Kolluru: ವಂಡ್ಸೆ-ಹಾಲ್ಕಲ್ ರಸ್ತೆ ಹೊಂಡಕ್ಕೆ ಮುಕ್ತಿ ಎಂದು?
ತೇಪೆ ಕಾರ್ಯ ನಡೆಸದಿದ್ದಲ್ಲಿ ರಸ್ತೆ ತಡೆಗೆ ಗ್ರಾಮಸ್ಥರ ನಿರ್ಧಾರ
Team Udayavani, Oct 22, 2024, 5:43 PM IST
ಕೊಲ್ಲೂರು: ಕೊಲ್ಲೂರಿಗೆ ಹೋಗುವ ಮುಖ್ಯ ರಸ್ತೆಯಲ್ಲಿ ವಂಡ್ಸೆಯಿಂದ ಹಾಲ್ಕಲ್‌ವರೆಗೆ ಹೊಂಡಗುಂಡಿಗಳೇ ತುಂಬಿದೆ. ಈ ಹೊಂಡಮಯ ರಸ್ತೆಯ ದುರಸ್ತಿಗೆ ಇನ್ನೂ ಆರಂಭ ಮಾಡದಿರುವುದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಮುಂದಿನ 20 ದಿನಗಳ ಒಳಗೆ ಕನಿಷ್ಠ ತೇಪೆ ಕಾರ್ಯ ನಡೆಸದೆ ಇದ್ದಲ್ಲಿ ರಸ್ತೆ ತಡೆ ನಡೆಸಲು ಗ್ರಾಮಸ್ಥರು ಮುಂದಾಗಿದ್ದಾರೆ.
ಸಂಪೂರ್ಣ ಡಾಮರೀಕರಣಕ್ಕೆ ಅನುದಾನದ ಕೊರತೆ ಎದುರಿಸುತ್ತಿರುವ ಇಲಾಖೆ ಕನಿಷ್ಠ ಹೊಂಡ ಮುಚ್ಚುವ ಕಾರ್ಯಕ್ಕೂ ವಿಳಂಬ ನೀತಿ ಅನುಸರಿಸುತ್ತಿರುವುದು ವಾಹನ ಚಾಲಕರಿಗೆ ತೊಂದರೆ ಉಂಟುಮಾಡಿದೆ. ದ್ವಿಚಕ್ರ ವಾಹನ ಚಾಲಕರ ಸ್ಥಿತಿಯಂತೂ ಹೇಳತೀರದು.
ಕೊಲ್ಲೂರು ಕ್ಷೇತ್ರದ ನವರಾತ್ರಿ ಉತ್ಸವಕ್ಕೆ ಸಾವಿರಾರು ಭಕ್ತರು ಬರುವುದರಿಂದ ಅದಕ್ಕೆ ಮುನ್ನ ರಿಪೇರಿ ನಡೆಯಬಹುದು ಎಂಬ ಸಾರ್ವಜನಿಕರ ನಿರೀಕ್ಷೆ ಹುಸಿಯಾಗಿದೆ. ಈಗ ದೀಪಾವಳಿ ಹೊತ್ತಿಗಾದರೂ ನಡೆಯಬಹುದೇ ಎಂಬ ಕಾಯುವಿಕೆ ಶುರುವಾಗಿದೆ.
ಸರಕಾರಕ್ಕೆ ಮನವಿ
ವಂಡ್ಸೆಯಿಂದ ಹಾಲ್ಕಲ್ ತನಕ ಮುಖ್ಯ ರಸ್ತೆಯ ಡಾಮರು ಕಾಮಗಾರಿಗೆ ಅನುದಾನ ಬಿಡುಗಡೆ ಮಾಡುವಂತೆ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೆ ಈವರೆಗೆ ಆ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ರಸ್ತೆಯ ದುಸ್ಥಿತಿಗೆ ಕಾರಣವಾಗಿದೆ.
– ಗುರುರಾಜ ಗಂಟಿಹೊಳೆ, ಶಾಸಕರು
ಯಾರಿಗೂ ಇದರ ಗೊಡವೆ ಇಲ್ಲ!
ಕರ್ನಾಟಕ, ಕೇರಳ, ತಮಿಳುನಾಡು ಅಲ್ಲದೇ ಆಂಧ್ರಪ್ರದೇಶದಿಂದ ಕೊಲ್ಲೂರು ಕ್ಷೇತ್ರಕ್ಕೆ ಸಾವಿರಾರು ಭಕ್ತರು ನಿತ್ಯ ನಿರಂತರ ಆಗಮಿಸುತ್ತಾರೆ. ಹದಗೆಟ್ಟ ಮುಖ್ಯ ರಸ್ತೆಯ ದುಸ್ಥಿತಿಯಿಂದಾಗಿ ಭಯದ ವಾತಾವರಣದಲ್ಲೇ ಸಂಚರಿಸಬೇಕಾಗಿದೆ.
ಇಡೂರು, ಜಡ್ಕಲ್ ಮುಂತಾದೆಡೆ ಭಾರೀ ಹೊಂಡಗಳಿಂದ ಕೂಡಿದ್ದು, ಅಮಿತ ವೇಗದಲ್ಲಿ ಸಾಗಿದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ. ಕೊಲ್ಲೂರು ಕ್ಷೇತ್ರಕ್ಕೆ ಕೇಂದ್ರ ರಾಜ್ಯ ಸಚಿವರು ಸಹಿತ ಅನೇಕ ರಾಜಕೀಯ ಮುಂದಾಳುಗಳು ಈ ಮಾರ್ಗವಾಗಿ ಆಗಮಿಸುತ್ತಾರೆ. ಆದರೆ ರಸ್ತೆಯ ದುಸ್ಥಿತಿಯ ಬಗ್ಗೆ ಯಾರೊಬ್ಬರು ಸರಕಾರದ ಗಮನ ಸೆಳೆದು ಕ್ರಮ ಕೈಗೊಳ್ಳುವ ಬಗ್ಗೆ ಒತ್ತಾಯಿಸುತ್ತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
Udupi: ವಿಶ್ವಶಾಂತಿಗೆ ಭಗವದ್ಗೀತೆಯೇ ಮೂಲಾಧಾರ: ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.