ಕಬ್ಬಿನಾಲೆ – ಕಟ್ಟಿನಾಡಿ ಸೇತುವೆ ಕಾಮಗಾರಿಗೆ ಚಾಲನೆ

ಸೇತುವೆ ಬೇಡಿಕೆ ಬಗ್ಗೆ "ಗ್ರಾಮಭಾರತ' ಸರಣಿಯಲ್ಲಿ ಬೆಳಕು ಚೆಲ್ಲಿದ್ದ ಉದಯವಾಣಿ

Team Udayavani, Nov 14, 2022, 11:15 AM IST

5

ಕುಂದಾಪುರ: ಹಳ್ಳಿಹೊಳೆ ಗ್ರಾಮದ ಕಟ್ಟಿನಾಡಿ, ಕಬ್ಬಿನಾಲೆ, ದೇವರಬಾಳಿಗೆ ಸಂಪರ್ಕ ಕಲ್ಪಿ ಸುವ ಬಹು ವರ್ಷಗಳ ಬೇಡಿಕೆಯಾದ ಸೇತುವೆ ಕನಸು ಈಡೇರುವ ಕಾಲ ಸನ್ನಿಹಿತವಾಗಿದೆ. ಉದಯವಾಣಿಯ “ಗ್ರಾಮಭಾರತ’ ಸರಣಿಯಲ್ಲಿ ಪ್ರಕಟಗೊಂಡ ಈ ಸೇತುವೆ ಬೇಡಿಕೆ ಬಗ್ಗೆ ಬೆಳಕು ಚೆಲ್ಲಿದ್ದು, ಈಗ 3.48 ಕೋ.ರೂ. ಅನುದಾನ ಮಂಜೂರಾಗಿ, ಕಾಮಗಾರಿಗೆ ಚಾಲನೆ ಸಹ ಸಿಕ್ಕಿದೆ.

ಹಳ್ಳಿಹೊಳೆ ಗ್ರಾ.ಪಂ. ವ್ಯಾಪ್ತಿಯ ಕಬ್ಬಿನಾಲೆ – ಕಟ್ಟಿನಾಡಿ ಸೇತುವೆ ನಿರ್ಮಾಣಕ್ಕೆ ನಬಾರ್ಡ್‌ ಯೋಜನೆ ಯಡಿ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಬೈಂದೂರು ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿ ಮುತುವರ್ಜಿಯಲ್ಲಿ 3.48 ಕೋ.ರೂ. ಮಂಜೂರಾಗಿತ್ತು. ಕಳೆದ ವಾರ ಮುಳ್ಳಿಕಟ್ಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಲಾನ್ಯಾಸಗೈದಿದ್ದು, ಶನಿವಾರ ಸಂಜೆ ಶಾಸಕ ಸುಕುಮಾರ್‌ ಶೆಟ್ಟಿ ಅವರು ಸೇತುವೆ ನಿರ್ಮಾಣ ಜಾಗದಲ್ಲಿ ಭೂಮಿಪೂಜೆಯನ್ನು ನೆರವೇರಿಸಿ, ಕಾಮಗಾರಿಗೆ ಚಾಲನೆ ನೀಡಿದರು.

ಶಾಸಕರಿಗೆ ಮನವಿ

ಇದೇ ವೇಳೆ ಅರಣ್ಯ ಇಲಾಖೆಯಿಂದ ಆಗುತ್ತಿರುವ ತೊಂದರೆಗಳನ್ನು ಗ್ರಾಮಸ್ಥರು ಶಾಸಕರಿಗೆ ತಿಳಿಸಿದರು. ಜಿಲ್ಲಾಧಿಕಾರಿಗಳ ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಪ್ರಸ್ತಾವವಾದ ಬೇಡಿಕೆಗಳು, ಹೊಸ ಅಂಗನವಾಡಿ ಬಗ್ಗೆಯೂ ಮನವಿ ಸಲ್ಲಿಸಲಾಯಿತು. ಇಲ್ಲಿನ ನೆಟ್ವರ್ಕ್ ಸಮಸ್ಯೆ, 94ಸಿ ಸಮಸ್ಯೆ ಈಡೇರಿಕೆ ಆದಷ್ಟು ಬೇಗ ಈಡೇರಿಸುವುದಾಗಿ ಶಾಸಕರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್‌ ಕುಮಾರ್‌ ಶೆಟ್ಟಿ, ಹಳ್ಳಿಹೊಳೆ ಗ್ರಾ.ಪಂ. ಅಧ್ಯಕ್ಷ ಪ್ರದೀಪ ಕೊಠಾರಿ, ಉಪಾಧ್ಯಕ್ಷ ಮಂಜುನಾಥ್‌ ಶೆಟ್ಟಿ, ಸದಸ್ಯರಾದ ನೇತ್ರಾವತಿ ನಾೖಕ್‌, ಸುಜಾತ ಬೋವಿ, ಜಿ.ಪಂ. ಮಾಜಿ ಸದಸ್ಯ ರೋಹಿತ್‌ ಕುಮಾರ್‌ ಶೆಟ್ಟಿ, ಗುತ್ತಿಗೆದಾರ ಗೋಕುಲ್‌ ಶೆಟ್ಟಿ ಉಪ್ಪುಂದ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ದುರ್ಗಾದಾಸ್‌ ಮತ್ತಿತರರು ಉಪಸ್ಥಿತರಿದ್ದರು. ಶಂಕರನಾರಾಯಣ ಚಾತ್ರ ಸ್ವಾಗತಿಸಿ, ರಂಜಿತ್‌ ಕುಲಾಲ್‌ ವಂದಿಸಿದರು.

ಗ್ರಾಮಸ್ಥರಿಂದ ಕೃತಜ್ಞತೆ

ಬಹು ವರುಷದ ಬೇಡಿಕೆ ಈಡೇರಿದ ಸಂತೋಷದಲ್ಲಿ ಈ ಭಾಗದ ನೂರಾರು ಜನರು ಭಾಗವಹಿಸಿ ಅನುದಾನ ಮಂಜೂರುಗಾಗಿ ಶ್ರಮಿಸಿದ ಶಾಸಕರು, ಸಂಸದರು ಹಾಗೂ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಅನೇಕ ವರ್ಷಗಳ ಬೇಡಿಕೆಯಿದ್ದರೂ, ಈಡೇರದೇ ನೆನೆಗುದಿಗೆ ಬಿದ್ದಿದ್ದ ಕಬ್ಬಿನಾಲೆ – ಕಟ್ಟಿನಾಡಿ ಸೇತುವೆ ಬಗ್ಗೆ ಬೆಳಕು ಚೆಲ್ಲಿ, ತ್ವರಿತಗತಿಯಲ್ಲಿ ಕಾಮಗಾರಿಗೆ ಚಾಲನೆ ನೀಡುವಂತೆ ಮಾಡಿದ ಉದಯವಾಣಿ ಪತ್ರಿಕೆಗೆ ಹಳ್ಳಿಹೊಳೆ ಗ್ರಾ.ಪಂ. ಅಧ್ಯಕ್ಷ ಪ್ರದೀಪ್‌ ಕೊಠಾರಿ, ಉಪಾಧ್ಯಕ್ಷ ಮಂಜುನಾಥ್‌ ಶೆಟ್ಟಿ ಅವರು ಗ್ರಾಮಸ್ಥರ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.

ಉದಯವಾಣಿ ವರದಿ

ಉದಯವಾಣಿಯು ಕಳೆದ ವರ್ಷದ ಜು. 2 ರಂದು “ಗ್ರಾಮಭಾರತ’ ಸರಣಿಯಲ್ಲಿ ಹಳ್ಳಿಹೊಳೆ ಗ್ರಾಮದ ದೇವರಬಾಳು, ಕಟ್ಟಿನಾಡಿ, ಕಬ್ಬಿನಾಲೆ ಯನ್ನು ಸಂಪರ್ಕಿಸುವ ಸೇತುವೆ ಬೇಡಿಕೆ ಬಗ್ಗೆ, ಅಗತ್ಯತೆ, ಸೇತುವೆಯಿಲ್ಲದೆ ಜನ ಅನುಭವಿಸುತ್ತಿರುವ ಬವಣೆ ಕುರಿತಂತೆ ಸಮಗ್ರ ವರದಿ ಪ್ರಕಟಿಸಿ, ಗಮನ ಸೆಳೆದಿತ್ತು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

11

Missing Case: ಪತಿ ನಾಪತ್ತೆ; ಪತ್ನಿಯ ದೂರು

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

9

Kota: ಶಿರಿಯಾರ; ಅಕ್ರಮ ಗಣಿಗಾರಿಕೆಗೆ ದಾಳಿ

POlice

Gangolli: ಅಕ್ರಮ ಕೆಂಪು ಕಲ್ಲು ಸಾಗಾಟ; ಪ್ರಕರಣ ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.