“ಕಲಿಕೆಯ ಸಮಯದಲ್ಲಿ ಹೆಚ್ಚು ಜಾಗೃತರಾಗಿ’
Team Udayavani, Apr 15, 2019, 6:30 AM IST
ಕೋಟೇಶ್ವರ: ವಿದ್ಯಾರ್ಥಿಗಳು ತಮ್ಮ ಕಲಿಕೆಯ ಸಮಯದಲ್ಲಿ ಹೆಚ್ಚು ಜಾಗೃತರಾದಾಗ ಸಮಾಜದಲ್ಲಿ ದೊಡ್ಡ ಶಕ್ತಿಯಾಗಿ ಬೆಳೆಯಲು ಸಾಧ್ಯ ಎಂದು ಮಂಗಳೂರು ರಥಬೀದಿ ದಯಾನಂದ ಪೈ ಮತ್ತು ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ| ರಾಜಶೇಖರ್ ಹೆಬ್ಟಾರ್ ಹೇಳಿದರು.
ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕೋಟೇಶ್ವರ ಇಲ್ಲಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ದಿಕ್ಸೂಚಿ ಭಾಷಣ ಮಾಡಿದರು.
ವಿದ್ಯಾರ್ಥಿಗಳ ಜೀವನದಲ್ಲಿ ಅಭ್ಯಾಸದ ಜತೆಗೆ ಬದುಕುವ ಕಲೆಯನ್ನು ಕಲಿಸುವ ಶಕ್ತಿ ಇರುವುದು ಕೇವಲ ವಿದ್ಯೆಗೆ ಮಾತ್ರ. ಆದ್ದರಿಂದ ಪಠ್ಯೇತರ ಚಟುವಟಿಕೆಗಳಲ್ಲಿ ತನ್ನನ್ನು ತಾನು ಹೆಚ್ಚು ತೊಡಗಿಸಿಕೊಂಡು ಸಮಾಜದಲ್ಲಿ ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಪ್ರಾಂಶುಪಾಲ ಡಾ| ರಾಜೇಂದ್ರ ಎಸ್. ನಾಯಕ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಉದ್ಯಮಿ ಆನಂದ್ ಸಿ. ಕುಂದರ್, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಮೋಹನ ಕಾರಂತ, ಉಪಾಧ್ಯಕ್ಷ ನಾಗರಾಜ, ಕಾರ್ಯಧರ್ಶಿ ಶಂಕರ ಮೇಸ್ತ, ಕಾಲೇಜಿನ ಸಾಂಸ್ಕೃತಿಕ ಸಂಘದ ಸಂಚಾಲಕಿ ಶ್ರೀಮತಿ ಅಡಿಗ, ಐಕ್ಯೂಎಸಿ ಸಂಚಾಲಕ ಗಣೇಶ್ ಪೈ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ| ಉಷಾದೇವಿ ಜೆ.ಎಸ್., ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ದಿನಕರ ಕಾಂಚನ್, ವಿದ್ಯಾರ್ಥಿ ವೇದಿಕೆಯ ಪದಾಧಿಕಾರಿಗಳಾದ ಅರ್ಪಣಾ ಶೆಟ್ಟಿ, ರಾಘವೇಂದ್ರ, ಅಕ್ಷತಾ ಶೆಟ್ಟಿ, ವಿನಯಾ ಜಿ., ಲಿಖೀತಾ ಎಸ್. ಉಪಸ್ಥಿತರಿದರು.
ಡಾ| ಉಷಾದೇವಿ ಜೆ. ಎಸ್. ಸ್ವಾಗತಿಸಿ, ದೀಕ್ಷಿತ್ ನಿರೂಪಿಸಿದರು. ರಾಘವೇಂದ್ರ ವಂದಿಸಿದರು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
R Ashwin: ಅಶ್ವಿನ್‌ಗೆ ಖೇಲ್ ರತ್ನ; ಕ್ರೀಡಾ ಸಚಿವರಿಗೆ ಸಂಸದರಿಂದ ಪತ್ರ
Virat Kohli: ಬಾಕ್ಸಿಂಗ್ ಡೇ ಟೆಸ್ಟ್‌ಗೂ ಮುನ್ನ ವಿರಾಟ್ ನೂತನ ಕೇಶ ವಿನ್ಯಾಸ
Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ
Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.