ಲಾಕ್‌ಡೌನ್ ಸಮಯದಲ್ಲಿ ತೋಡು ದುರಸ್ತಿ: ಹತ್ತಾರು ವರ್ಷಗಳ ನೆರೆ ಸಮಸ್ಯೆಗೆ ಪರಿಹಾರ
Team Udayavani, May 13, 2020, 10:55 AM IST
ಉದ್ಯೋಗ ಖಾತ್ರಿ ಕಾಮಗಾರಿನಿರತ ಕಾರ್ಮಿಕರು.
ಕೋಟ: ಕೋಟ ಗ್ರಾ.ಪಂ. ವ್ಯಾಪ್ತಿಯ ಮೂಡುಗಿಳಿಯಾರು ಬಂಕನಕೆರೆ ಸಂಪರ್ಕಿಸುವ ತೋಡಿನಲ್ಲಿ ಹೂಳು ತುಂಬಿಕೊಂಡು ನೀರು ಸರಾಗವಾಗಿ ಹರಿಯದೆ ಪ್ರತಿವರ್ಷ ಹತ್ತಾರು ಎಕ್ರೆ ಕೃಷಿಭೂಮಿ ನೆರೆಗೆ ಆಹುತಿಯಾಗುತಿತ್ತು ಹಾಗೂ ಇದರಿಂದಾಗಿ ಸುತ್ತಲಿನ ಕೃಷಿಭೂಮಿ ಹಡಿಲು ಹಾಕಲಾಗಿತ್ತು. ಪ್ರಸ್ತುತ ಲಾಕ್‌ಡೌನ್ ಸಂದರ್ಭವನ್ನು ಬಳಸಿಕೊಂಡ ಸ್ಥಳೀಯರು ಉದ್ಯೋಗ ಖಾತರಿ ಯೋಜನೆಯ ಮೂಲಕ ತೋಡಿನ ಹೂಳೆತ್ತುವ ಕಾರ್ಯಕ್ಕೆ ಮುಂದಾಗಿದ್ದು ದಶಕಗಳ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಗ್ರಾಮಸ್ಥರು ಎದುರಿಸುತ್ತಿರುವ ಸಮಸ್ಯೆಯನ್ನು ಗುರುತಿಸಿ ಗ್ರಾ.ಪಂ. ಅಧ್ಯಕ್ಷೆ ವನಿತಾ ಶ್ರೀಧರ ಆಚಾರ್ಯ, ಉಪಾಧ್ಯಕ್ಷ ರಾಜಾರಾಮ್ ಶೆಟ್ಟಿ, ಸದಸ್ಯೆ ವಿಶಾಲಾ ಹಾಗೂ ಕೋಟ ವ್ಯಾವಸಾಯಿಕ ಸೇವಾ ಸಹಕಾರಿ ಸಂಘದ ಅಧ್ಯಕ್ಷ ತಿಮ್ಮ ಪೂಜಾರಿ ಮುಂತಾದವರ ಉಸ್ತುವಾರಿಯಲ್ಲಿ, ಪಿಡಿಒ ಸುರೇಶ್ ಅವರ ವಿಶೇಷ ಕಾಳಜಿ ಮೂಲಕ ಅನದಾನ ಬಿಡುಗಡೆಗೊಳಿಸುವಲ್ಲಿ ಯಶಸ್ವಿಯಾಗಿದ್ದು, ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಅವರ ವಿಶೇಷ ಕಾಳಜಿಗೆ ಗ್ರಾಮಸ್ಥರು ಧನ್ಯವಾದ ಸಲ್ಲಿಸಿದ್ದಾರೆ. ಕಾರ್ಮಿಕರಿಗೆ ಗ್ರಾಮದ ಕೆಲವು ದಾನಿಗಳು ಉಪಾಹಾರ ಮುಂತಾದ ವ್ಯವಸ್ಥೆಗಳನ್ನು ನೀಡುತ್ತಿದ್ದು ಎಲ್ಲರೂ ಲವ-ಲವಿಕೆಯಿಂದ ಕೆಲಸದಲ್ಲಿ ಭಾಗವಹಿಸುತ್ತಿದ್ದಾರೆ.
ಅನುದಾನಕ್ಕೆ ಬೇಡಿಕೆ
ಸುಮಾರು 4ಕಿ.ಮೀ. ವ್ಯಾಪ್ತಿಯ ಈ ತೋಡನ್ನು 3 ಲಕ್ಷ ರೂ. ಅನುದಾನ ಬಳಸಿ ದುರಸ್ತಿಗೆ ಮುಂದಾಗಿದ್ದು, ಸ್ಥಳೀಯ 40 ಮಂದಿ ಪ್ರತಿದಿನ ಕಾಮಗಾರಿಯಲ್ಲಿ ತೊಡಗಿದ್ದಾರೆ. ಈಗಾಗಲೇ ಅರ್ಧದಷ್ಟು ಕೆಲಸ ಮುಗಿಸಿದ್ದು ಮಳೆಗಾಲ ಆರಂಭವಾಗುವ ತನಕ ಕಾಮಗಾರಿ ಮುಂದುವರಿಯಲಿದೆ ಮತ್ತು ಹೆಚ್ಚುವರಿ ಅನುದಾನಕ್ಕೂ ಬೇಡಿಕೆ ಸಲ್ಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು
Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.