ಕಾಮನ್‌ವೆಲ್ತ್ ಪದಕ ವೀರ ಗುರುರಾಜ್ ಇಂದು ಹುಟ್ಟೂರಿಗೆ; ಗೌರವ
Team Udayavani, Aug 7, 2022, 7:00 AM IST
ಕುಂದಾಪುರ: ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಕಂಚಿನ ಪದಕ ಗೆದ್ದ ವೇಟ್‌ಲಿಫ್ಟರ್ ಗುರುರಾಜ್ ಪೂಜಾರಿ ಶನಿವಾರ ಭಾರತಕ್ಕೆ ಬಂದಿಳಿದಿದ್ದು, ಜೂ. 7ರಂದು ಹುಟ್ಟೂರು ಕುಂದಾಪುರಕ್ಕೆ ಆಗಮಿಸಲಿದ್ದಾರೆ. ಅವರ ಸ್ವಾಗತಕ್ಕೆ ಭರದ ಸಿದ್ಧತೆ ನಡೆಯುತ್ತಿದೆ.
ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ 22ನೇ ಕಾಮನ್‌ವೆಲ್ತ್ ಗೇಮ್ಸ್‌ನ 61 ಕೆಜಿ ವಿಭಾಗದ ವೇಟ್‌ಲಿಫ್ಟಿಂಗ್‌ನಲ್ಲಿ 269 ಕೆಜಿ ಭಾರವೆತ್ತಿದ ಗುರುರಾಜ್ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದರು. ಇದು ಅವರ ಎರಡನೇ ಕಾಮನ್‌ವೆಲ್ತ್ ಗೇಮ್ಸ್ ಪದಕವಾಗಿದೆ. ಕಳೆದ ಬಾರಿ ಗೋಲ್ಟ್ಕೋಸ್ಟ್‌ನಲ್ಲಿ ನಡೆದ ಪಂದ್ಯಾವಳಿಯಲ್ಲಿ 56 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದಿದ್ದರು.
ಸ್ವಾಗತಕ್ಕೆ ಸಜ್ಜಾದ ಹುಟ್ಟೂರು
ತಮ್ಮೂರಿನ ಪ್ರತಿಭೆ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಎರಡೆರಡು ಬಾರಿ ಪದಕ ಗೆದ್ದ ಸಾಧನೆಯನ್ನು ಇಲ್ಲಿನ ಜನರೆಲ್ಲ ಸಂಭ್ರಮಿಸಿದ್ದಾರೆ. ಈಗ ಪದಕದೊಂದಿಗೆ ಆಗಮಿಸುತ್ತಿರುವ ಅವರನ್ನು ಸ್ವಾಗತಿಸಲು ಇಡೀ ಊರು ಸಜ್ಜಾಗಿದೆ. ಜೂ. 7ರಂದು ಬೆಂಗಳೂರಿಗೆ, ಅಲ್ಲಿಂದ ವಿಮಾನದಲ್ಲಿ ಮಂಗಳೂರಿಗೆ ಬರಲಿದ್ದಾರೆ. ಬಳಿಕ ಉಡುಪಿ ಜಿಲ್ಲಾಡಳಿತದಿಂದ ಅಭಿನಂದನೆ ಸ್ವೀಕರಿಸಿ ಅಪರಾಹ್ನ 2.30ರ ಸುಮಾರಿಗೆ ಕುಂದಾಪುರಕ್ಕೆ ಆಗಮಿಸಲಿದ್ದಾರೆ.
ನ್ಯೂ ಹಕ್ಯುಲಸ್ ಜಿಮ್‌ನಲ್ಲಿ ಸಮ್ಮಾನ ನಡೆಯಲಿದ್ದು, ಎಸಿ ಕೆ. ರಾಜು, ಡಿವೈಎಸ್‌ಪಿ ಶ್ರೀಕಾಂತ್, ಯುವಜನಾ ಸೇವಾ ಮತ್ತು ಕ್ರೀಡಾ ಇಲಾಖೆಯ ಕುಸುಮಾಕರ ಶೆಟ್ಟಿ, ಕಲಾಕ್ಷೇತ್ರ ಕುಂದಾಪುರದ ಕಿಶೋರ್ ಕುಮಾರ್, ರಾಜೇಶ್ ಕಾವೇರಿ, ಜಿಮ್‌ನ ಸತೀಶ್ ಖಾರ್ವಿ ಮತ್ತಿತರರು ಭಾಗವಹಿಸಲಿದ್ದಾರೆ. ಬಳಿಕ ನಗರದಲ್ಲಿ ಮೆರವಣಿಗೆ ನಡೆಯಲಿದೆ.
ಹುಟ್ಟೂರಲ್ಲಿ ಗೌರವ
ಅಲ್ಲಿಂದ ಕೊಲ್ಲೂರು, ಮಾರಣಕಟ್ಟೆ ದೇಗುಲಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಹುಟ್ಟೂರಾದ ವಂಡ್ಸೆ ಸಮೀಪದ ಚಿತ್ತೂರಿನಲ್ಲಿ ಹುಟ್ಟೂರ ಸಮ್ಮಾನ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.