Kota ಕಾರಂತೋತ್ಸವಕ್ಕೆ ಚಾಲನೆ: ಗಾಂಧೀ ಗ್ರಾಮ ಪ್ರಶಸ್ತಿ ಪುರಸ್ಕೃತರಿಗೆ ಗೌರವಾರ್ಪಣೆ
Team Udayavani, Oct 4, 2023, 12:10 AM IST
ಕೋಟ: ಕೋಟತಟ್ಟು ಗ್ರಾಮ ಪಂಚಾಯತ್, ಕಾರಂತ ಟ್ರಸ್ಟ್, ಕಾರಂತ ಹುಟ್ಟೂರು ಪ್ರಶಸ್ತಿ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ಒಂದು ವಾರ ಕಾಲ ನಡೆಯಲಿರುವ ಕಾರಂತೋತ್ಸವ, ಕಾರಂತ ಹುಟ್ಟೂರು ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಮಂಗಳವಾರ ಕೋಟ ಕಾರಂತ ಕಲಾಭವನದಲ್ಲಿ ಚಾಲನೆ ನೀಡಲಾಯಿತು.
ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಾರಂತರ ಸಾಧನೆ ಅತ್ಯಂತ ಶ್ರೇಷ್ಠವಾದದ್ದು. ಕಾರಂತ ಕಲಾಭವನದ ಮೂಲಕ ಅವರ ನಿತ್ಯ ಸ್ಮರಣೆ ನಡೆಯುತ್ತಿದೆ ಎಂದರು.
ವಿಧಾನ ಪರಿಷತ್ ಸದಸ್ಯ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಸ್ತಾವನೆಗೈದು, ಕಾರಂತ ಹುಟ್ಟೂರು ಪ್ರಶಸ್ತಿ ಮತ್ತು ಅದರ ಜತೆಗಿನ ಕಾರ್ಯಕ್ರಮಗಳನ್ನು ಕಾರಂತೋತ್ಸವದಂತೆ ಜನ ಸಂಭ್ರಮಿಸುತ್ತಿದ್ದಾರೆ. 1 ಕೋಟಿ ರೂ. ಅನುದಾನದಲ್ಲಿ ಕಲಾಭವನದ ಸಭಾಂಗಣವನ್ನು ನವೀಕರಿಸಲಾಗಿದ್ದು, ನಿರಂತರ ಕಾರ್ಯಕ್ರಮ ನಡೆಯಲಿದೆ ಎಂದರು.
ಕೋಟತಟ್ಟು ಗ್ರಾ.ಪಂ. ಅಧ್ಯಕ್ಷ ಕೆ. ಸತೀಶ್ ಕುಂದರ್ ಅಧ್ಯಕ್ಷತೆ ವಹಿಸಿದ್ದರು.ಉಡುಪಿ ಜಿಲ್ಲೆಯಿಂದ ರಾಜ್ಯಮಟ್ಟದ ಗಾಂಧೀ ಗ್ರಾಮ ಪ್ರಶಸ್ತಿ ಪುರಸ್ಕೃತವಾದ ಕೋಡಿ, ನೀರೆ, ಶಂಕರನಾರಾಯಣ, ಅಲೆವೂರು, ಕಾಲೊ¤àಡು, ಮಡಾಮಕ್ಕಿ, ಬೆಳ್ಳೆ, ಹೊಸಾಡು ಗ್ರಾ.ಪಂ.ಗಳಿಗೆ ಕಾರಂತ ಪ್ರತಿಷ್ಠಾನ ಪುರಸ್ಕಾರ ನೀಡಿ ಗೌರವಿಸಲಾಯಿತು.
ಶಾಸಕರಾದ ಬೈಂದೂರಿನ ಗುರುರಾಜ್ ಶೆಟ್ಟಿ ಗಂಟಿಹೊಳೆ, ಕಾಪುವಿನ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿಯ ಯಶ್‌ಪಾಲ್ ಎ. ಸುವರ್ಣ, ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ ಸಿ. ಕುಂದರ್, ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಬ್ರಹ್ಮಾವರ ತಾ.ಪಂ. ಇ.ಒ. ಇಬ್ರಾಹಿಂಪುರ್ ಉಪಸ್ಥಿತರಿದ್ದರು. ಕನ್ನಡ ಸಂಸ್ಕೃತಿ ಇಲಾಖೆ ಜಿಲ್ಲಾ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಕಾರ್ಯಕ್ರಮ ನಿರೂಪಿಸಿದರು. ಪಿಡಿಒ ರವೀಂದ್ರ ರಾವ್ ವಂದಿಸಿದರು.
ರಾಜ್ಯಪಾಲರ ಗೈರು
ಕಾರಂತೋತ್ಸವಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಗಮಿಸುವುದು ಎಲ್ಲ ಹಂತಗಳಲ್ಲೂ ಖಾತ್ರಿ ಯಾಗಿತ್ತು. ಆದರೆ ಕೊನೆಘಳಿಗೆ ಯಲ್ಲಿ ಅನಾರೋಗ್ಯ ಕಾರಣದಿಂದ ಭೇಟಿ ರದ್ದಾಗಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ನೀರೆ ಗ್ರಾ.ಪಂ.ಗೆ ಡಾ| ಕಾರಂತ ಹುಟ್ಟೂರ ಪ್ರಶಸ್ತಿ ಗೌರವ
ಅಜೆಕಾರು: ರಾಜ್ಯ ಸರಕಾರದ ಪ್ರಸಕ್ತ ಸಾಲಿನ ಗಾಂಧಿಗ್ರಾಮ ಪುರಸ್ಕಾರಕ್ಕೆ ಪಾತ್ರವಾಗಿರುವ ನೀರೆ ಗ್ರಾಮ ಪಂಚಾಯತ್‌ಗೆ ಕೋಟತಟ್ಟು ಗ್ರಾ.ಪಂ., ಡಾ| ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಡಾ| ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟ ವತಿಯಿಂದ ಮಂಗಳವಾರ ಡಾ| ಶಿವರಾಮ ಕಾರಂತ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ನೀರೆ ಪಂ. ಅಧ್ಯಕ್ಷ ಸಚ್ಚಿದಾನಂದ ಪ್ರಭು, ಪಿಡಿಒ ಅಂಕಿತಾ ನಾಯಕ್, ಉಪಾಧ್ಯಕ್ಷೆ ವಿದ್ಯಾ ಶೆಟ್ಟಿ ಪ್ರಶಸ್ತಿ ಸ್ವೀಕರಿಸಿದರು. ಪಂಚಾಯತ್ ನಿಕಟ ಪೂರ್ವ ಅಧ್ಯಕ್ಷೆ ಶಾಲಿನಿ, ನಿಕಟಪೂರ್ವ ಉಪಾಧ್ಯಕ್ಷ ಸತೀಶ್, ಸದಸ್ಯ ಶಿವಪ್ರಸಾದ್ ರಾವ್ ಉಪಸ್ಥಿತರಿದ್ದರು.
ಕೋಟ ಶಿವರಾಮ ಕಾರಂತ ಪ್ರತಿಷ್ಠಾನದ ಅಧ್ಯಕ್ಷ ಆನಂದ ಕುಂದರ್, ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಜಿಲ್ಲೆಯ ಎಲ್ಲ ಶಾಸಕರು ಉಪಸ್ಥಿತರಿದ್ದರು. ನೀರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ನೀರೆ ಮತ್ತು ಕಣಜಾರು ಕಂದಾಯ ಗ್ರಾಮಗಳಿದ್ದು 6
ವಾರ್ಡ್‌ಗಳನ್ನು ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.