ಕುಂದಾಪುರದಲ್ಲೂ ದೇಗುಲ ದರ್ಶನ ಆರಂಭ
Team Udayavani, Jun 9, 2020, 5:23 AM IST
ಕುಂದಾಪುರ: ದೇವಸ್ಥಾನ ಗಳಲ್ಲಿ ದೇವರ ದರ್ಶನಕ್ಕೆ ಭಕ್ತರಿಗೆ ಸೋಮವಾರದಿಂದ ಅವಕಾಶ ಕಲ್ಪಿಸಲಾಗಿದ್ದು, ಕುಂದಾಪುರ ಹಾಗೂ ಬೈಂದೂರು ತಾಲೂ ಕಿನ ಕೆಲ ದೇವಸ್ಥಾನಗಳನ್ನು ಹೊರತುಪಡಿಸಿ, ಬಹುತೇಕ ಎಲ್ಲ ದೇವಸ್ಥಾನಗಳಲ್ಲಿ ಭಕ್ತರಿಗೆ ಅವಕಾಶ ಮಾಡಿಕೊಡಲಾಗಿತ್ತು.
ದೇವಸ್ಥಾನಗಳಲ್ಲಿ ಮಾಸ್ಕ್ ಧರಿಸಿದ ಭಕ್ತರನ್ನು ಮಾತ್ರ ಒಳಬಿಡಲಾಗುತ್ತಿತ್ತು. ಪ್ರವೇಶಕ್ಕೆ ಮೊದಲು ಕೈ- ಕಾಲು ತೊಳೆದು, ಸ್ಯಾನಿಟೈಸರ್ ಹಾಕಿ ಸ್ವಚ್ಛ ಮಾಡಿ ಪ್ರವೇಶಿಸಬೇಕು. ದೇಹದ ಉಷ್ಣಾಂಶ ತಪಾಸಣೆ, ಸಾಮಾಜಿಕ ಅಂತರ, ಹಣ್ಣು, ಕಾಯಿ, ಇತ್ಯಾದಿ ಪೂಜಾ ಸಾಮಗ್ರಿಗಳನ್ನು ತೊಳೆದು ತರಬೇಕು ಎಂಬಿತ್ಯಾದಿ ನಿಬಂಧನೆಗಳನ್ನು ವಿಧಿಸಲಾಗಿತ್ತು.
ಹಟ್ಟಿಯಂಗಡಿಯ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಬಗ್ವಾಡಿ, ಕ್ರೋಢ ಶಂಕರನಾರಾಯಣ, ಸೌಕೂರು, ಬೈಂದೂರಿನ ಶ್ರೀ ಸೇನೇಶ್ವರ, ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಉಳ್ಳೂರು ಕಾರ್ತಿಕೇಯ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ ಭಕ್ತರ ಪ್ರವೇಶಕ್ಕೆ ಅವಕಾಶ ನೀಡಲಾಗಿತ್ತು.
ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಜೂ. 15ರ ಸಂಕ್ರಮಣ ದಿಂದ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಗುಜ್ಜಾಡಿ ಗ್ರಾಮದ ಕೊಡಪಾಡಿಯ ಶ್ರೀ ಗುಹೇಶ್ವರ ದೇವಸ್ಥಾನ ದಲ್ಲಿಯೂ ಕೆಲ ದಿನಗಳವರೆಗೆ ಭಕ್ತರ ಪ್ರವೇಶಕ್ಕೆ ಅವಕಾಶ ನಿರಾಕರಿಸಲಾಗಿದೆ.
ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇಗುಲ
ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ, ಕುಂಭಾಶಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದೇವರ ದರ್ಶನಕ್ಕೂ ಮುನ್ನ ಥರ್ಮಲ್ ಸ್ಕಾನ್, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಜತೆಗೆ ಸ್ಯಾನಿಟೈಸರ್ ಬಳಸಲಾಗಿತ್ತು.
ಬೆಳ್ಮಣ್ ಪರಿಸರದ ದೇಗುಲವಾದ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರೀ ದೇಗುಲ ಸಹಿತ ಬೆಳ್ಮಣ್ ಶ್ರೀ ದುರ್ಗಾಪರಮೇಶ್ವರೀ ದೇಗುಲ, ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇಗುಲ, ಬೋಳ ಮೃತ್ಯುಂಜಯ ರುದ್ರ ಸೋಮನಾಥೇಶ್ವರ ದೇಗುಲ, ಪೊಸ್ರಾಲು ಶ್ರೀ ಮಹಾಲಿಂಗೇಶ್ವರಗಳು ಸೋಮವಾರ ತೆರೆದಿದ್ದು ಭಕ್ತರ ಸಂಖ್ಯೆ ವಿರಳವಾಗಿತ್ತು. ಧಾರ್ಮಿಕ ದತ್ತಿ ಇಲಾಖೆ ನೀಡಿದ ಮಾರ್ಗಸೂಚಿಗಳನ್ನು ಅನುಸರಿಸಲು ಭಕ್ತರು ಒಂದಿಷ್ಟು ಪರದಾಡುವಂತಾಗಿತ್ತು.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲ
ಶತ ಚಂಡಿಕಾಯಾಗ
ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದಲ್ಲಿ ಜೂ.8ರಂದು ಶ್ರೀ ದೇವಿಯ ದರ್ಶನಕ್ಕೆ ಪ್ರವೇಶ ದೊರಕಿದ್ದು, ದೇಗುಲದಲ್ಲಿ ಲೋಕ ಕಲ್ಯಾಣಾರ್ಥ ಚಂಡಿಕಾ ಯಾಗ ನಡೆಯಿತು. ಇಲ್ಲಿ ಒಳ ಪೌಳಿ ದರ್ಶನ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಧ್ವಜಸ್ತಂಭದ ಬಳಿ ಬಂದ ಭಕ್ತರು ಪ್ರಾರ್ಥನೆ ಸಲ್ಲಿಸಿ ಸರಸ್ವತಿ ಮಂಟಪ ಮಾರ್ಗವಾಗಿ ಆನೆ ಬಾಗಿಲು ದ್ವಾರದಿಂದ ನಿರ್ಗಮಿಸಲು ವ್ಯವಸ್ಥೆಗೊಳಿಸಲಾಗಿದೆ. ದೇವರ ಹರಕೆ ಪೂಜೆ ಸೇವೆಗೆ ಅವಕಾಶವಿಲ್ಲ , ಗರ್ಭ ಗುಡಿಯ ಒಳ ಪೌಳಿಯಲ್ಲಿ ಪೂಜಾ ವಿಧಿವಿಧಾನ ನೆರವೇರಿಸುವ ಅರ್ಚಕರಿಗೆ ಪ್ರವೇಶ ಕಲ್ಪಿಸಲಾಗಿದೆ. ಸರಕಾರದ ಮುಂದಿನ ಆದೇಶದವರೆಗೆ ಮಧ್ಯಾಹ್ನ ಹಾಗೂ ರಾತ್ರಿಯ ಭೋಜನ ವ್ಯವಸ್ಥೆಯನ್ನು ರದ್ದುಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು
Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.