ಬದಲಾವಣೆಗೆ ಆಗ್ರಹ: ಕುಂದಾಪುರ ತಾ.ಪಂ. ಕಚೇರಿಯೆದುರು ಧರಣಿ

ಕೆದೂರು ಪಿಡಿಒ ಕರ್ತವ್ಯ ಲೋಪ

Team Udayavani, Mar 24, 2022, 12:02 PM IST

dharani

ಕುಂದಾಪುರ: ತಾಲೂಕಿನ ಕೆದೂರು ಗ್ರಾ.ಪಂ.ನಲ್ಲಿ ಅಧಿಕಾರಿಗಳಿಂದ ಸಮರ್ಪಕ ಕೆಲಸವಾಗುತ್ತಿಲ್ಲ ಎಂದು ಅಧಿಕಾರಿಗಳ ಕರ್ತವ್ಯ ಲೋಪದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಹಾಗೂ ಪಿಡಿಒ ಬದಲಾವಣೆಗೆ ಆಗ್ರಹಿಸಲಾಗಿದೆ. ಕೆದೂರು ಗ್ರಾ.ಪಂ. ಜನಪ್ರತಿನಿಧಿಗಳು ಹಾಗೂ ನಾಗರಿಕರು ಕುಂದಾಪುರ ತಾ.ಪಂ. ಎದುರು ಬುಧವಾರ ಧರಣಿ ನಡೆಸಿದರು.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಕೆದೂರಿನಲ್ಲಿ ನಡೆದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ’ ಕಾರ್ಯಕ್ರಮದಲ್ಲಿ ನೀಡಲಾದ ಯಾವ ಮನವಿ, ಕೋರಿಕೆ, ಸಮಸ್ಯೆಗಳಿಗೆ ಒಂದಷ್ಟೂ ಗಮನ ನೀಡದ ಸರಕಾರದ ಅಧಿಕಾರಿಗಳ ಬಗ್ಗೆ ನಂಬಿಕೆಯಿಲ್ಲ ಎಂದು ದೂರಿದರು. ನಾಗರಿಕರ ಪರವಾಗಿ ಮಾತನಾಡಿದ ನಿವೃತ್ತ ಶಿಕ್ಷಣಾಧಿಕಾರಿ ಕೆ. ಸೀತಾರಾಮ ಶೆಟ್ಟಿ, ಪಂ.ನ ಆಡಳಿತ ಹದಗೆಟ್ಟರೆ, ನ್ಯಾಯ, ಕಾನೂನು ಹಾಗೂ ಸಾಮಾಜಿಕ ಭದ್ರತೆ ಮುರಿದು ಬಿದ್ದರೆ, ಜನ ಯಾವ ಸರಕಾರವನ್ನು, ಆಡಳಿತ, ಕಾನೂನನ್ನು ನಂಬುವುದಿಲ್ಲ ಎಂದರು.

ಪಿಡಿಒ ಹಾಗೂ ಇತರ ಅಧಿಕಾರಿಗಳು ಕಚೇರಿಗೆ ಸರಿಯಾಗಿ ಹಾಜರಾಗುವುದಿಲ್ಲ. ಪಿಡಿಒ ವಾರಕ್ಕೆ ಎರಡೇ ದಿನ ಬರುತ್ತಾರೆ. ಅದೂ ಮಧ್ಯಾಹ್ನ! ಮೀಟಿಂಗ್‌ ನಡೆದರೆ ಎರಡೂವರೆ ತಿಂಗಳ ಬಳಿಕ ನಿರ್ಣಯ ಬರೆಯುತ್ತಾರೆ. ನರೇಗಾ ಕಾಮಗಾರಿ ಸೇರಿದಂತೆ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಗ್ರಾ.ಪಂ.ಗೆ 4 ಲಕ್ಷ ರೂ. ತೆರಿಗೆ ಬಾಕಿ ಇದೆ. ಕುಂದಾಪುರ ತಾಲೂಕಿನಲ್ಲಿ ಮೊತ್ತಮೊದಲು ಆರ್‌ಟಿಐ ತರಬೇತಿ ನೀಡಿದ ನನಗೇ ಆರ್‌ಟಿಐ ಮಾಹಿತಿ ತಿರುಚಿ ನೀಡಲಾಗುತ್ತದೆ ಎಂದರು. ಪಂ.ಸದಸ್ಯರು ನಮಗೆ ಈ ಪಿಡಿಒ ಬೇಡ, ಬದಲಿಸಿ ಎಂದು ಒತ್ತಾಯಿಸಿದರು.

ತಾ.ಪಂ. ಕಾರ್ಯನಿರ್ವಹಣಾಧಿಕಾರಿ, ಸಮಾಜ ಕಲ್ಯಾಣಾಧಿಕಾರಿ ಅವರು ಧರಣಿ ನಿರತರ ಬಳಿ ಮನವಿ ಮಾಡಿದರು. ಮೊದಲು ಮನವಿಗೆ ಒಪ್ಪದೇ ಇದ್ದರೂ ಬಳಿಕ ಅಧಿಕಾರಿಗಳ ಮಾತಿಗೆ ಬೆಲೆ ನೀಡಿದರು. ಕಾರ್ಯ ನಿರ್ವಹಣಾಧಿಕಾರಿ ಶ್ವೇತಾ ಅವರು ಮನವಿ ಸ್ವೀಕರಿಸಿ ಎಪ್ರಿಲ್‌ ತಿಂಗಳ ಒಳಗೆ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು. ಕೆದೂರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ, ಉಪಾಧ್ಯಕ್ಷೆ ಮಾಲತಿ, ಸದಸ್ಯರಾದ ಭುಜಂಗ ಶೆಟ್ಟಿ, ಸತೀಶ್‌ ಶೆಟ್ಟಿ, ಪ್ರಶಾಂತ್‌ ಶೆಟ್ಟಿ, ಗುಬ್ಬಿ, ಜಲಜಾ, ವಿಜಯ ಶೆಟ್ಟಿ, ಉಲ್ಲಾಸ್‌ ಹೆಗ್ಡೆ, ಜ್ಯೋತಿ, ಸ್ಥಳೀಯರಾದ ಧರ್ಮರಾಜ್‌ ಮೊದಲಿಯಾರ್‌, ಶಾರದಾ, ಪ್ರಕಾಶ್‌ ಮೊದಲಾದವರಿದ್ದರು. ತಾ.ಪಂ. ಕಚೇರಿಯ ಪ್ರವೇಶದ್ವಾರ ದಲ್ಲೇ ಧರಣಿ ಕುಳಿತಿದ್ದ ಕಾರಣ ಅಧಿಕಾರಿಗಳಿಗೆ ಪ್ರತಿಭಟನಕಾರರನ್ನು ದಾಟಿ ಕಚೇರಿಗೆ ಒಳಪ್ರವೇಶಿಸುವುದು ಸಾಧ್ಯವಿರಲಿಲ್ಲ. ಅಹವಾಲು ಕೇಳಿಯೇ ಹೋಗಬೇಕಿತ್ತು. ಅಧಿಕಾರಿಗಳ ಭರವಸೆ ಆರಂಭವಾಗುತ್ತಿದ್ದಂತೆಯೇ ಪ್ರತಿಭಟನ ಕಾರರು ಕೈ ಮುಗಿದು ನಿಮ್ಮ ಭರವಸೆ ಕೇಳಿ ಸಾಕಾಗಿದೆ ಎನ್ನುತ್ತಿದ್ದರು.

ಕರ್ತವ್ಯ ಪಾಲಿಸಲ್ಲ

ಪಿಡಿಒ ಸರಿಯಾಗಿ ಕರ್ತವ್ಯ ಪಾಲಿಸದ ಕಾರಣ ಇತರ ಅಧಿಕಾರಿಗಳೂ ಅದೇ ದಾರಿಯಲ್ಲಿದ್ದಾರೆ. ಸಾರ್ವಜನಿಕ ಕೆಲಸ ಕಾರ್ಯಗಳು ನಡೆಯುತ್ತಿಲ್ಲ. ನರೇಗಾ ಅನುದಾನ ಬಂದಿಲ್ಲ. ಗ್ರಾ.ಪಂ. ಗೆ ತೆರಿಗೆ ವಸೂಲಿಗೆ ಬಾಕಿ ಇದ್ದರೂ ಮಾಡಿಲ್ಲ. ಆದ್ದರಿಂದ ಈ ಪಿಡಿಒ ನಮ್ಮ ಪಂಚಾಯತ್‌ಗೆ ಬೇಡ. -ಕೆ. ಸೀತಾರಾಮ ಶೆಟ್ಟಿ ನಿವೃತ್ತ ಅಧಿಕಾರಿ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.