Kundapura; ಕರಿಮಣಿ ಎಗರಿಸಿದ ಇಬ್ಬರ ಬಂಧನ
Team Udayavani, Jan 20, 2024, 12:52 AM IST
ಕುಂದಾಪುರ: ಮದುವೆ ನಿಮಿತ್ತ ಕರಿಮಣಿ ಸರ ಖರೀದಿಸಿ ತಂದು ದೇವಾಲಯದೊಳಗೆ ಹೋಗಿದ್ದಾಗ ಭಕ್ತರ ಸೋಗಿನಲ್ಲಿ ಕಳವುಗೈದಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಭಟ್ಕಳದ ವ್ಯಕ್ತಿಯೊಬ್ಬರು ಚಿನ್ನ ಬ್ಯಾಗಿನಲ್ಲಿಟ್ಟು ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಪೂಜೆಗೆ ಹೋಗಿದ್ದಾಗ ಬ್ಯಾಗಿನಲ್ಲಿದ್ದ 3.5 ಲಕ್ಷ ರೂ. ಮೌಲ್ಯದ ಚಿನ್ನಾಣಭರಣವಿದ್ದ ಪರ್ಸ್ ಕಳವುಗೈಯಲಾಗಿತ್ತು. ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಜ. 14ರಂದು ದೂರು ದಾಖಲಾಗಿತ್ತು. ತನಿಖೆ ಕೈಗೆತ್ತಿಕೊಂಡ ಪೊಲೀಸರ ತಂಡವು ಸಿಸಿ ಟಿವಿ ಮತ್ತು ಇತರ ತಾಂತ್ರಿಕ ದಾಖಲೆ ವಿಶ್ಲೇಷಣೆ ಮೂಲಕ ಪ್ರಕರಣ ದಾಖಲಾದ ಮೂರು ದಿನದಲ್ಲಿ ಇಬ್ಬರು ಮಹಿಳಾ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಹುಬ್ಬಳ್ಳಿ ಬೆಂಡಗೇರಿ ಮೂಲದ ವರಾದ ಬೀಬಿ ಜಾನ್ (58), ಪಾರವ್ವ (54) ಅವರನ್ನು ಬಂಧಿಸಿದ್ದು ಕಳವುಗೈದ 3.5 ಲಕ್ಷ ರೂ. ಮೌಲ್ಯದ 51.9 ಗ್ರಾಂ ತೂಕದ ಚಿನ್ನದ ಕರಿಮಣಿಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ವಿಧಿಸಲಾಗಿದೆ.
ಜಿಲ್ಲಾ ಎಸ್ಪಿ ಡಾ| ಅರುಣ್ ಕೆ. ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪರಮೇಶ್ವರ ಹೆಗಡೆ, ಎಸ್.ಟಿ. ಸಿದ್ಧಲಿಂಗಪ್ಪ ಅವರ ನಿರ್ದೇಶನದಲ್ಲಿ ಕುಂದಾಪುರ ಡಿವೈಎಸ್ಪಿ ಕೆ.ಯು. ಬೆಳ್ಳಿಯಪ್ಪ ನೇತೃತ್ವದಲ್ಲಿ, ಕುಂದಾಪುರ ನಗರ ಠಾಣೆ ನಿರೀಕ್ಷಕ ಯು.ಬಿ. ನಂದಕುಮಾರ್, ಉಪನಿರೀಕ್ಷಕ ವಿನಯ್ ಎಂ. ಕೊರ್ಲಹಳ್ಳಿ, ಕ್ರೈಂ ವಿಭಾಗದ ಪಿಎಸ್‌ಐ ಪ್ರಸಾದ್ ಕುಮಾರ್ ಕೆ., ಸಿಬಂದಿ ಸಂತೋಷ್ ಕುಮಾರ್, ಶ್ರೀಧರ್, ರಾಮ ಪೂಜಾರಿ, ಮೋನಿಕಾ, ಪದ್ಮಾವತಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ
Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ
Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ
ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ
Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ
MUST WATCH
ಹೊಸ ಸೇರ್ಪಡೆ
Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.