Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Team Udayavani, Apr 25, 2024, 7:37 AM IST

yaksh

ಕುಂದಾಪುರ: ಬಡಗುತಿಟ್ಟಿನ ಯಕ್ಷಗಾನದಲ್ಲಿ ಹೊಸ ಅಲೆ ಎಬ್ಬಿಸಿದ್ದ ಕಾಳಿಂಗ ನಾವಡರ ಅಗಲುವಿಕೆಯ ಬಳಿಕ‌ ಉಂಟಾಗಬಹುದಿದ್ದ ನಿರ್ವಾತವನ್ನು ತುಂಬಲು ಯತ್ನಿಸಿದ್ದ ಭಾಗವತ ಶ್ರೇಷ್ಠ ಸುಬ್ರಹ್ಮಣ್ಯ ಧಾರೇಶ್ವರ (67) ಅವರು ಎ.25 ರಂದು ಬೆಳಗ್ಗೆ 4.30 ಕ್ಕೆ ಬೆಂಗಳೂರಿನಲ್ಲಿ ಪುತ್ರನ ಮನೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಯಕ್ಷಗಾನ ರಂಗ ಕಂಡ ಪ್ರಯೋಗಶೀಲ ಭಾಗವತರಾಗಿದ್ದ ಅವರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಯಕ್ಷಗಾನ ಕ್ಷೇತ್ರದಲ್ಲಿ 46 ವರ್ಷಗಳ ಸೇವೆ ಸಲ್ಲಿಸಿದ್ದರು.

ಪೆರ್ಡೂರು ಮೇಳವೊಂದರಲ್ಲೇ 28 ವರ್ಷ ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸಿದ್ದ ಅವರು ಅದಕ್ಕೂ ಮೊದಲು ಅಮೃತೇಶ್ವರಿ ಮೇಳದಲ್ಲಿ ತಮ್ಮ ತಿರುಗಾಟ ಆರಂಭಿಸಿದ್ದರು.

ಹಿರೇಮಹಾಲಿಂಗೇಶ್ವರ ಮೇಳ ಹಾಗೂ ಶಿರಸಿ ಮೇಳದಲ್ಲೂ ಭಾಗವತರಾಗಿ ಬಳಿಕ ಪೆರ್ಡೂರು ಮೇಳದ ರಂಗಮಂಚವೇರಿದವರು ಯಶಸ್ಸಿನ ಶಿಖರ ತಲುಪಿದ್ದರು. 1957 ರಲ್ಲಿ ಗೋಕರ್ಣದಲ್ಲಿ ಜನಿಸಿದ್ದ ಅವರು ಸಂಗೀತಾಭ್ಯಾಸ ‌ಮಾಡಿ ಕಾರ್ಯಕ್ರಮ ನೀಡುತ್ತಿದ್ದರು.

ಬಳಿಕ ಎಲೆಕ್ಟ್ರಿಕ್ ಅಂಗಡಿ ಹಾಕಿ ಯಕ್ಷಗಾನ ಮೇಳಕ್ಕೆ ಲೈಟಿಂಗ್ ವ್ಯವಸ್ಥೆಗೆ ಸೇರಿದ್ದರು. ಪ್ರಾಚಾರ್ಯ ನಾರಣಪ್ಪ ಉಪ್ಪೂರರ ಮೂಲಕ ರಂಗಸ್ಥಳದ ಮೇಲೇರಿದರು. ಹೊಸ ಹೊಸ ಪ್ರಸಂಗಗಳನ್ನು ಹೊಸತನದಲ್ಲಿ ನಿರ್ದೇಶಿಸುವ ಮೂಲಕ ರಂಗಮಾಂತ್ರಿಕ ಎನಿಸಿದ್ದರು.ಕೀರ್ತಿಯ ಉತ್ತುಂಗದಲ್ಲಿ ಇದ್ದಾಗಲೇ ಮೇಳ ತಿರುಗಾಟ ನಿಲ್ಲಿಸಿದ್ದರು.

ಮೇಳ ಬಿಟ್ಟು 10 ವರ್ಷದ ಬಳಿಕ ಮತ್ತೆ ಅದೇ ಮೇಳಕ್ಕೆ ಅನಿವಾರ್ಯ ಸಂದರ್ಭದಲ್ಲಿ ಸೇರಿ ಒಂದು ವರ್ಷದ ತಿರುಗಾಟ ಮಾಡಿದ್ದರು. ಧಾರೇಶ್ವರ ಯಕ್ಷ ಬಳಗ ಮೂಲಕ ಯಕ್ಷಗಾನ ಕಾರ್ಯಕ್ರಮ ಸಂಯೋಜಿಸುತ್ತಿದ್ದರು. ಬದುಕಿನುದ್ದಕ್ಕೂ ತಮ್ಮ ಸ್ವರದ ಮೂಲಕವೇ ಅಭಿಮಾನಿಗಳನ್ನು ಸೆಳೆದಿಟ್ಟುಕೊಂಡಿದ್ದ ಭಾಗವತರ ಅಗಲುವಿಕೆ ನಿಜಕ್ಕೂ ಮಾತಾಡದ ಸ್ಥಿತಿ ತಂದಿದೆ.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.