Karkala: ಪರಪಾಡಿ ಸೇತುವೆ ಬಳಿ ನಿತ್ಯವೂ ಪರದಾಟ
ರಸ್ತೆ ಎರಡೂ ಬದಿ ಹದಗೆಟ್ಟಿದೆ; ಬಾಕಿ ಕಾಮಗಾರಿ ಪೂರ್ಣಗೊಳಿಸಲು ಆಗ್ರಹ
Team Udayavani, Oct 14, 2024, 3:20 PM IST
ಸಂಪೂರ್ಣ ಹದಗೆಟ್ಟ ಪರಪಾಡಿ-ಬಾರಾಡಿ ಚಿಲಿಂಬಿ ರಸ್ತೆ.
ಕಾರ್ಕಳ: ಕಾಂಕ್ರೀಟ್ ರಸ್ತೆ ನಿರ್ಮಾಣವಾದರೂ ಸೇತುವೆಯ ಸಮೀಪದ ಎರಡು ಬದಿಯಲ್ಲಿ ರಸ್ತೆ ಸರಿಯಾಗಿಲ್ಲದ ಕಾರಣ ನಿಟ್ಟೆ ಪರಪಾಡಿ ಸೇತುವೆ ಮೂಲಕ ಸಾಗುವ ವಾಹನ ಸವಾರರು ಸಂಚಾರದಲ್ಲಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಎರಡೂ ಬದಿ ರಸ್ತೆ ಸುಸ್ಥಿತಿಗೊಳಿಸಿ ಸಮಸ್ಯೆ ನಿವಾರಿಸುವಂತೆ ಸ್ಥಳಿಯರು ಒತ್ತಾಯಿಸಿದ್ದಾರೆ.
ನಿಟ್ಟೆ ಗ್ರಾಮದ ಪರಪಾಡಿಯಿಂದ ಬಾರಾಡಿ ಚಿಲಿಂಬಿ (ಅಕ್ಷರಾಪುರ) ಈ ಕಡೆಗೆ ತೆರಳುವ ರಸ್ತೆ ಸಂಪೂರ್ಣ ಹದಗೆಟ್ಟಿತು. 2020ರಲ್ಲಿ ಸುಮಾರು 5 ಕೋ.ರೂ. ವೆಚ್ಚದಲ್ಲಿ 4.20.ಕಿ.ಮೀ. ಉದ್ದದ ಕಾಂಕ್ರೀಟ್ ರಸ್ತೆಯನ್ನು ಇಲ್ಲಿ ನಿರ್ಮಿಸಲಾಗಿದೆ. ಅತ್ತ ಮತ್ತೂಂದು ಬದಿಯಲ್ಲಿ ಪರಪಾಡಿ ಸೇತುವೆಯ ಸಮೀಪದ ವರೆಗೆ ಕಾಂಕ್ರೀಟ್ ರಸ್ತೆ ಕೂಡ ಮಾಡಲಾಗಿದೆ. ಆದರೆ ಪರಪಾಡಿ ಸೇತುವೆ ಸಂಪರ್ಕಿಸುವ ಎರಡೂ ಬದಿಯಲ್ಲಿ ಸುಮಾರು ನೂರು ಮೀಟರ್ ಉದ್ದದ ರಸ್ತೆಯನ್ನು ಇನ್ನೂ ಕಾಂಕ್ರೀಟ್ ಅಥವಾ ಡಾಮರೀಕರಣಗೊಳಿಸಿಲ್ಲ. ಇದರಿಂದಾಗಿ ವಾಹನ ಸಂಚಾರದ ವೇಳೆ ಸವಾರರು, ಪಾದಚಾರಿಗಳು ಇಲ್ಲಿ ನಾನಾ ಸಮಸ್ಯೆ ಎದುರಿಸುತ್ತಿದ್ದಾರೆ.
ಸೇತುವೆ ಸಂಪರ್ಕಕ್ಕೆ ಕಾಂಕ್ರೀಟ್ ಅವಶ್ಯ
ಪರಪಾಡಿಯ ಸೇತುಯ ಬಳಿ ತಿರುವಿನಿಂದ ಕೂಡಿದೆ. ಎರಡೂ ಬದಿಯಲ್ಲಿ ಇಳಿಜಾರಿನಿಂದ ಕೂಡಿದ ರಸ್ತೆಯಾಗಿದ್ದು ಕಾಂಕ್ರೀಟ್‌ನಿಂದ ಕೂಡಿದ ಸುಂದರ ರಸ್ತೆಯಲ್ಲಿ ವೇಗವಾಗಿ ಸಾಗಿ ಬರುವ ವಾಹನ ಸವಾರರು ಸೇತುವೆ ಬಳಿ ಬರುತ್ತಿದ್ದಂತೆ ಹೊಂಡ ಗುಂಡಿಯಿಂದ ಕೂಡಿದ ರಸ್ತೆಯಿಂದ ಸಮಸ್ಯೆಯನ್ನು ಎದುರಿಸುವಂತಾಗಿದೆ. ಈಗಾಗಲೇ ಸಾಕಷ್ಟು ಬೈಕ್ ಸವಾರರು ಬಿದ್ದು ಗಾಯಗೊಂಡ ಘಟನೆಗಳು ಇಲ್ಲಿ ನಡೆದಿದೆ. ಎರಡೂ ಬದಿಯಲ್ಲಿ ರಸ್ತೆಯ ಕಾಮಗಾರಿ ನಡೆಸಿ ಸುಮಾರು 100 ಮೀ.ನಷ್ಟು ಮಾತ್ರ ಯಾಕಾಗಿ ಬಾಕಿ ಇಟ್ಟರು ಎನ್ನುವುದು ಗ್ರಾಮಸ್ಥರ ಪ್ರಶ್ನೆಯಾಗಿದೆ.
ಸೇತುವೆಯೂ ಶಿಥಿಲಾವಸ್ಥೆಗೆ
ಪರಪಾಡಿಯಲ್ಲಿ ಹರಿಯುವ ಶಾಂಭವಿ ನದಿಯನ್ನು ದಾಟಿಕೊಂಡು ಹೋಗಲು ಪರಪಾಡಿ ಸೇತುವೆ ಅತ್ಯಂತ ಪ್ರಯೋಜನಕಾರಿಯಾಗಿದೆ. ಚಿಲಿಂಬಿ, ಬಾರಾಡಿ, ಪೆಲತ ಕಟ್ಟೆ, ಹೀಗೆ ಅನೇಕ ಗ್ರಾಮೀಣ ಭಾಗದ ಜನ ನಿತ್ಯ ಈ ಸೇತುವೆಯಲ್ಲೇ ಸಂಚಾರ ನಡೆಸುತ್ತಾರೆ. ಕಳೆದ ಹಲವು ದಶಕದ ಹಿಂದೆ ನಿರ್ಮಾಣಗೊಂಡ ಈ ಸೇತುವೆ ಇದೀಗ ಸಂಪೂರ್ಣ ಶಿಥಿಲ ವ್ಯವಸ್ಥೆಯಲ್ಲಿದೆ. ಸೇತುವೆಯ ತಳದಲ್ಲಿ ಹಾಗೂ ಮೇಲ್ಭಾಗದಲ್ಲಿ ಅಲ್ಲಲ್ಲಿ ಸಿಮೆಂಟ್ ಸ್ಲ್ಯಾಬ್‌ಗಳು ಎದ್ದು ಕಬ್ಬಿಣದ ರಾಡುಗಳು ಗೋಚರಿಸುತ್ತಿದೆ. ಅಲ್ಲದೆ ಸೇತುವೆಯ ಮೇಲ್ಭಾಗದಲ್ಲಿ ಸೇತುವೆಯುದ್ದಕ್ಕೂ ಅಲ್ಲಲ್ಲಿ ಗುಂಡಿಗಳು ನಿರ್ಮಾಣವಾಗಿದೆ. ತಡೆಗೋಡೆಯೂ ವಾಹನದ ಆರ್ಭಟಕ್ಕೆ ಅಲ್ಲಲ್ಲಿ ಕಿತ್ತು ಹೋಗುತ್ತಿದೆ. ಅಪಾಯಕಾರಿಯಾಗಿರುವ ಸೇತುವೆ ದುರಸ್ತಿ ಕಾರ್ಯವೂ ನಡೆಯಬೇಕಾಗಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಘನ ವಾಹನದಿಂದ ಸಮಸ್ಯೆ ಉಲ್ಬಣ
ಈ ಭಾಗದಲ್ಲಿ ಬಹುತೇಕ ಕಲ್ಲು ಕೋರೆಗಳು ಹಾಗೂ ಕ್ರಷರ್‌ಗಳು ಕಾರ್ಯಾಚರಿಸುತ್ತಿದ್ದು ಪರಪಾಡಿ ಸೇತುವೆಯನ್ನು ದಾಟಿಕೊಂಡು ನಿತ್ಯ ನೂರಾರು ಘನ ವಾಹನಗಳು ಸಾಗುತ್ತವೆೆ. ಶಿಥಿಲ ವ್ಯವಸ್ಥೆಯಲ್ಲಿರುವ ಸೇತುವೆಯೂ ಕುಸಿಯುವ ಭೀತಿ ಎದುರಾಗಿದೆ. ಅತ್ಯಲ್ಪ ದೂರದ ಈ ರಸ್ತೆಯ ಕಾಮಗಾರಿ ಯಾವಾಗ ನಡೆಯುತ್ತದೆ ಎಂದು ಸ್ಥಳೀಯರು ಪ್ರಶ್ನಿಸುತ್ತಿದ್ದಾರೆ. ರಸ್ತೆ ನಿರ್ಮಾಣವಾಗಿ ಹಲವು ವರ್ಷಗಳು ಸಂದರೂ ಬಾಕಿ ಉಳಿದಿರುವ ರಸ್ತೆಯ ಕಾಮಗಾರಿ ನಡೆಸುವ ಬಗ್ಗೆ ಸಂಬಂಧಪಟ್ಟವರು ಮನಸ್ಸು ಮಾಡುತಿಲ್ಲ ಎನ್ನುತ್ತಿದ್ದಾರೆ ಸ್ಥಳಿಯ ನಿವಾಸಿಗಳು.
ಕಾಮಗಾರಿ ಪೂರ್ಣಗೊಳಿಸಿ
ಸೇತುವೆಯ ಎರಡೂ ಬದಿಯಲ್ಲಿ ರಸ್ತೆಯ ಕಾಮಗಾರಿ ನಡೆದಿಲ್ಲ. ಹೀಗಾಗಿ ದ್ವಿಚಕ್ರ ವಾಹನ ಸವಾರರು ನಿತ್ಯ ಸಮಸ್ಯೆಯನ್ನು ಎದುರಿಸುವಂತಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತು ರಸ್ತೆಯ ಕಾಮಗಾರಿ ಪೂರ್ಣಗೊಳ್ಳುವಂತೆ ಕ್ರಮ ಕೈಗೊಳ್ಳ ಬೇಕಾಗಿದೆ.
-ಸುಪ್ರಿಯಾ, ಸಂದೀಪ್, ಸ್ಥಳೀಯರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಕಸದಿಂದಲೇ ಕಲಾಕೃತಿ; ಕಾಲ್ತೋಡಿನಲ್ಲೊಂದು ಸುಂದರ ಅಂಗನವಾಡಿ
ಹೆಬ್ಬಾಗಿಲಿನಲ್ಲಿ ಆರಂಭವಾದ ಶಾಲೆ ಇಂದು ಈ ಊರ ಮಕ್ಕಳ ಪಾಲಿನ ಶಿಕ್ಷಣದ ಹೆಬ್ಬಾಗಿಲೇ ಆಗಿದೆ
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.