ಕಟ್ಟೆ ಭೋಜಣ್ಣ ಶೆಟ್ಟಿ ಪ್ರಕರಣ : ಆರೋಪಿಯಿಂದ ಜಾಮೀನಿಗೆ ಅರ್ಜಿ, ಜೂ. 1ಕ್ಕೆ ಮುಂದೂಡಿಕೆ
Team Udayavani, May 30, 2022, 10:00 PM IST
ಕುಂದಾಪುರ : ಉದ್ಯಮಿ ಕಟ್ಟೆ ಗೋಪಾಲಕೃಷ್ಣ ರಾವ್ ಯಾನೆ ಕಟ್ಟೆ ಭೋಜಣ್ಣ (79) ಆತ್ಮಹತ್ಯೆ ಪ್ರಕರಣದಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಂಧಿತ ಆರೋಪಿ ಮೊಳಹಳ್ಳಿ ಗಣೇಶ್ ಶೆಟ್ಟಿ ಕುಂದಾಪುರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸೋಮವಾರ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆಯನ್ನು ನ್ಯಾಯಾಧೀಶ ಅಬ್ದುಲ್ ರಹೀಮ್ ಹುಸೇನ್ ಶೇಖ್ ಅವರು ಜೂ.1ಕ್ಕೆ ಮುಂದೂಡಿದ್ದಾರೆ.
ಗಣೇಶ್ ಶೆಟ್ಟಿ ಪರ ಕುಂದಾಪುರದ ವಕೀಲರಾದ ಕೆ.ಸಿ. ಶೆಟ್ಟಿ, ಟಿ.ಬಿ. ಶೆಟ್ಟಿ ಹಾಗೂ ದಿನೇಶ್ ವಕಾಲತ್ತು ವಹಿಸಿದ್ದು, ಸೋಮವಾರ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಜೂ. 1 ಕ್ಕೆ ಸರಕಾರಿ ಅಭಿಯೋಜಕರ ಆಕ್ಷೇಪಣೆ ಸಲ್ಲಿಕೆಗೆ ನ್ಯಾಯಾಧೀಶರು ಅವಕಾಶ ಕಲ್ಪಿಸಿದ್ದಾರೆ.
ಆರೋಪಿಯನ್ನು ಶುಕ್ರವಾರ ಬಂಧಿಸಿದ್ದು, ಆರೋಗ್ಯದಲ್ಲಿ ವ್ಯತ್ಯಯ ಉಂಟಾದ ಹಿನ್ನೆಲೆಯಲ್ಲಿ ಶನಿವಾರ ಉಡುಪಿ ಅಜ್ಜರಕಾಡಿನ ಸರಕಾರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.
ನಾಪತ್ತೆಯಾಗಿರುವ ಮತ್ತೋರ್ವ ಆರೋಪಿ, ಬ್ರೋಕರ್ ಎಚ್. ಇಸ್ಮಾಯಿಲ್ ಪತ್ತೆಗಾಗಿ ಕುಂದಾಪುರ ಪೊಲೀಸರು ಬಲೆ ಬೀಸಿದ್ದಾರೆ.
ಇದನ್ನೂ ಓದಿ : ಅಕ್ರಮ ಗಾಂಜಾ ಮಾರಾಟ ಯತ್ನ : ಶನೇಶ್ವರ ಸ್ವಾಮಿ ದೇವಸ್ಥಾನದ ಗುಡ್ಡಪ್ಪ ಅಂದರ್…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.