ಎಪ್ರಿಲ್‌ ಮೊದಲ ವಾರ ಫ್ಲೈಓವರ್‌ ಲೋಕಾರ್ಪಣೆ: ಶೋಭಾ


Team Udayavani, Feb 21, 2020, 10:31 PM IST

kala-28

ಕುಂದಾಪುರ: ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಬಾಬ್ತು ನಗರದಲ್ಲಿ ನಡೆಯುತ್ತಿರುವ ಫ್ಲೈಓವರ್‌ ಕಾಮಗಾರಿ ಮಾರ್ಚ್‌ ಅಂತ್ಯದಲ್ಲಿ ಮುಕ್ತಾಯವಾಗಲಿದ್ದು ಎಪ್ರಿಲ್‌ ಮೊದಲ ವಾರದಲ್ಲಿ ಲೋಕಾರ್ಪಣೆಯಾಗಲಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಅವರು ಶುಕ್ರವಾರ ಕಾಮಗಾರಿಯ ಪ್ರಗತಿ ಪರಿಶೀಲಿಸಿ ಸುದ್ದಿಗಾರರ ಜತೆ ಮಾತನಾಡಿದರು.
ಕಾಮಗಾರಿಯ ಸ್ಥಿತಿಗತಿ ಕುರಿತು ನವಯುಗ ಸಂಸ್ಥೆಯ ಎಂಜಿನಿಯರ್‌ ರಾಘವೇಂದ್ರ ಅವರಿಂದ ಮಾಹಿತಿ ಪಡೆದ ಅವರು, ಫ್ಲೈಓವರ್‌ ಕೆಲಸ ಮಾರ್ಚ್‌ ಅಂತ್ಯದಲ್ಲಿ ಪೂರ್ಣವಾಗಲಿದೆ. ಬಸ್ರೂರು ಮೂರುಕೈ ಅಂಡರ್‌ಪಾಸ್‌ ಕಾಮಗಾರಿ ಜೂನ್‌ಗಿಂತ ಮೊದಲು ಪೂರ್ಣವಾಗಲಿದೆ. ಬೇರೆ ಬೇರೆ ಕಾರಣಗಳಿಂದ ಕಾಮಗಾರಿ ಹಿಂದೆ ಬಿದ್ದಿತ್ತು. ಈಗ ವೇಗ ಪಡೆದುಕೊಂಡಿದೆ ಎಂದು ವಿವರಿಸಿದರು.

ಪುರಸಭೆ ಅಧಿಕಾರ ಇನ್ನೂ ದೊರೆತಿಲ್ಲ. ಚುನಾವಣೆ ಫ‌ಲಿತಾಂಶ ಘೋಷಣೆಯಾಗಿ ಒಂದೂವರೆ ವರ್ಷ ಕಳೆದರೂ ಅಧಿಕಾರಿಗಳೇ ಆಡಳಿತ ನಡೆಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಕಾನೂನು ಹೋರಾಟ ನಡೆದು ಸರಕಾರದಿಂದ ಏನು ಮಾಡಬಹುದೋ ಆ ಕೆಲಸಗಳನ್ನು ಮಾಡಲಾಗುತ್ತಿದೆ. ಅಧಿಕಾರಿಗಳಿಗೂ ಅತಿಯಾದ ಕೆಲಸದ ಒತ್ತಡಗಳಿರುತ್ತವೆ. ಜನಪ್ರತಿನಿಧಿಗಳು ಮಾಡಬಹುದಾದ ಎಲ್ಲ ಕೆಲಸಗಳನ್ನೂ ಅವರು ಮಾಡಲು ಆಗುವುದಿಲ್ಲ. ಸದಸ್ಯರಿಗೆ ಅಧಿಕಾರ ದೊರೆತರೆ ಜನರ ಒಡನಾಟದ ಮೂಲಕ ಕೆಲಸ ಕಾರ್ಯಗಳನ್ನು ನಡೆಸಿಕೊಡಲು, ಅವರ ಸಮಸ್ಯೆಗಳನ್ನು ಆಲಿಸಲು ಸಾಧ್ಯ ಎಂದರು.

ಫ್ಲೈಓವರ್‌ ಕಾಮಗಾರಿ ನನೆಗುದಿಗೆ ಬಿದ್ದಿದ್ದಾಗ ಸಂಸದರು ಜಿಲ್ಲಾಧಿಕಾರಿಗಳ ಜತೆಗೂಡಿ ಇಲ್ಲಿನ ತಾಲೂಕು ಪಂಚಾಯತ್‌ನಲ್ಲಿ ಸಭೆ ನಡೆಸಿದ್ದರು. ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಜಿಲ್ಲಾಧಿಕಾರಿ ಜಿ.ಜಗದೀಶ್‌ ಅವರು ಮಾರ್ಚ್‌ ಅಂತ್ಯದಲ್ಲಿ ಕಾಮಗಾರಿ ಪೂರ್ಣಗೊಳಿಸದಿದ್ದರೆ ಟೋಲ್‌ ಬಂದ್‌ ಮಾಡುವುದಾಗಿ ಎಚ್ಚರಿಸಿದ್ದರು. ಅದಾದ ಬಳಿಕ ಇಲ್ಲಿನ ಸಹಾಯಕ ಕಮಿಷನರ್‌ ಕೆ. ರಾಜು ಅವರು ಕಾಮಗಾರಿ ವೇಗ ತೆಗೆದುಕೊಳ್ಳದೇ ಇದ್ದರೆ ಕೇಸು ಮಾಡುವುದಾಗಿ ಎಚ್ಚರಿಸಿದ್ದರು. ಸಂಘಟನೆಗಳ ಮೂಲಕ ಪ್ರತಿಭಟನೆ ಕೂಡಾ ನಡೆದಿತ್ತು. ಇದಾದ ಬಳಿಕ ಕಾಮಗಾರಿ ಚುರುಕು ಪಡೆದುಕೊಂಡಿತ್ತು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕಿರಣ್‌ ಕೊಡ್ಗಿ, ಜಿಲ್ಲಾ ಪಂಚಾಯತ್‌ ಸದಸ್ಯೆ ಶ್ರೀಲತಾ ಸುರೇಶ್‌ ಶೆಟ್ಟಿ, ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಸುರೇಶ್‌ ಶೆಟ್ಟಿ ಕಾಡೂರು, ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್‌ ಶೆಟ್ಟಿ ಬೀಜಾಡಿ, ಸತೀಶ್‌ ಪೂಜಾರಿ, ಮಾಜಿ ಪ್ರಧಾನ ಕಾರ್ಯದರ್ಶಿ ಭಾಸ್ಕರ ಬಿಲ್ಲವ, ಪುರಸಭೆ ಸದಸ್ಯರಾದ ಮೋಹನದಾಸ ಶೆಣೈ, ರಾಘವೇಂದ್ರ ಖಾರ್ವಿ, ಸಂದೀಪ ಖಾರ್ವಿ, ಶ್ವೇತಾ ಸಂತೋಷ್‌, ವೀಣಾ ಭಾಸ್ಕರ ಮೆಂಡನ್‌, ವನಿತಾ ಎಸ್‌. ಬಿಲ್ಲವ, ಸಂತೋಷ್‌ ಕುಮಾರ್‌ ಶೆಟ್ಟಿ, ಪ್ರೇಮಲತಾ, ಅಶ್ವಿ‌ನಿ ಪ್ರದೀಪ್‌, ಮಾಜಿ ಸದಸ್ಯರಾದ ವಿಜಯ್‌ ಎಸ್‌. ಪೂಜಾರಿ, ಸತೀಶ್‌ ಶೆಟ್ಟಿ, ವಸಂತಿ ಸಾರಂಗ, ಗುಣರತ್ನಾ, ಪುಷ್ಪಾ ಶೇಟ್‌, ಮುಖಂಡರಾದ ಕುತ್ಯಾರು ನವೀನ್‌ ಶೆಟ್ಟಿ, ಉದಯ ಕುಮಾರ್‌ ಶೆಟ್ಟಿ ಉಡುಪಿ, ಗೋಪಾಲ ಕಳಂಜಿ, ಸಂಗೀತಾ, ದಿವಾಕರ ಕಡ್ಗಿ, ಸದಾನಂದ ಬಳ್ಕೂರು, ವಿನೋದ್‌ರಾಜ್‌ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ಆರಂಭಕ್ಕೆ ಮನವಿ
ರೈಲ್ವೇ ಪ್ರಯಾಣಿಕರ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಗಣೇಶ್‌ ಪುತ್ರನ್‌, ವಿವೇಕ್‌ ನಾಯಕ್‌, ಪ್ರವೀಣ್‌ ಕುಮಾರ್‌ ಸಂಸದರನ್ನು ಭೇಟಿ ಮಾಡಿದರು. ಈಗಾಗಲೇ ಬೆಂಗಳೂರು ವಾಸ್ಕೊ ರೈಲು ಆರಂಭಿಸಲು ವೇಳಾಪಟ್ಟಿ ಪ್ರಕಟಗೊಂಡಿದ್ದು ಕೇಂದ್ರ ಸಚಿವರ ಜತೆ ಸಮಾಲೋಚಿಸಿ ಆದಷ್ಟು ಶೀಘ್ರ ಚಾಲನೆ ನೀಡಬೇಕೆಂದು ಮನವಿ ಮಾಡಿದರು.

ಮನವಿ
ಮಹೇಶ್‌ ಶೆಣೈ, ಕೋಡಿ ಅಶೋಕ್‌ ಪೂಜಾರಿ ಮೊದಲಾದವರು ಸಂಸದರನ್ನು ಭೇಟಿ ಮಾಡಿ ವಿನಾಯಕ ಬಳಿ ಕೋಡಿಗೆ ತೆರಳಲು ಹೆದ್ದಾರಿಯಲ್ಲಿ ಯು ಟರ್ನ್ ನೀಡಬೇಕು ಎಂದು ಸಂಸದರಲ್ಲಿ ಮನವಿ ಮಾಡಿದರು. ಪ್ರಸ್ತುತ ನವಯುಗ ಸಂಸ್ಥೆಯವರ ಪ್ರಕಾರ ಬಸ್ರೂರು ಮೂರುಕೈಯಿಂದ ಬಂದ ವಾಹನಗಳು ಕೋಡಿಗೆ ಬರಬೇಕಾದರೆ ದುರ್ಗಾಂಬಾ ಬಳಿ ಯು ಟರ್ನ್ ತೆಗೆದುಕೊಳ್ಳಬೇಕು. ಆದ್ದರಿಂದ ಇಷ್ಟು ದೂರದ ಅಂತರವನ್ನು ಕಡಿಮೆ ಮಾಡಬೇಕೆಂದು ಮನವಿ ಮಾಡಿದರು. ಸಂಸದರು ಇದಕ್ಕೆ ಸ್ಪಂದಿಸಿ ಮುಂದಿನ ದಿನಗಳಲ್ಲಿ ಮಾತನಾಡುವುದಾಗಿ ಹೇಳಿದರು. ಆರಂಭದಲ್ಲಿ ನವಯುಗ ಸಂಸ್ಥೆಯವರು ಇದಕ್ಕೆ ಒಪ್ಪದೇ ಇದ್ದರೂ ನಂತರ ಕಾಮಗಾರಿ ಪೂರ್ಣವಾಗುವ ಸಂದರ್ಭ ವಿನ್ಯಾಸವನ್ನು ನೋಡಿಕೊಂಡು ನಿರ್ಧರಿಸುವುದಾಗಿ ಹೇಳಿದರು.

ಟಾಪ್ ನ್ಯೂಸ್

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8(1

Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ

6(1

Kundapura: ಹತ್ತೂರು ಸೇರುವ ಮುಳ್ಳಿಕಟ್ಟೆಗೆ ಬೇಕು ಬಸ್‌ ನಿಲ್ದಾಣ

Kundapura: ಇಂದು ಉಳ್ಳೂರು ಕೆರೆಗದ್ದೆ ಕಂಬಳ

Kundapura: ಇಂದು ಉಳ್ಳೂರು ಕೆರೆಗದ್ದೆ ಕಂಬಳ

8

Kundapura: ದರ್ಲೆಗುಡ್ಡೆ ಕೊರಗ ಕಾಲನಿ; ಈಗಲೇ ಕುಡಿಯುವ ನೀರಿಗೆ ತತ್ವಾರ

7

Karkala: ಅನಂತಶಯನ ಗುಡ್ಡೆಯಂಗಡಿ ರಸ್ತೆ ದುಃಸ್ಥಿತಿ; ಸವಾರರಿಗೆ ಪ್ರಾಣಸಂಕಟ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

9

Bajpe: ಹೆಜ್ಜೇನು ಕಡಿತದಿಂದ ದಿನಪತ್ರಿಕೆ ವಿತರಕ ಸಾವು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

Jagan Mohan Reddy

Adani ವಿದ್ಯುತ್‌ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್‌ ರೆಡ್ಡಿ

ACT

Mangaluru: ಗಾಂಜಾ ಸೇವನೆ; ಪ್ರತ್ಯೇಕ ಪ್ರಕರಣ; ಇಬ್ಬರು ವಶಕ್ಕೆ

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.