಾಗಿದೆ. ಕೆಲವು ಗ್ರಾಮೀಣ ಭಾಗದಲ್ಲಿ ಜ್ವರ ಬಾಧಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ದೂರ ದೂರದಲ್ಲಿ ಮನೆಗಳಿರುವ ಕಾರಣ ಗಂಭೀರವಾಗುವವರೆಗೆ ಇತರರಿಗೆ ಮಾಹಿತಿ ಸಿಗದಿರುವುದು ಸಮಸ್ಯೆಯಾಗಿ ಕಾಡುತ್ತಿದೆ.  ಒಟ್ಟಾರೆಯಾಗಿ ಜಿಲ್ಲಾಡಳಿತ ಗ್ರಾಮೀಣ ಭಾಗದ ವಾಸ್ತವಿಕ ಸಮಸ್ಯೆಯನ್ನು  ಗಂಭೀರವಾಗಿ ಪರಿಗಣಿಸಬೇಕಿದೆ.

ಹಳ್ಳಿಗಳಲ್ಲಿ  ಈ ರೀತಿ ಸಮಸ್ಯೆ ಆಗಿರುವ ಬಗ್ಗೆ ಮಾಹಿತಿಗಳಿವೆ. ಈಗಾಗಲೇ ಈ ಬಗ್ಗೆ ನಿಗಾ ವಹಿಸಿದ್ದು ಗ್ರಾಮೀಣ ಭಾಗದಲ್ಲಿ ಪ್ರತೀ ಮನೆ  ತಪಾಸಣೆ ಮಾಡುವ ಕುರಿತು ವೈದ್ಯರ ತಂಡಕ್ಕೆ ಜವಾಬ್ದಾರಿ ವಹಿಸುತ್ತೇನೆ.– ಡಾ| ನಾಗಭೂಷಣ, ಜಿಲ್ಲಾ ಆರೋಗ್ಯಾಧಿಕಾರಿ

ಬೈಂದೂರು ಕ್ಷೇತ್ರದಲ್ಲಿ ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಪಂ.ಗಳು ಉತ್ತಮ ಕೆಲಸ ಮಾಡುತ್ತಿದೆ. ಸೋಂಕಿತರ ಸಂಖ್ಯೆಯೂ ನಿಯಂತ್ರಣದಲ್ಲಿದೆ. ಗ್ರಾಮೀಣ ಭಾಗದಲ್ಲಿ ಸೋಂಕಿತರ ಸಂಖ್ಯೆ ಕಡಿಮೆ ಮಾಡಲು ಕ್ರಮ ಕೈಗೊಳ್ಳಲಾಗುವುದು. -ಬಿ.ಎಂ. ಸುಕುಮಾರ್‌ ಶೆಟ್ಟಿ , ಶಾಸಕರು 

– ಅರುಣ್‌ ಕುಮಾರ್‌ ಶಿರೂರು

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: ಅಂಬರ್‌ಗ್ರೀಸ್‌ ಮಾರಾಟ ಜಾಲ: ಅಧಿಕಾರಿಗಳಿಗೆ ಹಲ್ಲೆಗೈದ ನಾಲ್ವರ ಬಂಧನ

Kundapura: ಅಂಬರ್‌ಗ್ರೀಸ್‌ ಮಾರಾಟ ಜಾಲ: ಅಧಿಕಾರಿಗಳಿಗೆ ಹಲ್ಲೆಗೈದ ನಾಲ್ವರ ಬಂಧನ

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Shiroor: ಡಿವೈಡರ್‌ಗೆ ಕಾರು ಢಿಕ್ಕಿ

Shiroor: ಡಿವೈಡರ್‌ಗೆ ಕಾರು ಢಿಕ್ಕಿ

6(1

Kundapura: ಕಸದಿಂದಲೇ ಕಲಾಕೃತಿ; ಕಾಲ್ತೋಡಿನಲ್ಲೊಂದು ಸುಂದರ ಅಂಗನವಾಡಿ

5(1

ಹೆಬ್ಬಾಗಿಲಿನಲ್ಲಿ ಆರಂಭವಾದ ಶಾಲೆ ಇಂದು ಈ ಊರ ಮಕ್ಕಳ ಪಾಲಿನ ಶಿಕ್ಷಣದ ಹೆಬ್ಬಾಗಿಲೇ ಆಗಿದೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.