ಕುಂದಾಪುರ: ನಕ್ಸಲ್ ನಾಯಕರು 10 ದಿನ ಪೊಲೀಸ್ ವಶಕ್ಕೆ
Team Udayavani, May 11, 2022, 11:11 PM IST
ಕುಂದಾಪುರ: ಕೇರಳದಲ್ಲಿ ಬಂಧಿತರಾದ ನಕ್ಸಲ್‌ವಾದಿಗಳಾದ ಶೃಂಗೇರಿ ತಾಲೂಕು ಭುವನಹಡ್ಲು ಗ್ರಾಮದ ಬಿ. ಜಿ. ಕೃಷ್ಣಮೂರ್ತಿ ಹಾಗೂ ಸಾವಿತ್ರಿ ಅವರನ್ನು ಬುಧವಾರ ಇಲ್ಲಿನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಮೇ 20 ರ ವರೆಗೆ 10 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶಿಸಿದೆ.
ತಾಲೂಕಿನ ಅಮಾಸೆಬೈಲ್ ಠಾಣೆಯಲ್ಲಿ 2006 ರಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿಗಳ ವಿಚಾರಣೆಗಾಗಿ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಬಿ.ಜಿ. ಕೃಷ್ಣಮೂರ್ತಿ ಹಾಗೂ ಸಾವಿತ್ರಿ ಅವರನ್ನು ಕಾರ್ಕಳ, ಹೆಬ್ರಿ ಹಾಗೂ ಅಜೆಕಾರು ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೇ3 ರಂದು ಪೊಲೀಸ್ ಕಸ್ಟಡಿ ಪಡೆದು ವಿಚಾರಣೆ ನಡೆಸಿ, ಸ್ಥಳ ಮಹಜರು ಮಾಡಲಾಗಿತ್ತು. ಬಳಿಕ ಮಂಗಳವಾರ ಮರಳಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಕೇಶವ್ ಯಡಿಯಾಳ ಹತ್ಯೆ ಹಾಗೂ ಇತರ ಪ್ರಕರಣಗಳ ವಿಚಾರಣೆಗಾಗಿ ಕುಂದಾಪುರ ಉಪ ವಿಭಾಗದ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಲುವಾಗಿ ಕಸ್ಟಡಿಗೆ ಕೇಳಲಾಗಿದೆ.
ಅಮಾಸೆಬೈಲ್ ಠಾಣೆಯಲ್ಲಿ ಇವರಿಬ್ಬರ ವಿರುದ್ಧ 4, ಶಂಕರನಾರಾಯಣ ಠಾಣೆಯಲ್ಲಿ 6 ಹಾಗೂ ಕೊಲ್ಲೂರು ಠಾಣೆಯಲ್ಲಿ ಒಂದು ಪ್ರಕರಣಗಳು ದಾಖಲಾಗಿವೆ.
ಬಿ.ಜಿ. ಕೃಷ್ಣಮೂರ್ತಿ ವಿರುದ್ದ 53 ಹಾಗೂ ಸಾವಿತ್ರಿ ವಿರುದ್ಧ ಒಟ್ಟು 22 ಪ್ರಕರಣಗಳಿವೆ. ಕೇರಳದ ಗಡಿ ಭಾಗವಾದ ವಯನಾಡ್‌ನ ಸುಲ್ತಾನ್‌ಬತೇರಿಯಲ್ಲಿ ನ.10ರಂದು ಕೇರಳದ ಭಯೋತ್ಪಾದನಾ ನಿಗ್ರಹ ಪಡೆಯಿಂದ ಅವರ ಬಂಧನವಾಗಿತ್ತು. ಫೆ.24 ರಂದು ಕೇರಳದ ಪೊಲೀಸರು ಅವರನ್ನು ಕರ್ನಾಟಕ ಪೋಲಿಸರಿಗೆ ಹಸ್ತಾಂತರಿಸಿದ್ದರು.
ನಕ್ಸಲ್‌ವಾದಿಗಳನ್ನು ಇರಿಸಿರುವ ಪೊಲೀಸ್ ಠಾಣೆಯ ಸುತ್ತ ವಿಶೇಷ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಕುಂದಾಪುರದ ಡಿವೈಎಸ್ಪಿ ಶ್ರೀಕಾಂತ ಕೆ. , ಸರ್ಕಲ್ ಇನ್ಸ್‌ಪೆಕ್ಟರ್ ಗೋಪಿಕೃಷ್ಣ ಕೆ. ಆರ್. ಹಾಗೂ ಉಪ ವಿಭಾಗದ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ವಿಚಾರಣೆ ಮುಂದುವರೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.