ಇಂದಿನಿಂದ “ಕುಡುಬಿ’ ಹೋಳಿ ಹಬ್ಬ


Team Udayavani, Mar 17, 2019, 4:01 AM IST

kudubi.png

ಕುಂದಾಪುರ: ಫಾಲ್ಗುಣ ಮಾಸದ ಏಕಾದಶಿಯಿಂದ ಆರಂಭವಾಗಿ ಹುಣ್ಣಿಮೆಯವರೆಗೆ ವಿವಿಧ ಸಮುದಾ ಯದವರು ಹೋಳಿ ಹಬ್ಬವನ್ನು ಆಚರಿಸುತ್ತಿದ್ದಾರೆ.  ಕುಡುಬಿ, ಖಾರ್ವಿ, ಮರಾಠಿ ಸಮಾಜದವರೆಲ್ಲರೂ ವಿಶಿಷ್ಟ ರೀತಿಯಲ್ಲಿ ಹೋಳಿ ಆಚರಿಸುತ್ತಾರೆ. ಅದರಲ್ಲೂ ಜಿಲ್ಲೆಯ ಕುಡುಬಿ ಜನಾಂಗದವರು 5 ದಿನಗಳ ಕಾಲ ತನ್ನದೇ ಆದ ರೀತಿಯಲ್ಲಿ ವೈಶಿಷ್ಟ ಪೂರ್ಣವಾಗಿ ಹಬ್ಬ ಆಚರಿಸುತ್ತಾರೆ.

ಹೋಳಿ ಹಬ್ಬದ ಆಚರಣೆಗೆ ಹಲವಾರು ವರ್ಷಗಳ ಇತಿಹಾಸವಿದೆ. ಫಾಲ್ಗುಣ ಮಾಸದ ಏಕಾದಶಿಯಿಂದ ಹುಣ್ಣಿಮೆ ಯವರೆಗೆ (ಅಂದರೆ ಈ ವರ್ಷ ಮಾ. 17 ರಿಂದ ಮಾ. 22ರವರೆಗೆ) ಕುಡುಬಿ ಜನಾಂಗದವರು ಹೋಳಿ ಹಬ್ಬವನ್ನು ಆಚರಿಸುತ್ತಾರೆ. 

ಹಬ್ಬದ ಆಚರಣೆ ಹೇಗೆ?
ಮುನ್ನ ದಿನವೇ ಹಬ್ಬದ ಸಿದ್ಧತೆಗಳು ಆರಂಭಗೊಂಡಿದ್ದು, ಏಕಾದಶಿಯ ದಿನ ಬೆಳಗಿನ ಜಾವಕ್ಕೂ ಮುನ್ನವೇ ಎಲ್ಲ ಕೂಡು ಕಟ್ಟುಗಳ ಸದಸ್ಯರೆಲ್ಲ ಆಯಾಯ ಭಾಗದ ಗುರಿಕಾರರ ಮನೆಗೆ ಬಂದು ಸೇರಬೇಕು. ಅಲ್ಲಿ ದೇವರ ಪ್ರತಿಷ್ಠಾಪನೆ, ಹಾಡುಗಳ ಮೂಲಕವೇ ವಿಧಿ- ವಿಧಾನ ಪೂರೈಸಿ, ಕೋಲಾಟ, ಗುಮ್ಮಟೆ ನೃತ್ಯ ಮಾಡಿ, ಬಳಿಕ ಗ್ರಾಮ ದೇವಸ್ಥಾನದಲ್ಲಿ ಕೋಲಾಟ, ಗುಮ್ಮಟೆ ನೃತ್ಯ ಮಾಡಲಾಗುತ್ತದೆ. ಬಳಿಕ ಮೊದಲೆರಡು ದಿನಗಳ ಕಾಲ ಹೊರ ಗ್ರಾಮಗಳ ಕುಡುಬಿ ಸಮುದಾಯದವರ ಮನೆಗೆ ಹೋಗಿ, 3 ನೇ ದಿನ ಅವರದೇ ಗ್ರಾಮಕ್ಕೆ ಬಂದು ಅಲ್ಲಿನ ಎಲ್ಲರ ಮನೆಗೂ ಹೋಗುತ್ತಾರೆ. 5 ನೇ ದಿನ ಮತ್ತೆ ಗುರಿಕಾರರ ಮನೆಯಲ್ಲಿ ಸೇರುತ್ತಾರೆ. 

46 ಕೂಡು ಕಟ್ಟುಗಳು
ಉಡುಪಿ ಜಿಲ್ಲೆಯಲ್ಲಿ ಒಟ್ಟು 46 ಕೂಡು ಕಟ್ಟುಗಳಿವೆ. ಮಂದಾರ್ತಿ, ಕೊಕ್ಕರ್ಣೆ, ಹಾಲಾಡಿ, ಬೆಳ್ವೆ, ಬಾಕೂìರು, ಮುದ್ದೂರು, ಯಳಂತೂರು, ಶೇಡಿಮನೆ, ಹಿಲಿಯಾಣ, ಕಕ್ಕುಂಜೆ ಕಡೆಗಳೆಲ್ಲ ಕುಡುಬಿ ಮನೆತನಗಳಿವೆ. ಕುಡುಬಿಯವರ ಪ್ರಕಾರ ಕೂಡು ಕಟ್ಟು ಅಂದರೆ 1 ಗ್ರಾಮ ಅಂತ ಅರ್ಥ. ಗ್ರಾಮಕ್ಕೊಬ್ಬರು ಗುರಿಕಾರರಿರುತ್ತಾರೆ. 46 ಕೂಡು ಕಟ್ಟುಗಳು ಸಂಖ್ಯೆಗೆ ಅನುಗುಣವಾಗಿ 2 ಅಥವಾ ಅದಕ್ಕಿಂತ ಹೆಚ್ಚು ಪಂಗಡಗಳಾಗಿ ವಿಂಗಡಿಸಿ ಮನೆ – ಮನೆಗೆ ತೆರಳಿ ಗುಮ್ಮಟೆ ಹಾಗೂ ಕೋಲಾಟ ನೃತ್ಯ ಪ್ರದರ್ಶಿಸುತ್ತಾರೆ.
 
ಹಬ್ಬದ ಮುಕ್ತಾಯ

5ನೇ ದಿನ ಎಲ್ಲರೂ ಗುರಿಕಾರರ ಮನೆಯಲ್ಲಿ ಸೇರಿ ಅಲ್ಲಿಗೆ ಹಬ್ಬ ಮುಕ್ತಾಯ. ಗೆಜ್ಜೆ, ವೇಷ ಭೂಷಣ ಕಳಚಿ, ಎಲ್ಲರೂ ಸಾಮೂಹಿಕವಾಗಿ ಸ್ನಾನ ಮಾಡುತ್ತಾರೆ. ಆ ಬಳಿಕ ಪರಿಕರಗಳಿಗೆಲ್ಲ ಗುರಿಕಾರರು ಪೂಜೆ ಮಾಡಿದ ಅನಂತರ ಬೆಂಕಿ (ಕಾಮದಹನ ಮಾಡುವುದು) ಹಾಯುತ್ತಾರೆ. ಬಳಿಕ ಸಾಮೂಹಿಕವಾಗಿ ಊಟ ಮಾಡಿದ ಬಳಿಕ ಯುವಕರು, ಮಕ್ಕಳೆಲ್ಲ ಸೇರಿ ಗ್ರಾಮದಲ್ಲಿರುವ ಮನೆ- ಮನೆಗೆ ಹೋಗಿ ಬಣ್ಣ ಹಚ್ಚುವ ಮೂಲಕ ಹೋಳಿ ಹಬ್ಬ ಮುಗಿಯಿತು ಎನ್ನುವ ಸಂದೇಶ ರವಾನಿಸುತ್ತಾರೆ. 

ಆಚರಣೆಯ ಉದ್ದೇಶ
ವ್ರತಾಚರಣೆಯಲ್ಲಿರುವ ಶಿವನು ಮನ್ಮಥನಿಂದಾಗಿ ವ್ರತಭಂಗವಾಗಿ ಕೋಪಗೊಂಡಿರುತ್ತಾನೆ. ಅವನ ಕೋಪ ತಣಿಸುವ ಕಾರಣಕ್ಕಾಗಿ ಬುಡಕಟ್ಟು ಸಮುದಾಯದ ಕುಡುಬಿ ಜನರೆಲ್ಲ ಸೇರಿ ಹೋಳಿ ಹಬ್ಬವನ್ನು ಆಚರಿಸುತ್ತಾರೆ ಎನ್ನುವ ಹಿನ್ನೆಲೆಯಿದೆ. ಇದರಿಂದ ಶಿವನ ಕೋಪವು ಶಾಂತವಾಗಿ ಒಳಿತಾಗುತ್ತದೆ ಎನ್ನುವ ಪ್ರತೀತಿಯಿದೆ. 

ವ್ರತಾಚರಣೆ ಮಹತ್ವ
ಹೋಳಿ ಹಬ್ಬಕ್ಕೆ ನಮ್ಮಲ್ಲಿ ವಿಶೇಷ ಅರ್ಥವಿದೆ. ಹಬ್ಬಕ್ಕೆ 5 ಅಥವಾ 3 ದಿನಕ್ಕೆ ಮುಂಚೆ ಕೋಲು ಹಿಡಿಯುವುದು ಅಂದರೆ ವ್ರತಾಚರಣೆ ಆರಂಭಗೊಳ್ಳುತ್ತದೆ. ಕೋಲು ಹಿಡಿದವರು ಚಪ್ಪಲಿ ಹಾಕಬಾರದು, ಭಾರ ಹೊರಬಾರದು, ಬೇರೆಯವರ ಮನೆಯಲ್ಲಿ ಊಟ ಮಾಡಬಾರದು, ಮದಿರೆ – ಮಾನಿನಿ – ಮಾಂಸ ಸೇವನೆ ಮಾಡಬಾರದು. 
ನಾರಾಯಣ ನಾಯ್ಕ,  ಗೋಳಿಯಂಗಡಿ

ಟಾಪ್ ನ್ಯೂಸ್

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arest

Kundapura: ಅಂಬರ್‌ ಗ್ರೀಸ್‌ ಮಾರಾಟ ಪ್ರಕರಣ; ಮತ್ತೋರ್ವ ಆರೋಪಿಯ ಬಂಧನ

dw

Siddapura: ವಿದ್ಯುತ್‌ ಲೈನಿಗೆ ಕೊಕ್ಕೆ ತಾಗಿ ಕಾರ್ಮಿಕ ಸಾವು

byndoor

Siddapura: ಪಾದಚಾರಿಗೆ ಪಿಕಪ್‌ ವಾಹನ ಢಿಕ್ಕಿ; ಗಂಭೀರ

12-

Kundapura: ಬಸ್‌ನಲ್ಲೇ ಹೃದಯಾಘಾತ; ಸಮಯಪ್ರಜ್ಞೆ ಮೆರೆದ ಬಸ್‌ ಚಾಲಕ, ಸಾರ್ವಜನಿಕರ ಮೆಚ್ಚುಗೆ

Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್‌ ಹುತಾತ್ಮ

Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್‌ ಹುತಾತ್ಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

POlice

Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

3

Udupi: ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಗಾಯ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.