Kundapura: ವೈದ್ಯರ ಮೇಲೆ ಹಲ್ಲೆಗೆ ಯತ್ನ; ಬೆದರಿಕೆ; ದೂರು ದಾಖಲು
Team Udayavani, Nov 5, 2024, 9:40 PM IST
ಕುಂದಾಪುರ: ಇಲ್ಲಿನ ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಮೂರ್ತಿರಾಜ್ ಮೇಲೆ ಹಲ್ಲೆಗೆ ಯತ್ನಿಸಿ, ಬೆದರಿಕೆ ಹಾಕಿದ ಕುರಿತು ದೂರು ದಾಖಲಾಗಿದೆ.
ರಾತ್ರಿ ತುರ್ತು ಚಿಕಿತ್ಸಾ ವಿಭಾಗದಲ್ಲಿ ಕರ್ತವ್ಯದಲ್ಲಿರುವಾಗ ರಾಧಾ ಎಂಬವರು ಇನ್ನೋರ್ವ ಮಹಿಳೆ ಜತೆ ಚಿಕಿತ್ಸೆಗೆ ಬಂದಿದ್ದು, ಅವರನ್ನು ಶುಶ್ರೂಷಾಧಿಕಾರಿ ಶೋಭಾ ಕುಮಾರಿ ಅವರ ಸಮಕ್ಷಮದಲ್ಲಿ ಸಮಾಲೋಚನೆ ನಡೆಸಿ ವೈದ್ಯಕೀಯಾ ದಾಖಲೆಗಳನ್ನು ಪರಿಶೀಲಿಸಿ ಒಳರೋಗಿಯಾಗಿ ದಾಖಲಿಸಲು ಸೂಚಿಸಲಾಗಿತ್ತು. ಆಗ ಮಹಿಳೆಯ ಪತಿ ನಾಗರಾಜ ಬೀಜಾಡಿ ಬಂದಿದ್ದು ರಾಧಾ ಜತೆ ವೈದ್ಯರು ಶುಶ್ರೂಷಾಧಿಕಾರಿ ಸಮ್ಮುಖ ಸಮಾಲೋಚನೆ ನಡೆಸಿದಾಗ ಆಸ್ಪತ್ರೆಯಿಂದ ದಾಖಲಾಗದೇ ಹೊರಟು ಹೋಗಿದ್ದಾರೆ. ಮರಳಿ ಬಂದು ವೈದ್ಯರನ್ನು ನಿಂದಿಸಿ, ಹಲ್ಲೆ ಮಾಡಲು ಮುಂದಾಗಿದ್ದಲ್ಲದೆ ಮೇಜಿನ ಮೇಲಿದ್ದ ಸರಕಾರಿ ದಾಖಲೆಗಳನ್ನು ಹರಿದು ಎಸೆದು ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ರಾಧಾ ಅವರ ವೈದ್ಯಕೀಯ ದಾಖಲೆಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
Udupi: ವಿಶ್ವಶಾಂತಿಗೆ ಭಗವದ್ಗೀತೆಯೇ ಮೂಲಾಧಾರ: ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.