ಬಿಸಿಯೂಟ ನೌಕರರ ನಿರ್ಲಕ್ಷ್ಯ: ಮನವಿ


Team Udayavani, May 30, 2020, 5:09 AM IST

ಬಿಸಿಯೂಟ ನೌಕರರ ನಿರ್ಲಕ್ಷ್ಯ: ಮನವಿ

ಕುಂದಾಪುರ: ಕೋವಿಡ್ 19 ತಡೆಗಾಗಿ ಲಾಕ್‌ಡೌನ್‌ ಆದಾಗಿನಿಂದ ಅಕ್ಷರದಾಸೋಹ ನೌಕರರನ್ನು ಸರಕಾರ, ಜನಪ್ರತಿನಿಧಿಗಳು, ಅಧಿಕಾರಿಗಳು ಅವರ ಕುಟುಂಬಗಳನ್ನು ನಿರ್ಲಕ್ಷಿಸಿದ್ದಾರೆ.

ಬಿಸಿಯೂಟ ನೌಕರರಿಗೆ ಕೆಲಸವೂ ಇಲ್ಲ.ಕಳೆದ 3 ತಿಂಗಳಿನಿಂದ ನೀಡಲಾಗುತ್ತಿದ್ದ ಕೇವಲ 2,700 ರೂ. ವೇತನವೂ ಇಲ್ಲದಿರುವುದರಿಂದಾಗಿ ಸಂಕಷ್ಟದಲ್ಲಿದ್ದಾರೆ ಎಂದು ಕುಂದಾಪುರ ತಾಲೂಕು ಅಕ್ಷ‌ರದಾಸೋಹ ನೌಕರರ ಸಂಘವು ರಾಜ್ಯವ್ಯಾಪಿ ಪ್ರತಿಭಟನೆಯ ಭಾಗವಾಗಿ ಕುಂದಾಪುರದಲ್ಲಿಯೂ ಉಪತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗೆ ಮನವಿ ನೀಡಲಾಯಿತು.

ಮಕ್ಕಳ ವಿದ್ಯಾಭ್ಯಾಸಕ್ಕೆ ಉತ್ತೇಜನ ಕೊಡುವ ಮಹತ್ವಾಕಾಂಕ್ಷೆ ಯೋಜನೆಯಲ್ಲಿ ದುಡಿಸಿಕೊಳ್ಳಲಾಗುತ್ತಿದೆ. ಆದರೆ ಅವರ ಕುಟುಂಬ ಮತ್ತು ಅವರ ಮಕ್ಕಳನ್ನೇ ಸರಕಾರ ನಿರ್ಲಕ್ಷ್ಯ ಮಾಡುತ್ತಿರುವುದು ಸರಿಯಲ್ಲ. ಅಸಂಘಟಿತ ಕಾರ್ಮಿಕರಿಗೆ ಕೊಡುತ್ತಿರುವ ಪರಿಹಾರ ಧನವನ್ನು ಬಿಸಿಯೂಟ ನೌಕರರಿಗೂ ಕೊಡಬೇಕೆಂದು ಒತ್ತಾಯಿಸಲಾಯಿತು. ಎಪ್ರಿಲ್‌ ತಿಂಗಳಿನಿಂದ ಪುನಃ ಶಾಲಾ ಆರಂಭವಾಗುವವರೆಗೂ ಸಂಪೂರ್ಣ ವೇತನ ನೀಡಬೇಕು. ಬಿಸಿಯೂಟ ನೌಕರರಿಗೆ ಎಲ್‌ಐಸಿ ಆಧಾರಿತ ಪಿಂಚಣಿ ನೀಡಬೇಕು. ಬಿಸಿಯೂಟ ನೌಕರರನ್ನು ಖಾಯಂಗೊಳಿಸಬೇಕು. ನೌಕರರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರವೇಶ ಶುಲ್ಕ, ಇತರೆ ಶುಲ್ಕಗಳಿಂದ ಸಂಪೂರ್ಣ ವಿನಾಯಿತಿ ನೀಡಬೇಕು.

ಬಿಸಿಯೂಟ ನೌಕರರ ಮತ್ತು ಅವರ ಕುಟುಂಬಗಳಿಗೆ ಉಚಿತ ಆರೋಗ್ಯ ಸೌಲಭ್ಯಗಳು ನೀಡಬೇಕು. ಬಾಕಿ ಇರುವ ವೇತನ ಕೂಡಲೇ ನೀಡಬೇಕು. ಈ ವೇಳೆಯಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್‌ ಕಲ್ಲಾಗರ, ಜಿಲ್ಲಾ ಉಪಾಧ್ಯಕ್ಷ ಮಹಾಬಲವಡೇರ ಹೋಬಳಿ, ಅಕ್ಷರದಾಸೋಹ ನೌಕರರ ಸಂಘದ ತಾಲೂಕು ಮುಖಂಡರಾದ ನಾಗರತ್ನ, ಕೆ. ವಿನೋದ, ಗೀತಾ, ರಾಖೀ, ಮೀನಾಕ್ಷಿ, ರಾಧಿಕಾ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

ಟ್ರಕ್ ಡಿಕ್ಕಿ ಹೊಡೆದು ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ… ಓರ್ವ ಸಾ*ವು

Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ

7-icc

ICC Champions Trophy: ಹೈಬ್ರಿಡ್‌ ಮಾದರಿಯೇ ಅಂತಿಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts

Udupi: ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ಸಾಬೀತು; ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಪ್ರಕಟ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

death

Gangolli: ಲಾರಿ ಪ್ರಯಾಣದ ವೇಳೆ ಕ್ಲೀನರ್‌ ಸಾವು

accident2

Padubidri: ಅಪರಿಚಿತ ವಾಹನ ಢಿಕ್ಕಿ;‌ ಪಾದಚಾರಿಗೆ ತೀವ್ರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

10-up-yodhas

Pro Kabaddi: ದ್ವಿತೀಯ ಸ್ಥಾನಕ್ಕೆ ಯೋಧಾಸ್‌

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.