ಕೊಲ್ಲೂರು ನಾಗಮಂಡಲೋತ್ಸವಕ್ಕೆ ಹೊರೆಕಾಣಿಕೆ ಸಮರ್ಪಣೆ

Team Udayavani, Mar 9, 2017, 2:59 PM IST

09-KUNDAPUR-6.jpg

ಕೊಲ್ಲೂರು: ಕೊಲ್ಲೂರಿನಲ್ಲಿ ಮಾರ್ಚ್‌ 10ರಂದು ನಡೆಯಲಿರುವ ಅಷ್ಟಪವಿತ್ರ ನಾಗಮಂಡಲೋತ್ಸವದ ಹೊರೆ ಕಾಣಿಕೆ ಸಮರ್ಪಣೆ ಮಾ. 6ರಿಂದ 8ರ ತನಕ ನಡೆಯಿತು.

ಕುಂದಾಪುರ ತಾಲೂಕಿನ ವಿವಿಧ ಗ್ರಾಮಗಳಿಂದ, ಸಂಘ ಸಂಸ್ಥೆಗಳಿಂದ ಹಸಿರು ಹೊರೆ ಕಾಣಿಕೆ ಸಮರ್ಪಣೆ ಮಾಡಲಾಯಿತು. ಮೂರು ದಿನಗಳ ಕಾಲ ನಿತ್ಯವೂ ವಿವಿಧ ಭಾಗಗಳಿಂದ  ಹೊರೆ ಕಾಣಿಕೆ ಹರಿದು ಬಂದವು.
ಸಿಂಗಾರ ಹೂವಿನ ಗೊನೆ, ಅಕ್ಕಿ, ತೆಂಗಿನಕಾಯಿ, ಬೆಲ್ಲ, ವಿವಿಧ ಧಾನ್ಯಗಳು,  ತರಕಾರಿ, ಹಣ್ಣು, ಅಡಿಕೆ ಹೀಗೆ ಸಾಕಷ್ಟು ಪ್ರಮಾಣದಲ್ಲಿ  ಹೊರೆಕಾಣಿಕೆ ನಾಗದೇವರ ಪುಣ್ಯ ಕಾರ್ಯಕ್ಕೆ ಸಮರ್ಪಣೆಗೊಂಡಿತು. ಭಕ್ತಾದಿಗಳು ಸ್ವಯಂಪ್ರೇರಿತವಾಗಿ ಭಕ್ತಿ ಪೂರ್ವಕವಾಗಿ ಹೊರೆ ಕಾಣಿಕೆ ಸಲ್ಲಿಸಿ ಈ ಮಹತ್ಕಾರ್ಯದಲ್ಲಿ ಭಾಗಿಯಾಗುತ್ತಿರುವುದು ಕಂಡು ಬಂತು.

ಹೊರೆಕಾಣಿಕೆ ಸಲ್ಲಿಸಿದ ಪ್ರತಿ ಯೋರ್ವರನ್ನು ಬ್ಯಾಂಡ್‌ ವಾದ್ಯ, ತಾಂಬೂಲ, ಶಾಲು ನೀಡುವ ಮೂಲಕ ವಿನಯ ಪೂರ್ವಕವಾಗಿ  ಸೇವಾರ್ಥಿಗಳಾದ ನಯನ ರಮೇಶ ಗಾಣಿಗ, ಮಕ್ಕಳಾದ ಪವನ್‌ ಗಾಣಿಗ, ಪ್ರಸನ್ನ ಗಾಣಿಗ, ಪೃಥ್ವಿನ್‌ ಗಾಣಿಗ ಹಾಗೂ ಸ್ವಾಗತ ಸಮಿತಿಯ ಪದಾಧಿಕಾರಿಗಳು, ಗ್ರಾಮಸ್ಥರು ಸ್ವಾಗತಿಸಿಕೊಂಡರು. ಪ್ರತಿಯೋರ್ವ ಹಸಿರು ವಾಣಿ ಸಲ್ಲಿಸಿದವರಿಗೂ ಕೃತಜ್ಞತಾ ಪತ್ರ ನೀಡಿ ಗೌರವಿಸಲಾಯಿತು.

ಕೊಲ್ಲೂರು ಪರಿಸರದಲ್ಲಿ ನಡೆಯುತ್ತಿರುವ ಈ ಅಷ್ಟಪವಿತ್ರ ನಾಗಮಂಡಲೋತ್ಸವದ ಯಶಸ್ಸಿಗೆ ಅಪೂರ್ವವಾದ ಭಕ್ತಾದಿಗಳ ಬೆಂಬಲ ಕಂಡು ಬರುತ್ತಿದ್ದು, ಕೊಲ್ಲೂರು ನಾಗಮಂಡಲ ವಿಶಿಷ್ಟತೆಗಳೊಂದಿಗೆ ಮಾದರಿ ನಾಗಮಂಡಲವಾಗಿ ಮೂಡಿಬರಲಿದೆ ಎನ್ನುವ ನಿರೀಕ್ಷೆಗಳು ಕಂಡು ಬರುತ್ತಿವೆ.

ಈಗಾಗಲೇ ಸಹಸ್ರಾರು ಸಂಖ್ಯೆ ಯಲ್ಲಿ ಆಸುಪಾಸಿನ ಗ್ರಾಮಸ್ಥರು ನಾಗಮಂಡಲೋತ್ಸವದ  ವಿವಿಧ ಕಾರ್ಯ ಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು ಇಡೀ ಕೊಲ್ಲೂರು ನಾನಾ ರೀತಿಯ ಬ್ಯಾನರ್‌ಗಳಿಂದ ಅಲಂಕೃತಗೊಂಡಿದ್ದು ಆಗಮಿಸುವ ಭಕ್ತರಿಗೆ ವಾಹನ ನಿಲುಗಡೆ ಹಾಗೂ ಸಂಚಾರ ವ್ಯವಸ್ಥೆಗಾಗಿ ಸೌಕರ್ಯ ಒದಗಿಸಲಾಗಿದ್ದು ಇಲ್ಲಿನ ಸರಕಾರಿ ಪದವಿಪೂರ್ವ ಕಾಲೇಜು, ಲಲಿತಾಂಬಿಕಾ ವಸತಿಗೃಹ, ಕಾಶಿ ಹೊಳೆ ಬಳಿಯಲ್ಲಿ ವಿಶೇಷ ವ್ಯವಸ್ಥೆ ಏರ್ಪಡಿಸಲಾಗಿದೆ. ಭಕ್ತರಿಗೆ ಶೌಚಾಲಯದ ವ್ಯವಸ್ಥೆ ಏರ್ಪಡಿಸಲಾಗಿದೆ ಎಂದು ಕಾರ್ಯಕ್ರಮದ ನಿರ್ವಾಹಕ ರಮೇಶ್‌ ಗಾಣಿಗ ಕೊಲ್ಲೂರು ತಿಳಿಸಿದ್ದಾರೆ. 

ಕಾರ್ಯಕ್ರಮದಲ್ಲಿ ಕುಂದಾಪುರ ವ್ಯಾಸರಾಯ ಮಠದ ಮಠಾಧೀಶ ಶ್ರೀ ಲಕ್ಷ್ಮೀಂದ್ರತೀರ್ಥ ಶ್ರೀಪಾದಂಗಳವರು ಆಶೀರ್ವದಿಸಲಿದ್ದು, ಧಾರ್ಮಿಕ ಕಾರ್ಯಕ್ರಮದ ಅಧ್ಯಕ್ಷತೆ ಧಾರ್ಮಿಕ ಮುಂದಾಳು ಬಿ. ಅಪ್ಪಣ್ಣ ಹೆಗ್ಡೆ ವಹಿಸುವರು. ಕೊಲ್ಲೂರು ದೇಗುಲದ ಅರ್ಚಕ ಡಾ| ಕೆ. ನರಸಿಂಹ ಅಡಿಗ, ಸಚಿವ ಕೆ. ಪ್ರಮೋದ್‌ ಮಧ್ವರಾಜ್‌, ಶಾಸಕ ಕೆ. ಗೋಪಾಲ ಪೂಜಾರಿ, ಹಾಲಾಡಿ ಶ್ರೀನಿವಾಸ ಶೆಟ್ಟಿ, ಕೆ. ಪ್ರತಾಪಚಂದ್ರ ಶೆಟ್ಟಿ, ಕೋಟ ಶ್ರೀನಿವಾಸ ಪೂಜಾರಿ, ಎಸ್‌.ಸಿ.ಡಿ.ಸಿ.ಸಿ. ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಮೊದಲಾದ ಗಣ್ಯರು ಅತಿಥಿಗಳಾಗಿ ಆಗಮಿಸುವರು.

ಟಾಪ್ ನ್ಯೂಸ್

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

8

Kundapura: ಬೋಟ್‌ ರೈಡರ್‌ ನಾಪತ್ತೆ; ಸಿಗದ ಸುಳಿವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.