ಕುಂದಾಪ್ರ ಕನ್ನಡ ವಿಶ್ವ ವ್ಯಾಪಿ ಆಚರಣೆಗೆ ಪ್ರಯತ್ನ: ಕೋಟ
Team Udayavani, Jul 21, 2020, 8:19 AM IST
ಕುಂದಾಪುರ: ಕುಂದಾಪ್ರ ಕನ್ನಡ ಆಕರ್ಷಕ ಹಾಗೂ ಅನುಪಮವಾದ ಸಮೃದ್ಧ ಭಾಷೆ. ರಾಜ್ಯ ಮಾತ್ರವಲ್ಲದೆ ವಿಶ್ವ ವ್ಯಾಪಿಯಾಗಿ ಆಚರಿಸಲು ಮುಂದಿನ ದಿನಗಳಲ್ಲಿ ಎಲ್ಲ ರೀತಿಯಲ್ಲೂ ಸಹಕರಿಸುವುದಾಗಿ ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಕೋವಿಡ್ ಭೀತಿಯ ನಡುವೆ ಆಷಾಢ ಅಮಾವಾಸ್ಯೆ (ಕರ್ಕಾಟಕ ಅಮಾವಾಸ್ಯೆ)ಯ ದಿನವಾದ ಸೋಮವಾರ ವಿಶ್ವ ಕುಂದಾಪ್ರ ದಿನಾಚರಣೆಯನ್ನು ಸಾಮಾಜಿಕ ಅಂತರ ಕಾಯ್ದುಕೊಂಡೇ ಸಾಮಾಜಿಕ ಜಾಲತಾಣಗಳಲ್ಲಿ ವಿಶ್ವದೆಲ್ಲೆಡೆ ಸಂಭ್ರಮದಿಂದ ಆಚರಿಸುತ್ತಿರುವ ಹಿನ್ನೆಲೆಯಲ್ಲಿ “ಉದಯವಾಣಿ’ಯೊಂದಿಗೆ ಮಾತನಾಡಿದ ಸಚಿವರು, ಈ ವಿಶ್ವ ಕುಂದಾಪ್ರ ಕನ್ನಡ ದಿನದ ಆಚರಣೆ ಮೂಲಕ ಭಾಷೆಯ ಬಗೆಗಿನ ಅಭಿಮಾನ, ಒಗ್ಗಟ್ಟನ್ನು ತೆರೆದಿಟ್ಟಿದ್ದಾರೆ. ಇದು ಬದುಕಿನ ಭಾಷೆಯಾದ ಕುಂದ ಕನ್ನಡದ ಸೊಗಡನ್ನು ಮತ್ತಷ್ಟು ಹೆಚ್ಚಿಸಿದೆ ಎಂದರು. ಭಾಷೆಗಳ ಸ್ಥಿತ್ಯಂತರಗಳ ಅಧ್ಯಯನಕ್ಕೆ ಭಾಷೆಯನ್ನು ಲಿಖಿತವಾಗಿ ದಾಖಲಿಸುವ ಕಾರ್ಯ ಆಗಬೇಕಾಗಿದ್ದು, ಮುಂದಿನ ದಿನಗಳಲ್ಲಿ ಸರಕಾರದ ಮಟ್ಟದಲ್ಲಿ ಗಮನ ಹರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಶ್ಲಾಘನೀಯ ಕಾರ್ಯ
ಕುಂದಾಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಬಿ. ಅಪ್ಪಣ್ಣ ಹೆಗ್ಡೆ ಮಾತನಾಡಿ, “ಕುಂದಾಪ್ರ ಕನ್ನಡ ನಮ್ ಅಬ್ಬಿ (ತಾಯಿ) ಇದ್ದಂಗೆ. ಅಬ್ಬಿ ಋಣ ಯಾವಾಗ್ಲೂ ತೀರ್ಸೋಕೆ ಆತಿಲ್ಲೆ. ಇದ್ ಸಾವ್ರ ವರ್ಷದ ಗಟ್ಟಿ ಭಾಷಿ’ ಕುಂದಾಪ್ರ ಕನ್ನಡ ಭಾಷೆಯನ್ನು ಮುಂದಿನ ಪೀಳಿಗೆಗೂ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಯುವಕರ ಶ್ರಮ ಶ್ಲಾಘನೀಯ ಎಂದು ಹೇಳಿದರು.
ಹತ್ತಾರು ಕಡೆ ಆಚರಣೆ
ಕುಂದಾಪುರ, ಬೈಂದೂರು, ಬ್ರಹ್ಮಾವರ, ಉಡುಪಿ, ಮಾತ್ರವಲ್ಲದೆ ರಾಜ್ಯದ ನಾನಾ ಕಡೆಗಳಲ್ಲಿ, ದೇಶದ ವಿವಿಧ ಭಾಗಗಳಲ್ಲಿರುವ, ವಿಶ್ವದೆಲ್ಲೆಡೆ ಇರುವ ಕುಂದಾಪುರ ಕನ್ನಡ ಭಾಷಿಕರು ವಿಶ್ವ ಕುಂದಾಪ್ರ ಕನ್ನಡ ದಿನವನ್ನು ಆಚರಿಸಿದರು. ಭಾರತ, ಯುಎಇ, ಒಮಾನ್, ಕತಾರ್, ಕುವೈಟ್, ಬಹ್ರೈನ್ ಸೇರಿದಂತೆ ವಿವಿಧೆಡೆ ಕಾರ್ಯಕ್ರಮ ನಡೆಸಲಾಗಿದ್ದು, ಜಾಲತಾಣಗಳ ಮೂಲಕ ಲಕ್ಷಾಂತರ ಮಂದಿ ಭಾಗಿಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು
Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.