Kundapura: ಗುಲ್ವಾಡಿ; ಗಾಯಾಳು ಸಾವು
Team Udayavani, Jan 5, 2025, 9:20 PM IST
ಕುಂದಾಪುರ: ಸುಮಾರು ಎರಡೂವರೆ ವರ್ಷದ ಹಿಂದೆ ರಸ್ತೆ ಅಪಘಾತದಲ್ಲಿ ತಲೆಗೆ ತೀವ್ರ ತರಹದ ಪೆಟ್ಟಾಗಿ ಆರೈಕೆಯಲ್ಲಿದ್ದ ಗುಲ್ವಾಡಿಯ ಪ್ರಕಾಶ್ (37) ಅವರು ಚಿಕಿತ್ಸೆಗೆ ಸ್ಪಂದಿಸದೆ ಜ. 4ರಂದು ಸಂಜೆ ಸಾವನ್ನಪ್ಪಿದ್ದಾರೆ.
ಪ್ರಕಾಶ್ ಅವರು ನೇರಳಕಟ್ಟೆಯ ಸಹಕಾರಿ ಸಂಘವೊಂದರಲ್ಲಿ ಕೆಲಸ ಮಾಡಿಕೊಂಡಿದ್ದು, 2022ರ ಸೆ. 28ರಂದು ಪತ್ನಿಯ ಮನೆಯಾದ ಕೋಣಿಯಿಂದ ಮಾವಿನಕಟ್ಟೆ ಕಡೆಗೆ ಬೈಕ್‌ನಲ್ಲಿ ಬರುತ್ತಿದ್ದಾಗ ಗುಲ್ವಾಡಿ ಉದಯನಗರದ ಜನತಾ ಕಾಲನಿ ಕ್ರಾಸ್ ಬಳಿ ಶಾಲಾ ವಾಹನಕ್ಕೆ ಸೈಡ್ ಕೊಡುವ ವೇಳೆ ಸ್ಕಿಡ್ ಆಗಿ ಬಿದ್ದಿದ್ದರು.
ಈ ವೇಳೆ ತಲೆಗೆ ತೀವ್ರ ಪೆಟ್ಟಾಗಿ ಕೋಮಾಗೆ ತಲುಪಿದ್ದರು. ಮಣಿಪಾಲ ಆಸ್ಪತ್ರೆಯಲ್ಲಿ 4 ಬಾರಿ ಶಸ್ತ್ರಚಿಕಿತ್ಸೆ ನಡೆಸಿ, ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿಯೂ ಶಸ್ತ್ರ ಚಿಕಿತ್ಸೆ ನಡೆಸಿದರೂ ಫಲಕಾರಿಯಾಗಿರಲಿಲ್ಲ. ಬಳಿಕ ಮನೆಯಲ್ಲಿಯೇ ಆರೈಕೆಯಲ್ಲಿದ್ದವರು ಜ. 4ರ ಸಂಜೆ 7.25ರ ಸುಮಾರಿಗೆ ಸಾವನ್ನಪ್ಪಿದ್ದಾರೆ. ಸಹೋದರ ಪುನೀತ್ ಕುಮಾರ್ ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.