Gangolli: ಶ್ರೀ ಮಹಾಂಕಾಳಿ ದೇಗುಲದ ಅಡವಿರಿಸಿದ್ದ 256 ಗ್ರಾಂ ಚಿನ್ನಾಭರಣ ವಶ
Team Udayavani, Oct 7, 2024, 7:30 AM IST
ಗಂಗೊಳ್ಳಿ: ಇಲ್ಲಿನ ಖಾರ್ವಿಕೇರಿಯ ಇತಿಹಾಸ ಪ್ರಸಿದ್ಧ ಶ್ರೀ ಮಹಾಂಕಾಳಿ ದೇವಸ್ಥಾನದಲ್ಲಿ ದೇವರ ಮೇಲಿದ್ದ ಚಿನ್ನಾಭರಣಗಳನ್ನು ಪೂಜೆ ಮಾಡುವ ಅರ್ಚಕನೇ ಕಳವುಗೈದು, ವಿವಿಧೆಡೆ ಅಡವಿಟ್ಟಿದ್ದು, ಈಗ ಎಲ್ಲ 256 ಗ್ರಾಂ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಪ್ರಕರಣ ಸೆ. 21ರಂದು ಬೆಳಕಿಗೆ ಬಂದಿದ್ದು, ಆ ಕೂಡಲೇ ಆರೋಪಿ, ದೇವಸ್ಥಾನದಲ್ಲಿ ಪೂಜೆ ಮಾಡುವ ಅರ್ಚಕ ಶಿರಸಿ ಮೂಲದ ನರಸಿಂಹ ಭಟ್ (43) ಎಂಬಾತನನ್ನು ಪೊಲೀಸರು ಬಂಧಿಸಿದ್ದರು.
ಬಳಿಕ ಗಂಗೊಳ್ಳಿ ಠಾಣಾ ಎಸ್‌ಐಗಳಾದ ಹರೀಶ್ ಆರ್., ಬಸವರಾಜ ಕನಶೆಟ್ಟಿ, ಸಿಬಂದಿ ನಾಗರಾಜ, ಶಾಂತರಾಮ ಶೆಟ್ಟಿ, ರಾಘವೇಂದ್ರ, ಸಂದೀಪ ಕುರಣಿ ಹಾಗೂ ಚಾಲಕ ದಿನೇಶ ಅವರ ತಂಡವು ವಿಚಾರಣೆ ನಡೆಸಿ, ಆರೋಪಿಯು ಅಡವಿಟ್ಟಿದ್ದ ವಿವಿಧ ಬ್ಯಾಂಕ್, ಸಹಕಾರ ಸಂಘಗಳಲ್ಲಿ ಚಿನ್ನಾಭರಣಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 40 ಗ್ರಾಂ ತೂಕದ 3.20 ಲಕ್ಷ ರೂ. ಮೌಲ್ಯದ ಚಿನ್ನದ ಜೋಬಿನ ಸರ, 73 ಗ್ರಾಂ ತೂಕದ 5.84 ಲಕ್ಷ ರೂ. ಮೌಲ್ಯದ ಚಿನ್ನದ ಕಾಸಿ ತಾಳಿ ಸರ, 73 ಗ್ರಾಂ ತೂಕದ 5.84 ಗ್ರಾಂ ತೂಕದ ಚಿನ್ನದ ಕರಿಮಣಿ ಸರ, 6 ಗ್ರಾಂ ತೂಕದ 48 ಸಾವಿರ ರೂ. ಮೌಲ್ಯದ 3 ಚಿನ್ನದ ತಾಳಿ, 64 ಗ್ರಾಂ ತೂಕದ 5.12 ಲಕ್ಷ ರೂ. ಮೌಲ್ಯದ ಚಿನ್ನದ ನೆಕ್ಲೆಸ್ ಸೇರಿದಂತೆ ಒಟ್ಟು 20.48 ಲಕ್ಷ ರೂ. ಮೌಲ್ಯದ 256 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಯು ತನ್ನ ಸ್ವಂತಕ್ಕಾಗಿ ದೇವರ ಮೇಲಿದ್ದ ಚಿನ್ನಾಭರಣಗಳನ್ನು ತೆಗೆದು, ನಕಲಿ ಚಿನ್ನಾಭರಣಗಳನ್ನು ಹಾಕಿರುವುದಾಗಿದೆ. ದೇವರ ಚಿನ್ನಾಭರಣಗಳನ್ನು ಆತ ಕುಂದಾಪುರ, ಬೈಂದೂರು ಭಾಗದ ವಿವಿಧ ಬ್ಯಾಂಕ್ ಹಾಗೂ ಸೊಸೈಟಿಗಳಲ್ಲಿ ಅಡವಿಟ್ಟಿರುವುದಾಗಿದೆ. ವಶಪಡಿಸಿಕೊಂಡ ಚಿನ್ನಾಭರಣಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಅಲ್ಲಿಂದ ದೇವಸ್ಥಾನದವರು ಪಡೆಯಬಹುದಾಗಿದೆ. ಗಂಗೊಳ್ಳಿ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ
Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್ ಆಸ್ತಿ ಈಗ ವರ್ಗಾವಣೆ
Udupi; ಗೀತಾರ್ಥ ಚಿಂತನೆ 144: ವೇದಗಳಿಗೆ ಇನ್ನೊಂದು ಅಪೌರುಷೇಯವಿಲ್ಲ
Maharashtra Politics: ಹೋಳಾಗಿರುವ ಎನ್‌ಸಿಪಿ ಎರಡೂ ಬಣ ಶೀಘ್ರದಲ್ಲೇ ಒಂದಾಗುವ ಸಾಧ್ಯತೆ?
RSS ಭಾಗವತ್‌ರ ಮಂದಿರ ಮಸೀದಿ ಹೇಳಿಕೆಗೆ ಈಗ “ಪಾಂಚಜನ್ಯ’ ಸಮರ್ಥನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.