Gangolli: 9 ದಿನ ಕಳೆದರೂ ಮೀನುಗಾರನ ಸಿಗದ ಸುಳಿವು


Team Udayavani, Jan 11, 2025, 7:55 PM IST

8

ಗಂಗೊಳ್ಳಿ: ಗಂಗೊಳ್ಳಿ ಸಮೀಪದ ಸಮುದ್ರದಲ್ಲಿ ಬೋಟಿನಲ್ಲಿ ಜ. 2ರಂದು ಸಂಜೆ ಮೀನುಗಾರಿಕೆಯಲ್ಲಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಕಡಲಿಗೆ ಬಿದ್ದು ನಾಪತ್ತೆಯಾದ ನಾರಾಯಣ ಮೊಗವೀರ (58) ಅವರ ಬಗ್ಗೆ 9 ದಿನ ಕಳೆದರೂ ಇನ್ನೂ ಯಾವುದೇ ಸುಳಿವು ಸಿಕ್ಕಿಲ್ಲ.

ಘಟನೆ ನಡೆದ ದಿನ ಇತರ ಮೀನುಗಾರರು ಬೋಟುಗಳಲ್ಲಿ ಹುಡುಕಾಡಿದ್ದರೂ, ಯಾವುದೇ ಸುಳಿವು ಸಿಕ್ಕಿರಲಿಲ್ಲ. ಕಳೆದ 9 ದಿನಗಳಿಂದಲೂ ಅವರ ಪತ್ತೆಗಾಗಿ ಗಂಗೊಳ್ಳಿಯ ಕರಾವಳಿ ಕಾವಲು ಪಡೆ ಪೊಲೀಸರು, ಬೋಟ್‌ಗಳು, ಮನೆಯವರು, ಮುಳುಗು ತಜ್ಞ ದಿನೇಶ್‌ ಖಾರ್ವಿ ಮತ್ತು ತಂಡ ನಿರಂತರ ಹುಡುಕಾಟ ನಡೆಸುತ್ತಿದ್ದರೂ, ಈವರೆಗೆ ಅವರ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ.

ಪತ್ತೆಗೆ ಹೆಲಿಕಾಪ್ಟರ್‌ ಬಳಕೆಗೆ ಒತ್ತಾಯ:

ಮುಳುಗು ತಜ್ಞ ಈಶ್ವರ್‌ ಮಲ್ಪೆ ತಂಡ ಸಹ ಆಗಮಿಸಿ ಪತ್ತೆ ಕಾರ್ಯಾಚರಣೆಯಲ್ಲಿ ಭಾಗವಹಿಸಿತು. ಮೀನುಗಾರರೊಬ್ಬರು ನಾಪತ್ತೆಯಾಗಿ 9 ದಿನ ಕಳೆದಿದ್ದು, ಇನ್ನೂ ಜಿಲ್ಲಾಡಳಿತ, ಸರಕಾರ ಎಚ್ಚೆತ್ತುಕೊಂಡಿಲ್ಲ. ಆಳ ಸಮುದ್ರದಲ್ಲಿ ನಾಪತ್ತೆಯಾಗಿದ್ದರಿಂದ ಗಂಗೊಳ್ಳಿಯಿಂದ ಗೋವಾ ಗಡಿಯವರೆಗೆ ಹೆಲಿಕಾಪ್ಟರ್‌ ಬಳಸಿ, ಹುಡುಕಾಟ ನಡೆಸಬೇಕಾಗಿ ಈಶ್ವರ್‌ ಮಲ್ಪೆ ಒತ್ತಾಯಿಸಿದ್ದಾರೆ.

ಮನೆಗೆ ಶಾಸಕರ ಭೇಟಿ: 

ನಾರಾಯಣ ಮೊಗವೀರ ಅವರ ಮನೆಗೆ ಶಾಸಕ ಗುರುರಾಜ್‌ ಗಂಟಿಹೊಳೆ ಭೇಟಿ ನೀಡಿ, ಕುಟಂಬಸ್ಥರಿಗೆ ಧೈರ್ಯ ತುಂಬಿದರಲ್ಲದೇ ನಾಪತ್ತೆಯಾದ ಮೀನುಗಾರನ ನ್ನು ಶೀಘ್ರವಾಗಿ ಪತ್ತೆಹಚ್ಚಲು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.

ಇದಕ್ಕೂ ಮೊದಲು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರು ಸಹ ಭೇಟಿ ನೀಡಿ ಮನೆಯವರೊಂದಿಗೆ ಮಾತುಕತೆ ನಡೆಸಿದರು.

ಜಿಲ್ಲಾಡಳಿತ ಪತ್ತೆಗೆ ಸಹಕರಿಸಲಿ:

ಕಳೆದ 9 ದಿನಗಳಿಂದಲೂ ಕರಾವಳಿ ಕಾವಲು ಪಡೆ, ಮೀನುಗಾರರು ಹಾಗೂ ಮನೆಯವರು ಹುಡುಕಾಟ ನಡೆಸುತ್ತಿದ್ದು, ಬೋಟಿಗೆ ಡೀಸೆಲ್‌ ಬಳಸಿ ಹುಡುಕಾಟ ನಡೆಸಿ, ನಡೆಸಿ ವೆಚ್ಚ ಭರಿಸಲು ಬಡ ಕುಟುಂಬಕ್ಕೆ ಆಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ಕುಟುಂಬದ ನೆರವಿಗೆ ಬಂದು  ಪತ್ತೆ ಕಾರ್ಯಕ್ಕೆ ಸಹಕರಿಸಲಿ ಎಂದು ಮೀನುಗಾರರು ಮನವಿ ಮಾಡಿಕೊಂಡಿದ್ದಾರೆ.

 

ಟಾಪ್ ನ್ಯೂಸ್

Indi-Alliaince

Fight Alone: ಮಹಾರಾಷ್ಟ್ರದಲ್ಲೂ ಇಂಡಿ ಮೈತ್ರಿಕೂಟದಲ್ಲಿ ಅಪಸ್ವರ; ಎಂವಿಎ ಮೈತ್ರಿ ಮುಕ್ತಾಯ?

1-reee

T20; ಇಂಗ್ಲೆಂಡ್ ವಿರುದ್ಧದ ಸರಣಿಗೆ ಟೀಮ್ ಇಂಡಿಯಾ ಪ್ರಕಟ: ಶಮಿಗೆ ಅವಕಾಶ

TMK-somanna2

ತುಮಕೂರು ಅಥವಾ ನೆಲಮಂಗಲ ಸಮೀಪವೇ ಮತ್ತೊಂದು ಏರ್‌ಪೋರ್ಟ್‌ ಆಗಲಿ: ವಿ.ಸೋಮಣ್ಣ

1-ayodhya

Ayodhya; ರಾಮಮಂದಿರ ಪ್ರಾಣ ಪ್ರತಿಷ್ಠಾ ಮೊದಲ ವಾರ್ಷಿಕೋತ್ಸವ ಸಂಭ್ರಮ

kejriwal 3

Ramesh Bidhuri ಬಿಜೆಪಿಯ ಸಿಎಂ ಫೇಸ್ ಎಂದು ಅಭಿನಂದನೆ ಸಲ್ಲಿಸಿದ ಕೇಜ್ರಿವಾಲ್!

rape

Kerala; 5 ವರ್ಷಗಳಲ್ಲಿ 64 ಜನರಿಂದ ಲೈಂಗಿ*ಕ ದೌರ್ಜನ್ಯ: ಯುವತಿ ಹೇಳಿಕೆ !!

Vijayendra did not go to Kalaburagi due to Priyank Kharge’s threat: MLA Yatnal

BJP: ಪ್ರಿಯಾಂಕ್ ಖರ್ಗೆ ಧಮ್ಕಿಯಿಂದ ಕಲಬುರಗಿಗೆ ಹೋಗದ ವಿಜಯೇಂದ್ರ: ಶಾಸಕ ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Beejadi: ಗೋ ಕಳವಿಗೆ ಯತ್ನಿಸಿದ ಆರೋಪಿಯ ಸೆರೆ

Beejadi: ಗೋ ಕಳವಿಗೆ ಯತ್ನಿಸಿದ ಆರೋಪಿಯ ಸೆರೆ

4

Kundapur: ಸಿಆರ್‌ಪಿಎಫ್‌ ನಿವೃತ್ತ ಸೈನಿಕ ಕುಸಿದು ಬಿದ್ದು ಸಾವು

Kundapura: ಮದುವೆ ವಾಹನ ಅಡ್ಡಗಟ್ಟಿ ಹಲ್ಲೆ ಆರೋಪಿಗಳು ದೋಷಮುಕ್ತ

Kundapura: ಮದುವೆ ವಾಹನ ಅಡ್ಡಗಟ್ಟಿ ಹಲ್ಲೆ ಆರೋಪಿಗಳು ದೋಷಮುಕ್ತ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Sullia: ಅಸ್ವಸ್ಥ ಮಹಿಳೆ ಸಾವು

Sullia: ಅಸ್ವಸ್ಥ ಮಹಿಳೆ ಸಾವು

ITF Open: ಬೆಂಗಳೂರು ಐಟಿಎಫ್ ಟೆನಿಸ್‌ಗೆ ಅಗ್ರ 100 ರ್‍ಯಾಂಕ್‌ನ ನಾಲ್ವರು

ITF Open: ಬೆಂಗಳೂರು ಐಟಿಎಫ್ ಟೆನಿಸ್‌ಗೆ ಅಗ್ರ 100 ರ್‍ಯಾಂಕ್‌ನ ನಾಲ್ವರು

Indi-Alliaince

Fight Alone: ಮಹಾರಾಷ್ಟ್ರದಲ್ಲೂ ಇಂಡಿ ಮೈತ್ರಿಕೂಟದಲ್ಲಿ ಅಪಸ್ವರ; ಎಂವಿಎ ಮೈತ್ರಿ ಮುಕ್ತಾಯ?

Travis Head: ಶ್ರೀಲಂಕಾ ಪ್ರವಾಸದಲ್ಲಿ ಟ್ರ್ಯಾವಿಸ್‌ ಹೆಡ್‌ ಓಪನಿಂಗ್‌?

Travis Head: ಶ್ರೀಲಂಕಾ ಪ್ರವಾಸದಲ್ಲಿ ಟ್ರ್ಯಾವಿಸ್‌ ಹೆಡ್‌ ಓಪನಿಂಗ್‌?

NZ Vs SL: 3ನೇ ಏಕದಿನ; ಲಂಕಾಕ್ಕೆ ಜಯ, 2-1ರಿಂದ ಸರಣಿ ಕಿವೀಸ್‌ ವಶ

NZ Vs SL: 3ನೇ ಏಕದಿನ; ಲಂಕಾಕ್ಕೆ ಜಯ, 2-1ರಿಂದ ಸರಣಿ ಕಿವೀಸ್‌ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.