ಜಾಲಾಡಿ-ಹೊಸ್ಕಳಿ: ಇನ್ನೂ ಆಗದ ನದಿ ದಂಡೆ

ಗದ್ದೆಗಳಿಗೆ ನುಗ್ಗುತ್ತಿದೆ ಉಪ್ಪು ನೀರು , ರೈತರಿಂದಲೇ ತಾತ್ಕಾಲಿಕ ಬದು ನಿರ್ಮಾಣ

Team Udayavani, Mar 22, 2021, 3:30 AM IST

ಜಾಲಾಡಿ-ಹೊಸ್ಕಳಿ: ಇನ್ನೂ ಆಗದ ನದಿ ದಂಡೆ

ಹೆಮ್ಮಾಡಿ:  ಉಪ್ಪು ನೀರು ತಡೆಗೆ ಜಾಲಾಡಿ- ಹೊಸ್ಕಳಿಯಲ್ಲಿ ಇನ್ನೂ ನದಿ ದಂಡೆ ನಿರ್ಮಾಣಗೊಳ್ಳದ ಕಾರಣ ಹೆಮ್ಮಾಡಿ ಹಾಗೂ ಕಟ್‌ ಬೆಲೂ¤ರು ಗ್ರಾ.ಪಂ. ವ್ಯಾಪ್ತಿಯ ನೂರಾರು ಎಕರೆ ಗದ್ದೆ ಪ್ರದೇಶಗಳಿಗೆ ಈಗ ಉಪ್ಪು ನೀರು ನುಗ್ಗುತ್ತಿದ್ದು, ಇದರಿಂದ ಈ ಭಾಗದ ರೈತರಿಗೆ ಮುಂಬರುವ ಮುಂಗಾರು ಹಂಗಾಮಿನ ಕೃಷಿ ಕಾರ್ಯಕ್ಕೆ ತೊಡಕಾಗುವ ಭೀತಿ ಆವರಿಸಿದೆ.

ಹೆಮ್ಮಾಡಿ – ಕಟ್‌ಬೆಲೂ¤ರು ಪಂಚಾಯತ್‌ ವ್ಯಾಪ್ತಿಯ ಜಾಲಾಡಿ, ಹೊಸ್ಕಳಿ ಭಾಗದ 70ಕ್ಕೂ ಹೆಚ್ಚು ಮಂದಿ ರೈತರ 100 ಎಕರೆಗಳಿಗೂ ಮಿಕ್ಕಿ ಪ್ರದೇಶದ ಗದ್ದೆಗಳಿಗೆ ಉಪ್ಪು ನೀರು ನುಗ್ಗುತ್ತಿದೆ. ರಾಜಾಡಿ ವ್ಯಾಪ್ತಿಗೆ ಅನುಕೂಲವಾಗುವಂತೆ 4.44 ಕೋ. ರೂ. ವೆಚ್ಚದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣವಾದ ಬಳಿಕ ಈ ಜಾಲಾಡಿ ಪರಿಸರದ ಗದ್ದೆಗಳಿಗೆ ಉಪ್ಪು ನೀರಿನ ಹಾವಳಿ ಹೆಚ್ಚಾಗಿದೆ. ಇದಷ್ಟೇ ಅಲ್ಲದೆ ಈ ಭಾಗದ ಬಾವಿಗಳ ನೀರಲ್ಲೂ ಉಪ್ಪಿನಂಶ  ಹೆಚ್ಚಾ ಗಿದೆ.

ರೈತರಿಂದಲೇ ಬದು ನಿರ್ಮಾಣ :

ಮುಂದಿನ ಕೃಷಿ ಹಂಗಾಮಿಗೆ ತೊಂದರೆ ಯಾಗದಿರಲಿ ಎನ್ನುವ ಕಾರಣಕ್ಕೆ ಈ ಭಾಗದ ರೈತರೇ ರವಿವಾರ ಬದು ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಗೋಣಿ ಚೀಲಗಳಿಗೆ ಮರಳು, ಮಣ್ಣು ತುಂಬಿ ಅದನ್ನು ಉಪ್ಪು ನೀರು ನುಗ್ಗುವಲ್ಲಿ ಇಟ್ಟು, ತಾತ್ಕಾಲಿಕ ತಡೆಗೋಡೆ ನಿರ್ಮಿಸಿದ್ದಾರೆ. 10-15 ಮಂದಿ ರೈತರು ಸೇರಿ ಈ ಕಾರ್ಯ ಮಾಡಿದ್ದಾರೆ.

ಆದಷ್ಟು ಬೇಗ ಆಗಲಿ :

ಇನ್ನೀಗ ಕೆಲವು ತಿಂಗಳಲ್ಲಿಯೇ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಆರಂಭ ಗೊಳ್ಳಲಿದ್ದು, ಇಷ್ಟರೊಳಗೆ ಜಾಲಾಡಿಯಲ್ಲಿ ನದಿ ದಂಡೆ ನಿರ್ಮಾಣವಾಗಿದ್ದರೆ, ಈ ಭಾಗದ ರೈತರು ನಿರಾತಂಕವಾಗಿ ಕೃಷಿಯಲ್ಲಿ ತೊಡಗಿಸಿ ಕೊಳ್ಳಬಹುದಿತ್ತು. ಆದರೆ ಈ ಬಾರಿ ಬೇಸಾಯ ಮಾಡಿದರೂ ಯಾವಾಗ ಗದ್ದೆಗಳಿಗೆ ಉಪ್ಪು ನೀರು ನುಗ್ಗುತ್ತದೋ ಎನ್ನುವ ಆತಂಕದಲ್ಲಿಯೇ ದಿನ ಕಳೆಯಬೇಕಾಗಿದ್ದು, ಆದಷ್ಟು ಬೇಗ, ಮೇಯೊಳಗೆ ನದಿ ದಂಡೆ ನಿರ್ಮಿಸಿಕೊಡಿ ಎನ್ನುವುದಾಗಿ ಇಲ್ಲಿನ ರೈತರು ಮನವಿ ಮಾಡಿಕೊಂಡಿದ್ದಾರೆ.

ನದಿ ದಂಡೆ ಯಾವಾಗ? :

ಜಾಲಾಡಿಯಲ್ಲಿ ಹಿಂದೆ ಇದ್ದ ಕಿಂಡಿ ಅಣೆಕಟ್ಟು ಕುಸಿದು ಬಿದ್ದು ವರ್ಷಗಳೇ ಕಳೆದಿದ್ದು, ಆ ವೇಳೆ ಶಾಸಕರೇ ಇಲ್ಲಿಗೆ ಭೇಟಿ ನೀಡಿ, ಇಲ್ಲಿ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ನದಿ ದಂಡೆ ನಿರ್ಮಿಸಿ ಕೊಡುವ ಭರವಸೆ ನೀಡಿದ್ದರು. ಈ ಬಗ್ಗೆ ಹಲವಾರು ಬಾರಿ ರೈತರು ಮನವಿ ಸಲ್ಲಿಸಿದ್ದರೂ ನದಿ ದಂಡೆ ಮಾತ್ರ ನಿರ್ಮಾಣವಾಗಿಲ್ಲ. ಕಳೆದ ಕೆಲವು ದಿನಗಳಿಂದ ಇಲ್ಲಿನ ಎಲ್ಲ ಗದ್ದೆಗಳಿಗೆ ನೀರು ನುಗ್ಗುತ್ತಿದ್ದು, ಇದು ಹೀಗೇ ಮುಂದುವರಿದರೆ ಮುಂದಿನ ಹಂಗಾಮಿನಲ್ಲಿ ಬೆಳೆ ಬೆಳೆಯುವುದು ಸಹ ಕಷ್ಟ ಎನ್ನುವುದು ರೈತರ ಆತಂಕವಾಗಿದೆ. ಹಿಂಗಾರಿನಲ್ಲಿ ಬೆಳೆಯಲಾದ ಉದ್ದು, ಕಲ್ಲಂಗಡಿ, ನೆಲಗಡಲೆ ಕೃಷಿಗೂ ಉಪ್ಪು ನೀರಿನಿಂದಾಗಿ ಹಾನಿಯಾಗಿತ್ತು.

ಜಾಲಾಡಿಯಲ್ಲಿ ಗದ್ದೆಗಳಿಗೆ ಉಪ್ಪು ನೀರು ನುಗ್ಗಿ ಹಾನಿಯಾಗುತ್ತಿರುವುದರ ಬಗ್ಗೆ ಗಮನದಲ್ಲಿದ್ದು, ಈ ಹಿಂದೆ ಹೇಳಿದಂತೆಯೇ ನದಿ ದಂಡೆ ನಿರ್ಮಾಣ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ ಬೈಂದೂರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡುತ್ತಿದ್ದು ಕ್ಷೇತ್ರದ ಎಲ್ಲ ಸಮಸ್ಯೆಗಳನ್ನು ಹಂತ-ಹಂತವಾಗಿ ಬಗೆಹರಿಸಲು ಬದ್ಧನಾಗಿದ್ದೇನೆ.  – ಬಿ.ಎಂ. ಸುಕುಮಾರ್‌ ಶೆಟ್ಟಿ, ಬೈಂದೂರು ಶಾಸಕರು

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

missing

Malpe: ಆಯತಪ್ಪಿ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.