ಸಿದ್ದಾಪುರ: ಮನೆಯೊಳಗೆ ಮಲಗಿದ್ದ ಮಗು ಅಪಹರಣ?
Team Udayavani, Jul 12, 2019, 10:34 AM IST
ಸಿದ್ದಾಪುರ : ಯಡಮೊಗೆ ಗ್ರಾಮದ ಕುಮಿಬೇರು ಎಂಬಲ್ಲಿ ಗುರುವಾರ ಬೆಳಗ್ಗಿನ ಜಾವ ಮನೆಯೊಂದಕ್ಕೆ ನುಗ್ಗಿದ ಮುಸುಕುಧಾರಿಯೊಬ್ಬ ತಾಯಿಯೊಂದಿಗೆ ಮಲಗಿದ್ದ ಎರಡು ಪುಟ್ಟ ಮಕ್ಕಳ ಪೈಕಿ ಒಂದು ವರ್ಷ ಮೂರು ತಿಂಗಳ ಹೆಣ್ಣು ಮಗುವನ್ನು ಅಪಹರಿಸಿದ್ದಾನೆ ಎನ್ನಲಾಗಿದ್ದು, ಪೊಲೀಸರಿಂದ ಬಿರುಸಿನ ಶೋಧ ನಡೆಯುತ್ತಿದೆ.
ಯಡಮೊಗೆ ಗ್ರಾಮದ ಕುಮಿಬೇರು ಸಂತೋಷ್ ನಾಯ್ಕ ಮತ್ತು ರೇಖಾ ದಂಪತಿಯ ಕಿರಿಯ ಪುತ್ರಿ ಸಾನ್ವಿಕಾ ಅಪಹೃತ ಮಗು. ತಂದೆ ಸಂತೋಷ್ ನಾಯ್ಕ ಹೊಸಂಗಡಿ ಸಂಡೂರು ಪವರ್ ಪ್ರಾಜೆಕ್ಟ್‌ನಲ್ಲಿ ಭದ್ರತಾ ಸಿಬಂದಿಯಾಗಿದ್ದು, ಘಟನೆ ಸಂದರ್ಭ ಕರ್ತವ್ಯದಲ್ಲಿದ್ದರು. ರೇಖಾ 6 ವರ್ಷ ಪ್ರಾಯದ ಮಗ ಸಾತ್ವಿಕ್ ಮತ್ತು ಸಾನ್ವಿಕಾ ಜತೆಗೆ ಮನೆಯಲ್ಲಿದ್ದರು. ಬೆಳಗಿನ ಜಾವ 5ರಿಂದ 6ರ ನಡುವೆ ಮುಸುಕುಧಾರಿಯೊಬ್ಬ ಮಗುವನ್ನು ಅಪಹರಿಸಿದ್ದಾನೆ ಎಂದು ಆಕೆ ತಿಳಿಸಿದ್ದಾರೆ. ಬೆಳಗ್ಗಿನ ಜಾವ ಪಕ್ಕದ ಮನೆಯವರು ಸಂತೋಷ್ ಅವರಿಗೆ ದೂರವಾಣಿ ಮೂಲಕ ವಿಷಯ ತಿಳಿಸಿದ್ದಾರೆ.
ಮಾಹಿತಿ ತಿಳಿದ ಅಗ್ನಿಶಾಮಕ ದಳದ ಸಿಬಂದಿ ಮತ್ತು ಸ್ಥಳೀಯರು ನದಿ ಸೇರಿದಂತೆ ಪರಿಸರದಲ್ಲೆಲ್ಲ ಹುಡುಕಿದರೂ ಹೆಣ್ಣು ಮಗುವಾಗಲೀ ಅಪಹರಿಸಿದ್ದಾನೆನ್ನಲಾದ ವ್ಯಕ್ತಿಯಾಗಲಿ ಪತ್ತೆಯಾಗಿಲ್ಲ.
ಎಸ್‌ಪಿ ನಿಶಾ ಜೇಮ್ಸ್, ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಕುಮಾರಚಂದ್ರ, ಕುಂದಾಪುರ ಡಿವೈಎಸ್‌ಪಿ ದಿನೇಶ್ ಕುಮಾರ್, ಸಿಪಿಐ ಮಂಜಪ್ಪ, ಶಂಕರ ನಾರಾಯಣ, ಅಮಾಸೆಬೈಲು, ಕಂಡೂರು ಹಾಗೂ ಕುಂದಾಪುರ ಪೊಲೀಸ್ ಠಾಣೆಯ ಠಾಣಾಧಿಕಾರಿಗಳು ಸ್ಥಳದಲ್ಲಿ ಬೀಡು ಬಿಟ್ಟಿದ್ದು, ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಶ್ವಾನದಳ ಕೂಡ ಆಗಮಿಸಿದ್ದು, ಮನೆಯಿಂದ ಹೊಳೆಯ ತನಕ ಹೋಗಿ ನಿಂತಿದೆ. ಪೊಲೀಸರು ಮನೆ ಮಂದಿಯನ್ನು ಹಾಗೂ ಅಕ್ಕ ಪಕ್ಕದ ಮನೆಯವರನ್ನು ತನಿಖೆಗೆ ಒಳಪಡಿಸಿದ್ದಾರೆ.
ಹೆಣ್ಣು ಮಗು ಅಪಹರಣ ಸುದ್ದಿಯಿಂದ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.
ಕುಂದಾಪುರ ತಾಲೂಕು ಆರೋಗ್ಯಾಧಿ ಕಾರಿ ಡಾ| ನಾಗಭೂಷಣ ಉಡುಪ, ಉಡುಪಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ, ಜಿ.ಪಂ. ಸದಸ್ಯ ರೋಹಿತ್ ಶೆಟ್ಟಿ ಸೇರಿದಂತೆ ನೂರಾರು ಗ್ರಾಮಸ್ಥರು ಘಟನ ಸ್ಥಳದಲ್ಲಿ ಹಾಜರಿದ್ದರು. ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತನಿಖೆಗೆ ವಿಶೇಷ ತಂಡ
ಸ್ಥಳಕ್ಕೆ ಎಸ್‌ಪಿ ನಿಶಾ ಜೇಮ್ಸ್ ಅವರು ಬೆಳಗ್ಗೆ 10 ಗಂಟೆಗೆ ಆಗಮಿಸಿದ್ದು, ಸಂಜೆಯ ವರೆಗೂ ಖುದ್ದು ಹಾಜರಿದ್ದು, ಮಾಹಿತಿ ಕಲೆಹಾಕಿದ್ದಲ್ಲದೆ ಹುಡುಕಾಟದಲ್ಲೂ ಭಾಗಿಯಾಗಿದ್ದರು. ಅನಂತರ ಪತ್ರಕರ್ತ ರೊಂದಿಗೆ ಮಾತನಾಡಿದ ಅವರು ಇದು ಗಂಭೀರ ಪ್ರಕರಣವಾಗಿದ್ದರಿಂದ ಡಿವೈಎಸ್‌ಪಿ ನೇತೃತ್ವದ ವಿಶೇಷ ತಂಡ ರಚಿಸಿ ತನಿಖೆ ನಡೆಸಲಾಗುವುದು ಎಂದರು.
ಬೆಚ್ಚಿ ಬಿದ್ದ ಜನತೆ; ಪೊಲೀಸರಿಂದ ಬಿರುಸಿನ ಶೋಧ
“ಬೆಳಗಿನ ಜಾವ ಇದ್ದಕ್ಕಿದ್ದಂತೆ ಮಗುವಿನ ಅಳು ಕೇಳಿ ನನಗೆ ಎಚ್ಚರವಾಯಿತು. ನಿದ್ದೆಗಣ್ಣಿನಲ್ಲಿ ನೋಡಿದಾಗ ಮುಸುಕುಧಾರಿಯೊಬ್ಬ ಅಳುತ್ತಿದ್ದ ಮಗುವನ್ನೆತ್ತಿಕೊಂಡು ಮನೆಯ ಬಲಭಾಗದ ಬಾಗಿಲಿನ ಮೂಲಕ ಪರಾರಿಯಾದ. ನಾನು ಮಗನನ್ನುಎತ್ತಿಕೊಂಡು ಹಿಂದೆಯೇ ಓಡಿದೆ. ಸಮೀಪದ ಕುಬಾ ನದಿಯನ್ನು ದಾಟಿ ಆತ ಪರಾರಿಯಾದ. ಆತನ ಹಿಂದೆಯೇ ಮಗನ ಸಹಿತ ನಾನೂ ನದಿಗಿಳಿದಿದ್ದು ನೀರಿನ ಸೆಳೆತಕ್ಕೆ ಸಿಲುಕಿದೆವು. ಅಷ್ಟರಲ್ಲಿ ಆತ ಪರಾರಿಯಾಗಿದ್ದ. ನಾನು ಹೇಗೋ ಸಾವರಿಸಿಕೊಂಡು ಮಗನ ಸಹಿತ ಮತ್ತೆ ದಡಕ್ಕೆ ಬಂದೆ’ ಎಂದು ತಾಯಿ ಹೇಳಿದ್ದಾರೆ.
ಮಗುವನ್ನೆತ್ತಿ ಓಡುತ್ತಿದ್ದ ಆಪರಿಚಿತ ವ್ಯಕ್ತಿಯ ಹಿಂದೆಯೇ ಮಗನನ್ನೆತ್ತಿ ಕೊಂಡು ಧಾವಿಸಿದ ತಾಯಿ ನದಿಗೆ ಜಿಗಿದಾಗ ನೀರಿನಲ್ಲಿ ಸುಮಾರು 150 ಮೀಟರ್ ದೂರ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಬೊಬ್ಬೆ ಕೇಳಿದ ನಾವು ನದಿಯ ಕಡೆಗೆ ಓಡಿ ಬಂದಾಗ ಗಂಡು ಮಗು ಮರದ ಬೇರೊಂದನ್ನು ಆಧರಿಸಿಕೊಂಡು ಅಳುತ್ತಿತ್ತು. ಸ್ವಲ್ಪ ದೂರದಲ್ಲಿ ತಾಯಿ ದಡದತ್ತ ಬರುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಅಂಬರ್‌ಗ್ರೀಸ್ ಮಾರಾಟ ಜಾಲ: ಅಧಿಕಾರಿಗಳಿಗೆ ಹಲ್ಲೆಗೈದ ನಾಲ್ವರ ಬಂಧನ
Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!
Shiroor: ಡಿವೈಡರ್‌ಗೆ ಕಾರು ಢಿಕ್ಕಿ
Kundapura: ಕಸದಿಂದಲೇ ಕಲಾಕೃತಿ; ಕಾಲ್ತೋಡಿನಲ್ಲೊಂದು ಸುಂದರ ಅಂಗನವಾಡಿ
ಹೆಬ್ಬಾಗಿಲಿನಲ್ಲಿ ಆರಂಭವಾದ ಶಾಲೆ ಇಂದು ಈ ಊರ ಮಕ್ಕಳ ಪಾಲಿನ ಶಿಕ್ಷಣದ ಹೆಬ್ಬಾಗಿಲೇ ಆಗಿದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.