Koni: ಬ್ಯಾಂಕ್‌ನಲ್ಲಿ ಕಳ್ಳತನಕ್ಕೆ ಯತ್ನ- ಹೈದರಾಬಾದ್‌ನಿಂದ ಎಚ್ಚರಿಸಿದ ಸೆಕ್ಯುರಿಟಿ ಸಂಸ್ಥೆ
Team Udayavani, Oct 17, 2024, 7:20 AM IST
ಕುಂದಾಪುರ: ಕೋಣಿ ಸಮೀಪದ ಬ್ಯಾಂಕ್ ಒಂದರಲ್ಲಿ ಮಂಗಳವಾರ ತಡರಾತ್ರಿ ಕಳ್ಳತನಕ್ಕೆ ಯತ್ನ ನಡೆದಿದೆ. ಎಟಿಎಂಗೆ ನುಗ್ಗಿ ಯಂತ್ರ ತೆರೆಯಲು ನೋಡಿದಾಗ ಹೈದರಾಬಾದ್‌ನಿಂದ ಸೆಕ್ಯುರಿಟಿ ಸಂಸ್ಥೆಯವರು ಎಚ್ಚರಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಷ್ಟರಲ್ಲಿ ಕಳ್ಳರು ಬರಿಗೈಯಲ್ಲಿ ಪರಾರಿಯಾಗಿದ್ದಾರೆ.
ರಾತ್ರಿ 1.30ರ ಸುಮಾರಿಗೆ ಕೋಣಿ ಸಮೀಪದ ಬ್ಯಾಂಕ್‌ನ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಇಬ್ಬರು ವ್ಯಕ್ತಿಗಳು ಬ್ಯಾಂಕಿನ ಒಳಗೆ ಪೂರ್ತಿ ಜಾಲಾಡಿದ್ದಾರೆ. ಲಾಕರ್ ತೆರೆಯುವ ಯತ್ನ ಫಲ ನೀಡಲಿಲ್ಲ. ಕೊನೆಗೆ ಅದಕ್ಕೆ ಅಂಟಿಕೊಂಡಂತಿದ್ದ ಎಟಿಎಂಗೆ ಪ್ರವೇಶಿಸಿದ್ದಾರೆ. ಎಟಿಎಂ ಯಂತ್ರವನ್ನು ತೆರೆಯಲು ಯತ್ನಿಸಿದಾಗ ಸೈರನ್ ಮೊಳಗಿದೆ.
ಎಟಿಎಂಗಳನ್ನು ನಿರ್ವಹಿಸುವ ಸಂಸ್ಥೆಯ ಭದ್ರತೆ ನಿಗಾ ವಹಿಸುವವರು ಹೈದರಾಬಾದ್‌ನಲ್ಲಿ ಸಿಸಿ ಟಿವಿ ಮಾನಿಟರಿಂಗ್ ಮಾಡುತ್ತಿದ್ದು, ಅವರ ಗಮನಕ್ಕೆ ಬಂದು ತತ್‌ಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ಎಸ್‌ಐ ಹಾಗೂ ತಂಡ ಸ್ಥಳಕ್ಕೆ ಭೇಟಿ ನೀಡುವಷ್ಟರಲ್ಲಿ ಸೈರನ್ ಆದ ಕಾರಣ ಕಳ್ಳರು ಪರಾರಿಯಾಗಿದ್ದಾರೆ.
ಸಕಾಲದ ಮಾನಿಟರಿಂಗ್
ಡಿವೈಎಸ್‌ಪಿ ಬೆಳ್ಳಿಯಪ್ಪ, ಸರ್ಕಲ್ ಇನ್ಸ್‌ಪೆಕ್ಟರ್ ಮಂಜಪ್ಪ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಕೆಲವು ಸಮಯದ ಹಿಂದೆ ಮುಳ್ಳಿಕಟ್ಟೆಯಲ್ಲಿ ಸೊಸೈಟಿಯೊಂದಕ್ಕೆ ಕಳ್ಳನೊಬ್ಬ ನುಗ್ಗಿದಾಗ ಸಿಸಿ ಟಿವಿ ಮಾನಿಟರಿಂಗ್ ಮಾಡುವ ಸೈನ್ ಇನ್ ಸಂಸ್ಥೆ ಸಕಾಲದಲ್ಲಿ ಪೊಲೀಸರನ್ನು ಎಚ್ಚರಿಸಿ ಪಕ್ಕದಲ್ಲೇ ಗಸ್ತಿನಲ್ಲಿದ್ದ ಪೊಲೀಸರು ತತ್‌ಕ್ಷಣ ಸ್ಥಳಕ್ಕೆ ತಲುಪಿದ ಕಾರಣ ಕಳ್ಳನನ್ನು ಸೆರೆಹಿಡಿಯಲು ಸಾಧ್ಯವಾಗಿತ್ತು. ಅದಾದ ಬಳಿಕ ತೆಕ್ಕಟ್ಟೆ ಸಮೀಪ ತಂಡವೊಂದು ದರೋಡೆಗೆ ಬಂದಾಗಲೂ ಎಚ್ಚರ ವಹಿಸಿ ಅನಂತರ ತಂಡವನ್ನು ಪೊಲೀಸರು ಬಂಧಿಸಿದ್ದರು. ಇದೇ ರೀತಿ ಕಮಲಶಿಲೆ ದೇವಾಲಯ ಸಹಿತ ವಿವಿಧೆಡೆಯ ಗೋಕಳ್ಳತನ ಪ್ರಕರಣಗಳ ಆರೋಪಿಗಳನ್ನೂ ಬಂಧಿಸಲಾಗಿತ್ತು.
ರೈನ್‌ಕೋಟ್ ಧರಿಸಿದ್ದರು
ರೈನ್‌ಕೋಟ್ ಧರಿಸಿದ್ದ ಇಬ್ಬರ ಚಹರೆ ಪೂರ್ತಿಯಾಗಿ ಸಿಸಿ ಟಿವಿಯಲ್ಲಿ ಸೆರೆಯಾಗಿಲ್ಲ. ಬೈಕ್‌ನಲ್ಲಿ ಬಂದಿರುವ ಸಾಧ್ಯತೆಯಿದೆ. ಶ್ವಾನದಳ, ಬೆರಳಚ್ಚು ಪರಿಶೀಲನೆ ತಂಡ ಹಾಗೂ ಸೊಕೊ (ಸೀನ್ ಆಫ್ ಕ್ರೈಂ) ತಂಡ ಉಡುಪಿಯಿಂದ ಬುಧವಾರ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
Karkala: ಬಾವಿಗೆ ಬಿದ್ದು ವ್ಯಕ್ತಿ ಸಾವು; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ ಪಡೆ
State Government Programme: ರೈತರಿಂದ ದೂರ ಸರಿದ ಕೃಷಿ ಯಂತ್ರಧಾರೆ
Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!
MUST WATCH
ಹೊಸ ಸೇರ್ಪಡೆ
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.