ಕೋಟೇಶ್ವರ: ಕೊಡಿಹಬ್ಬ ಸಂಪನ್ನ
Team Udayavani, Nov 20, 2021, 1:41 AM IST
ಕೋಟೇಶ್ವರ: ಇಲ್ಲಿನ ಶ್ರೀ ಕೋಟಿಲಿಂಗೇಶ್ವರ ದೇಗುಲದ ರಥೋತ್ಸವ (ಕೊಡಿಹಬ್ಬ) ಶುಕ್ರವಾರ ಸಂಭ್ರಮದಿಂದ ಜರಗಿತು.
ಪ್ರಧಾನ ಅರ್ಚಕ ಪ್ರಸನ್ನ ಕುಮಾರ್ ಐತಾಳ ಅವರ ನೇತೃತ್ವದಲ್ಲಿ ಧಾರ್ಮಿಕ ವಿ ಧಿ-ವಿಧಾನ ನಡೆದವು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎಂ. ಪ್ರಭಾಕರ ಶೆಟ್ಟಿ ಹಾಗೂ ಕಾರ್ಯನಿರ್ವಹಣಾಧಿಕಾರಿ ಗಣೇಶ ಗೌಡ ಧಾರ್ಮಿಕ ಕಾರ್ಯಗಳಿಗೆ ಚಾಲನೆ ನೀಡಿದರು.
ಗಣಪತಿ ಪೂಜೆ, ಮಹಾಪೂಜೆಯ ಅನಂತರ ರಥಾರೋಹಣ ಮತ್ತು ಸಂಜೆ ರಥಾವರೋಹಣ ನಡೆಯಿತು. 25 ಸಾವಿರಕ್ಕೂ ಮಿಕ್ಕಿ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡರು. ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ವಿಷ್ಣುವರ್ಧನ್, ಅಡಿಷನಲ್ ಎಸ್.ಪಿ. ಕುಮಾರಚಂದ್ರ ಮಾರ್ಗದರ್ಶನದಲ್ಲಿ ಬಿಗು ಬಂದೋಬಸ್ತ್ ಏರ್ಪಡಿಸಲಾಗಿತ್ತು.ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಕಿಷ್ಕಿಂದ ಸ್ವಾಮೀಜಿ ಭೇಟಿ
ಕಿಷ್ಕಿಂದ ಪುರಿಯ ಹನುಮದ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಧ್ಯಕ್ಷ ಗೋವಿಂದಾನಂದ ಸರಸ್ವತಿ ಸ್ವಾಮೀಜಿ ಅವರು ರಥೋತ್ಸವದಲ್ಲಿ ಪಾಲ್ಗೊಂಡರು.
ಇಂದು ಉಪ್ಪುಂದ ಕೊಡಿಹಬ್ಬ
ಉಪ್ಪುಂದ: ಬೈಂದೂರು ಭಾಗದ ಉಪ್ಪುಂದ ಕೊಡಿಹಬ್ಬವೆಂದೇ ಪ್ರಸಿದ್ಧಿ ಪಡೆದ ಶ್ರೀ ದುರ್ಗಾಪರಮೇಶ್ವರೀ ದೇವಿಯ ಜಾತ್ರೆಗೆ ಸಕಲ ಸಿದ್ಧತೆಗಳು ನಡೆದಿದ್ದು ಶನಿವಾರ ಶ್ರೀದೇವಿಯ ಮಹಾರಥೋತ್ಸವ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
County Championship: ಶಕಿಬ್ ಹಸನ್ ಬೌಲಿಂಗ್ ಶೈಲಿ ಬಗ್ಗೆ ಅಂಪೈರ್ ಗಳ ಆಕ್ಷೇಪ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.