ಅಂತರ್ ಜಿಲ್ಲಾ ಕಳ್ಳರ ಬಂಧನ; ಒಂಬತ್ತು ಬೈಕ್ ವಶ
Team Udayavani, Jun 11, 2022, 2:07 AM IST
ಕೋಟ: ಉಡುಪಿ ಜಿಲ್ಲೆ ಸೇರಿದಂತೆ ಹೊರ ಜಿಲ್ಲೆಗಳ ಹನ್ನೆರಡು ಬೈಕ್ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಬೈಕ್ ಕಳ್ಳರಿಬ್ಬರನ್ನು ಉಡುಪಿ ಜಿಲ್ಲಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಒಂಬತ್ತು ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ.
ಉಡುಪಿ ಜಿಲ್ಲೆಯ ವಿವಿಧ ಕಡೆಗಳಲ್ಲಿನ ದ್ವಿಚಕ್ರ ವಾಹನ ಕಳ್ಳತನ ತಡೆಗಟ್ಟುವುದು ಹಾಗೂ ಪತ್ತೆ ಮಾಡುವ ಉದ್ದೇಶದಿಂದ ಜಿಲ್ಲಾ ಪೊಲೀಸ್ ಅಧೀಕ್ಷಕರ ನಿರ್ದೇಶನದಂತೆ ವಿಶೇಷ ತಂಡವು ಕೋಟ ಸರಹದ್ದಿನ ವಿವಿಧ ಭಾಗದಲ್ಲಿ ವಾಹನ ತಪಾಸಣೆ ಮತ್ತು ದಾಖಲೆ ಪರಿಶೀಲಿಸುತ್ತಿದ್ದ ಸಂದರ್ಭ ಜೂ. 9ರಂದು ವಡ್ಡರ್ಸೆ ಗ್ರಾಮದ ರೈಲ್ವೇ ಬ್ರಿಡ್ಜ್ ಬಳಿ ನಂಬರ್ ಪ್ಲೇಟ್ ಇಲ್ಲದ ವಾಹನವನ್ನು ಸಂಶಯಾಸ್ಪದವಾಗಿ ನಿಲ್ಲಿಸಿದ್ದು, ವಾಹನದ ಬಳಿ ಇದ್ದ ಇಬ್ಬರನ್ನು ದಾಖಲಾತಿಗಳ ಬಗ್ಗೆ ವಿಚಾರಿಸಿದಾಗ ಯಾವುದೇ ದಾಖಲಾತಿಗಳನ್ನು ಹಾಜರುಪಡಿಸದಿರುವುದರಿಂದ ತನಿಖೆ ನಡೆಸಿದ್ದು, ಆಗ ಅದು ಕಳ್ಳತನ ಮಾಡಿದ ಬೈಕ್ ಎನ್ನುವುದು ತಿಳಿದುಬಂದಿದೆ.
ಆಗ ಪ್ರಕರಣದ ಆರೋಪಿಗಳಾದ ರಾಯಚೂರು ಜಿಲ್ಲೆ ಸಿಂಧನೂರು ತಾಲೂಕು ಅತ್ತಿಗುಡ್ಡೆ ನಿವಾಸಿ ಸೋಮಶೇಖರ (21) ಹಾಗೂ ಬಾಗಲಕೋಟೆ ಜಿಲ್ಲೆ ಹುನಗುಂಡ ತಾಲೂಕು ಹೊಸಮನೆ ನಿವಾಸಿ ಶಂಕರ ಗೌಡ (23) ಅವರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದಾರೆ.
ವಿಶೇಷ ತಂಡದ ಕಾರ್ಯಾಚರಣೆ
ಎಸ್ಪಿ ವಿಷ್ಣುವರ್ಧನ ಎನ್., ಎಎಸ್ಪಿ ಎಸ್.ಟಿ. ಸಿದ್ದಲಿಂಗಪ್ಪ ಅವರ ಮಾರ್ಗದರ್ಶನದಂತೆ, ಡಿವೈಎಸ್ಪಿ ಸುಧಾಕರ ಎಸ್. ನಾಯ್ಕ ಅವರ ನಿರ್ದೇಶನದಂತೆ ಈ ಕಾರ್ಯಾಚರಣೆ ನಡೆದಿದೆ. ಬ್ರಹ್ಮಾವರ ಸಿಪಿಐ ಅನಂತ ಪದ್ಮನಾಭ, ಕೋಟ ಎಸ್ಸೆ„ ಮಧು ಬಿ.ಇ., ಪುಷ್ಪಾ, ಪ್ರೊಬೆಷನರಿ ಎಸ್ಸೆ„ ಮಹಾಂತೇಶ್, ಪುನೀತ್, ಹಿರಿಯಡ್ಕ ಠಾಣೆಯ ಪ್ರೊಬೆಷನರಿ ಎಸ್ಸೆ„ ಮಂಜುನಾಥ ಮರಬದ, ಕೋಟ ಎಸ್ಸೆ„ ರವಿ ಕುಮಾರ್, ಸಿಬಂದಿ ರಾಘವೇಂದ್ರ, ಪ್ರಸನ್ನ, ರಾಜೇಶ್, ಕೃಷ್ಣ ಹಾಗೂ ಬ್ರಹ್ಮಾವರ ವೃತ್ತ ಕಚೇರಿಯ ಪ್ರದೀಪ್ ನಾಯಕ್ ಹಾಗೂ ಉಡುಪಿ ನಗರ ಠಾಣೆಯ ಸತೀಶ , ಸಂತೋಷ ರಾಥೋಡ್, ಕಿರಣ, ಹನುಮಂತ, ಎಸ್ಪಿ ಕಚೇರಿ ತಾಂತ್ರಿಕ ವಿಭಾಗದ ಸಿಬ್ಬಂದಿ ದಿನೇಶ ಪ್ರಕರಣವನ್ನು ಭೇಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಹನ್ನೆರಡು ಪ್ರಕರಣ ಬಯಲಿಗೆ
ಆರೋಪಿಗಳನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಿದಾಗ ಅವರು ಕಳೆದ ಮೂರು ವರ್ಷಗಳಿಂದ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದು, ತಿಳಿದುಬಂದಿದೆ. ಕಾರ್ಮಿಕರಾಗಿ ದುಡಿಯಲು ಬಂದವರು ಉಡುಪಿ ನಗರ ಠಾಣೆಯಲ್ಲಿ ಏಳು, ಬ್ರಹ್ಮಾವರ ಠಾಣೆಯ ಒಂದು, ಶಂಕರಾನಾರಾಯಣ ಠಾಣೆಯ ಒಂದು, ಶೃಂಗೇರಿ ಠಾಣೆಯ ಒಂದು, ವಿಜಯನಗರದ ಜಿಲ್ಲೆಯ ಇಟಗಿ ಠಾಣೆಯ ಒಂದು ಮತ್ತು ದಾವಣಗೆರೆ ಠಾಣೆಯ ಒಂದು ಪ್ರಕರಣ ಸೇರಿದಂತೆ ಒಟ್ಟು 12 ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿದ್ದು, ತನಿಖೆಯಿಂದ ತಿಳಿದುಬಂದಿದೆ. ಇವುಗಳಲ್ಲಿ ಮೂರು ಪಲ್ಸರ್ ಬೈಕ್, ಐದು ಸ್ಪೆ$Éಂಡರ್ ಬೈಕ್ ಮತ್ತು ಒಂದು ಹೀರೋ ಡಿಲಕ್ಸ್ ಬೈಕ್ ವಶಪಡಿಸಿಕೊಳ್ಳಲಾಗಿದ್ದು, ಸ್ವಾ ಧೀನಪಡಿಸಿದ ಸೊತ್ತುಗಳ ಮೌಲ್ಯ ಅಂದಾಜು ನಾಲ್ಕೂವರೆ ಲಕ್ಷ ರೂ. ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ
Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.