ಪಡಿತರ ಅಕ್ಕಿಗಾಗಿ ಅಕ್ಕ- ತಂಗಿ ಹೊಡೆದಾಟ; ಅಕ್ಕ ಆಸ್ಪತ್ರೆಗೆ ದಾಖಲು
Team Udayavani, Oct 19, 2022, 6:45 AM IST
ಕೋಟ: ಕುಟುಂಬದ ಪಾಲಿನ ಪಡಿತರ ಅಕ್ಕಿಗಾಗಿ ಅಕ್ಕ- ತಂಗಿ ನಡುವೆ ಹೊಡೆದಾಟ ನಡೆದು ಅಕ್ಕ ಆಸ್ಪತ್ರೆಗೆ ದಾಖಲಿಸಲ್ಪಟ್ಟ ಘಟನೆ ವಡ್ಡರ್ಸೆ ಎಂ.ಜಿ. ಕಾಲನಿಯಲ್ಲಿ ಅ. 17ರಂದು ಸಂಭವಿಸಿದೆ.
ಇಲ್ಲಿನ ನಿವಾಸಿ ಜ್ಯೋತಿ (32) ಗಾಯಗೊಂಡ ಗೃಹಿಣಿ. ಜ್ಯೋತಿ ಯವರು ಪತಿ ಹಾಗೂ ಮಕ್ಕಳೊಂದಿಗೆ ಬಿದ್ಕಲ್ ಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು ಅ.17 ರಂದು ಬೆಳಗ್ಗೆ ವಡ್ಡರ್ಸೆ ಗ್ರಾಮದ ಎಂ.ಜಿ. ಕಾಲನಿಯಲ್ಲಿರುವ ತನ್ನ ತಾಯಿ ಮನೆಗೆ ಬಂದಾಗ, ತಾಯಿಯು ಮನೆಯಲ್ಲಿ ಇರದೇ ಕೆಲಸಕ್ಕೆ ಹೋಗಿದ್ದು, ಮನೆಯಲ್ಲಿ ತಂಗಿ ಆಶಾ ಇದ್ದು ಅವಳಲ್ಲಿ ಸರಕಾರದಿಂದ ಸಿಗುವ ಉಚಿತ ಪಡಿತರ ಅಕ್ಕಿಯಲ್ಲಿ ತನ್ನ ಪಾಲಿಗೆ ಬಂದ ಅಕ್ಕಿಯನ್ನು ನೀಡುವಂತೆ ಕೇಳಿದಾಗ ಆಶಾ ಅವಾಚ್ಯ ಶಬ್ದಗಳಿಂದ ಬೈದಿದ್ದು, ಮಾತಿಗೆ ಮಾತು ಬೆಳೆದು ಜ್ಯೋತಿಯವರಿಗೆ ಮರದ ದೊಣ್ಣೆಯಿಂದ ಹೊಡೆದಿದ್ದಾರೆ.
ತೀವ್ರವಾಗಿ ಗಾಯಗೊಂಡ ಅವರನ್ನು ಕೋಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ, ಅಲ್ಲಿಂದ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸ ಲಾಯಿತು. ಪ್ರಕರಣದ ಕುರಿತು ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Martin: ಕಿರುತೆರೆಯಲ್ಲಿ ಧೂಳೆಬ್ಬಿಸಲು ಬರುತ್ತಿದೆ ಧ್ರುವ ಸರ್ಜಾ ನಟನೆಯ ʼಮಾರ್ಟಿನ್ʼ
Airtel Outage:ದೇಶದ ಹಲವೆಡೆ ಏರ್ ಟೆಲ್ Network ಸಮಸ್ಯೆ; ಏರ್ ಟೆಲ್ ಗ್ರಾಹಕರಿಂದ ದೂರು
BBK11: ದಯವಿಟ್ಟು ಬಿಗ್ ಬಾಸ್ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.