ಕೋಟ: ಸರಣಿ ಅಪಘಾತ; ಚಾಲಕರಿಬ್ಬರಿಗೆ ಗಾಯ
Team Udayavani, Oct 13, 2022, 1:15 AM IST
ಕೋಟ: ಕೋಟ ಅಮೃತೇಶ್ವರೀ ದೇಗುಲದ ಜಂಕ್ಷನ್ನಲ್ಲಿ ಬೊಲೆರೋ ವಾಹನ ಮತ್ತು ರಿಕ್ಷಾಗಳ ನಡುವೆ ಬುಧವಾರ ಬೆಳಗ್ಗೆ ಸಂಭವಿಸಿದ ಸರಣಿ ಅಪಘಾತದಲ್ಲಿ ರಿಕ್ಷಾ ಚಾಲಕರಿಬ್ಬರು ಗಾಯಗೊಂಡಿದ್ದಾರೆ.
ಜಂಕ್ಷನ್ನಲ್ಲಿ ಆಟೋ ರಿಕ್ಷಾ ಗಳೆರಡು ರಸ್ತೆ ಕ್ರಾಸ್ ಮಾಡುತ್ತಿದ್ದ ಸಂದರ್ಭ ಉಡುಪಿಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಬೊಲೆರೋ ಪಿಕಪ್ ವಾಹನವು ಆಟೋ ರಿಕ್ಷಾಗಳಿಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ.
ಅಪಘಾತದಲ್ಲಿ ಆಟೋ ಚಾಲಕರಿಬ್ಬರಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು, ತತ್ಕ್ಷಣ ಕೋಟ ಜೀವನ್ ಮಿತ್ರ ಆ್ಯಂಬುಲೆನ್ಸ್ ನಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸ ಲಾಯಿತು.
ಅಪಘಾತದಿಂದಾಗಿ ಸ್ವಲ್ಪ ಹೊತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು. ಕೋಟ ಠಾಣಾಧಿಕಾರಿ ಮಧು ಬಿ. ಮತ್ತು ಸಿಬಂದಿ ಸ್ಥಳಕ್ಕಾಗಮಿಸಿ ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಅಪಾಯಕಾರಿ ಜಂಕ್ಷನ್
ಚತುಷ್ಪಥ ಹೆದ್ದಾರಿ, ಸರ್ವಿಸ್ ರಸ್ತೆ ಮತ್ತು ಗ್ರಾಮೀಣ ರಸ್ತೆ, ದೇವಸ್ಥಾನಕ್ಕೆ ದಾರಿಯ ನಡುವೆ ಈ ಜಂಕ್ಷನ್ ಇದ್ದು, ಅಪಘಾತ ವಲಯವಾಗಿ ಗುರುತಿಸಿಕೊಂಡಿದೆ. ಇಲ್ಲಿ ಸಾಕಷ್ಟು ಅಪಘಾತಗಳು ಸಂಭವಿಸುತ್ತಿವೆ. ಹೀಗಾಗಿ ಕೋಟಕ್ಕೆ ಪ್ರತ್ಯೇಕ ಜಂಕ್ಷನ್ನ ಅಗತ್ಯವಿದ್ದು, ಈ ಅಪಾಯಕಾರಿ ಜಂಕ್ಷನ್ ತೆರವುಗೊಳಿಸಬೇಕು ಎನ್ನುವ ಬೇಡಿಕೆ ಸಾರ್ವಜನಿಕ ವಲಯದಲ್ಲಿದೆ.
ವೀಡಿಯೋ ವೈರಲ್
ಅಪಘಾತದ ದೃಶ್ಯಾವಳಿ ಸ್ಥಳೀಯ ಅಂಗಡಿಯೊಂದರ ಸಿಸಿ ಕೆಮರಾದಲ್ಲಿ ಸೆರೆಯಾಗಿದ್ದು, ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.