ಕುಂಭಾಸಿ : ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ: ಸಂಭ್ರಮದ ಬ್ರಹ್ಮ ರಥೋತ್ಸವ
Team Udayavani, Dec 7, 2021, 4:16 PM IST
ತೆಕ್ಕಟ್ಟೆ : ತೆಕ್ಕಟ್ಟೆ , ಡಿ.7 : ಪುರಾಣ ಪ್ರಸಿದ್ಧ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವರ ಬ್ರಹ್ಮ ರಥೋತ್ಸವ, ಅಷ್ಟೋತ್ತರ ಸಹಸರ ನಾಳಿಕೇರ ಗಣಯಾಗವು ಕೋವಿಡ್ 19 ನಿಯಮಾನುಸಾರ ಡಿ.7 ರಂದು ಸಂಪ್ರದಾಯದಂತೆ ಸಂಭ್ರಮದಿಂದ ನಡೆಯಿತು.
35 ಸಾವಿರಕ್ಕೂ ಅಧಿಕ ಭಕ್ತರಿಂದ ದರ್ಶನ : ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವರ ಬ್ರಹ್ಮ ರಥೋತ್ಸವ ಕ್ಕೆ ಮುಂಜಾನೆಯಿಂದಲೂ ನಂಬಿದ ಸಾವಿರಾರು ಭಕ್ತರು ಶ್ರೀ ದೇಗುಲಕ್ಕೆ ಆಗಮಿಸಿದ್ದು , ಸುಮಾರು 35 ಸಾವಿರಕ್ಕೂ ಅಧಿಕ ಭಕ್ತರು ದರ್ಶನ ಪಡೆದರು.
ದೇವಳವನ್ನು ಸಂಪೂರ್ಣ ಹೂವಿನ ಅಲಂಕಾರ ಮಾಡಲಾಗಿದ್ದು ,ಆಕರ್ಷಕ ಕೀಲು ಕದುರೆ ಹಾಗೂ ಗೊಂಬೆಗಳ ಕುಣಿತಗಳು ಗಮನ ಸೆಳೆಯಿತು. ಈ ಸಂದರ್ಭದಲ್ಲಿ ನಂಬಿದ ಭಕ್ತರು ನೆರೆದಿದ್ದರು.
ಈ ಸಂದರ್ಭದಲ್ಲಿ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಅನುವಂಶಿಕ ಆಡಳಿತ ಧರ್ಮದರ್ಶಿ ಕೆ.ಶ್ರೀರಮಣ ಉಪಾಧ್ಯಾಯ , ಹಿರಿಯ ಧರ್ಮದರ್ಶಿಗಳಾದ ಕೆ.ಸೂರ್ಯನಾರಾಯಣ ಉಪಾಧ್ಯಾಯ , ಕೆ.ವಿಠಲ ಉಪಾಧ್ಯಾಯ ಹಾಗೂ ಅನುವಂಶಿಕ ಪರ್ಯಾಯ ಅರ್ಚಕ ಕೆ.ವೆಂಕಟನಾರಾಯಣ ಉಪಾಧ್ಯಾಯ ಮತ್ತು ಸಹೋದರರು, ಅರ್ಚಕ ಮಂಡಳಿ ಹಾಗೂ ಸಿಬಂದಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.