ಸ್ಕಾರ್ಫ್‌, ಶಾಲು ಧರಿಸಿ ಬಂದವರಿಗೆ ಗೇಟಿನಲ್ಲಿ ತಡೆ


Team Udayavani, Feb 4, 2022, 4:40 AM IST

ಸ್ಕಾರ್ಫ್‌, ಶಾಲು ಧರಿಸಿ ಬಂದವರಿಗೆ ಗೇಟಿನಲ್ಲಿ ತಡೆ

ಕುಂದಾಪುರ: ಇಲ್ಲಿನ ಸರಕಾರಿ ಜೂನಿಯರ್‌ ಕಾಲೇಜಿನಲ್ಲಿ ಬುಧವಾರ ಆರಂಭಗೊಂಡ ಹಿಜಾಬ್‌ ವಿವಾದ ಗುರುವಾರ ವಿವಿಧೆಡೆಗೆ ವ್ಯಾಪಿಸಿದೆ.

ಸರಕಾರಿ ಪದವಿ ಪೂರ್ವ ಕಾಲೇಜಿಗೆ ಹಿಜಾಬ್‌ ಧರಿಸಿ ಬಂದ ವಿದ್ಯಾರ್ಥಿನಿಯರನ್ನು ಸರಕಾರದ ಆದೇಶದ ಸಲುವಾಗಿ ಆವರಣದೊಳಗೆ ಬಿಡಲು ನಿರಾಕರಿಸಲಾಯಿತು. ಒಬ್ಬ ವಿದ್ಯಾರ್ಥಿನಿ ತನಗೆ ಶಿಕ್ಷಣ ಮುಖ್ಯ ಎಂದು ಶಾಲಾ ಶಿಸ್ತಿಗೆ ಒಳಪಟ್ಟು ಹಿಜಾಬ್‌ ತೆಗೆದು ತರಗತಿಗೆ ಹಾಜರಾದಳು. ಎಲ್ಲರ ಮನ ಒಲಿಸಲು ನೋಡಿದ ಪ್ರಾಂಶುಪಾಲರ ಪ್ರಯತ್ನ ವಿಫ‌ಲವಾಯಿತು. ಅಂತೆಯೇ ಶಾಲು ಧರಿಸಿ ಬಂದರೆ ಪ್ರವೇಶ ಇಲ್ಲ ಎಂದು ಹೇಳಿದ್ದ ಕಾರಣ ಯಾರೂ ಶಾಲು ಧರಿಸಿ ಬರಲಿಲ್ಲ.  ಸರಕಾರದ ಆದೇಶದಂತೆ ಕಾಲೇಜು ಸಮವಸ್ತ್ರ ಸಂಹಿತೆಯನ್ನು ಎಲ್ಲ ವಿದ್ಯಾರ್ಥಿಗಳು ಪಾಲಿಸಬೇಕು. ಇಲ್ಲದಿದ್ದರೆ ಪ್ರವೇಶ ಇಲ್ಲ ಎಂದು ಹೆತ್ತವರಿಗೂ, ವಿದ್ಯಾರ್ಥಿಗಳಿಗೂ ಸ್ಪಷ್ಟವಾಗಿ ಸೂಚಿಸಲಾಗಿದೆ. ಶಾಸಕರು ಹಾಗೂ ಸಚಿವರು ಖುದ್ದು ಹೆತ್ತವರ ಜತೆ ಮಾತನಾಡಿದ್ದಾರೆ. ಆದ್ದರಿಂದ ಹಿಜಾಬ್‌ ಧರಿಸಿ ಕಾಲೇಜು ಆವರಣ ಪ್ರವೇಶಕ್ಕೆ ನಿರ್ಬಂಧ ಹೇರಲಾಗುತ್ತಿದೆ ಎಂದು ಪ್ರಾಂಶುಪಾಲರು ಹೇಳಿದರು.

ಆರಂಭದಲ್ಲಿ ಸರಕಾರದ ಆದೇಶ ಎಲ್ಲಿದೆ, ಸಂವಿಧಾನ ಪ್ರಕಾರ ನಮಗೆ ಹಕ್ಕಿದೆ ಎಂದ ವಿದ್ಯಾರ್ಥಿನಿಯರು ಬಳಿಕ ಭಾವುಕರಾದರು. ನಿಮ್ಮ ಮನೆ ಮಗಳಿಗೂ ಇಂತಹ ಪರಿಸ್ಥಿತಿ ಬಂದರೆ ಏನು ಮಾಡುತ್ತಿದ್ದೀರಿ ಸರ್‌, ನಾವು ನಿಮ್ಮ ಬಳಿ ವಿದ್ಯೆ ಕಲಿತವರು. ಶಿಕ್ಷಣಕ್ಕಾಗಿ ಬಂದಿದ್ದೇವೆ. ನಮ್ಮಿಂದಾಗಿ ಯಾರಿಗೆ ತೊಂದರೆಯಾಗಿದೆ. ಇಷ್ಟರವರೆಗೆ ಧರಿಸಿ ಬರುತ್ತಿದ್ದೆವು. ಈಗ ಏಕಾಏಕಿ ತಡೆದರೆ ಹೇಗೆ. ಸಮವಸ್ತ್ರದ ಬಣ್ಣದ್ದೇ ಬಟ್ಟೆ ತಲೆಗೆ ಹಾಕಿಕೊಳ್ಳುತ್ತೇವೆ. ಇನ್ನು ಎರಡು ತಿಂಗಳು ಕಲಿಕೆಗೆ, ಪರೀಕ್ಷೆಗೆ ಬರೆಯಲು ಅವಕಾಶ ಕೊಡಿ. ಆಮೇಲೆ ಎಲ್ಲಾದರೂ ಬೇರೆ ಸಂಸ್ಥೆಗೆ ಸೇರಿಕೊಳ್ಳುತ್ತೇವೆ ಎಂದು ಮನವಿ ಮಾಡುತ್ತಾ ಕಣ್ಣೀರಿಟ್ಟರು. ಸಂಜೆಯವರೆಗೆ ವಿದ್ಯಾರ್ಥಿಗಳು ಗೇಟ್‌ ಬಳಿಯೇ ನಿಂತ ದೃಶ್ಯ ಕಂಡುಬಂತು. ಮಧ್ಯಾಹ್ನದ ಬುತ್ತಿ ಊಟವನ್ನು ರಸ್ತೆ ಬದಿಯೇ ನಡೆಸಿದರು.

ಸಿಪಿಐ ಗೋಪಿಕೃಷ್ಣ, ಎಸ್‌ಐ ಸದಾಶಿವ ಗವರೋಜಿ, ಸುಧಾಪ್ರಭು ಹಾಗೂ ಪೊಲೀಸರು ಭೇಟಿ ನೀಡಿದ್ದರು. ಅಹಿತಕರ ಘಟನೆ ನಡೆಯ ದಂತೆ ಜನಸೇರಲು ಬಿಡುತ್ತಿರಲಿಲ್ಲ.

ವಿಸ್ತರಣೆ :

ಶಾಲು, ಸ್ಕಾರ್ಫ್ ವಿವಾದ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳಿಗೆ ವಿಸ್ತರಣೆಯಾಗಿದೆ. ನಗರದ ಖಾಸಗಿ ಕಾಲೇಜೊಂದರಲ್ಲಿ ನೂರಾರು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಾಗ ಪ್ರವೇಶ ನಿರಾಕರಿಸಲಾಗಿದೆ. ಈ ಪರಿಸರದಲ್ಲಿ ಗುರುವಾರ ಒಂದೇ ದಿನ 700ರಷ್ಟು ಕೇಸರಿ ಶಾಲು ಮಾರಾಟವಾಗಿತ್ತು! ಕಾಳಾವರ, ನಾವುಂದ ಮೊದಲಾದೆಡೆಯೂ ಇಂತಹ ಪ್ರಯತ್ನ ನಡೆದಿದ್ದು ಎಲ್ಲೂ ಸ್ಕಾರ್ಫ್ ಹಾಗೂ ಶಾಲು ಧರಿಸಿ ಕಾಲೇಜಿಗೆ ಪ್ರವೇಶ ನೀಡಲಿಲ್ಲ.

ಸರಕಾರದ ನಿಯಮ ಎಲ್ಲರೂ ಪಾಲಿಸಬೇಕು: ಸಚಿವ  ಅಂಗಾರ :

ಉಡುಪಿ:  ಒಂದೊಂದು ಕಾಲೇಜಿಗೂ ಪ್ರತ್ಯೇಕ ನಿಯಮ ಇಲ್ಲ. ಸರಕಾರದ ನಿಯಮವನ್ನು ಎಲ್ಲರೂ ಪಾಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಅಂಗಾರ ನಿರ್ದೇಶನ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಗುರುವಾರ ತಮ್ಮ ಕಚೇರಿ ಉದ್ಘಾ ಟನೆಯ ಅನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದಂತೆ ತಜ್ಞರ ಸಮಿತಿಯ ವರದಿಯನ್ನು ತರಿಸಿ ಕೊಳ್ಳಲಾಗುವುದು ಮತ್ತು ಜಿಲ್ಲಾಡಳಿತದೊಂದಿಗೂ ಚರ್ಚಿಸಲಿದ್ದೇನೆ. ಸಮವಸ್ತ್ರಕ್ಕೆ ಸಂಬಂಧಿಸಿದಂತೆ ಒಂದೊಂದು ಶಾಲೆ ಅಥವಾ ಕಾಲೇಜಿಗೆ ಪ್ರತ್ಯೇಕ ನಿಯಮ ಇಲ್ಲ. ಸರಕಾರದ ನಿಯಮ ಮೀರಿ ವರ್ತಿಸುವವರಿಗೆ ಏನು ಕ್ರಮ ತೆಗೆದುಕೊಳ್ಳಬೇಕೋ ಅದು ಆಗಲಿದೆ. ಹಿಜಾಬ್‌ ಧರಿಸಿ ಬರುವುದು, ಅದಕ್ಕೆ ಪ್ರತಿಯಾಗಿ ಕೇಸರಿ ಶಾಲು ಧರಿಸಿ ಕಾಲೇಜಿಗೆ ಹೋಗುವುದು ಸರಿಯಲ್ಲ. ಈ ಬಗ್ಗೆ ಸಂಪೂರ್ಣ ಮಾಹಿತಿ ತರಿಸಿಕೊಳ್ಳಲಿದ್ದೇನೆ ಎಂದು ಹೇಳಿದರು.

ಟಾಪ್ ನ್ಯೂಸ್

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

11

Missing Case: ಪತಿ ನಾಪತ್ತೆ; ಪತ್ನಿಯ ದೂರು

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

9

Kota: ಶಿರಿಯಾರ; ಅಕ್ರಮ ಗಣಿಗಾರಿಕೆಗೆ ದಾಳಿ

POlice

Gangolli: ಅಕ್ರಮ ಕೆಂಪು ಕಲ್ಲು ಸಾಗಾಟ; ಪ್ರಕರಣ ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.