Kundapura: ಚೂರಿ ಇರಿತಕ್ಕೊಳಗಾಗಿದ್ದ ವ್ಯಕ್ತಿ ಸಾವು
Team Udayavani, Oct 2, 2023, 11:22 PM IST
ಕುಂದಾಪುರ: ಇಲ್ಲಿನ ನಗರದಲ್ಲಿ ರವಿವಾರ ಸಂಜೆ ಚೂರಿ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ರಾಘವೇಂದ್ರ ಶೇರುಗಾರ್ (42) ಅವರು ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಬೆಳಗ್ಗೆ 9.45ರ ಸುಮಾರಿಗೆ ಸಾವನ್ನಪ್ಪಿದ್ದಾರೆ.
ರವಿವಾರ ಸಂಜೆ 7.10 ರ ಸುಮಾರಿಗೆ ಚಿಕ್ಕನ್‌ಸಾಲ್ ರಸ್ತೆಯ ಅಂಚೆ ಕಚೇರಿ ಸಮೀಪದ ಡೆಲ್ಲಿ ಬಜಾರ್ ಬಳಿ ರಾಘವೇಂದ್ರ ಹಾಗೂ ವ್ಯಾಗನರ್ ಕಾರಿನಲ್ಲಿ ಬಂದಿದ್ದ ಇನ್ನಿಬ್ಬರು ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡಿದ್ದು, ಆ ಪೈಕಿ ಓರ್ವ ರಾಘವೇಂದ್ರ ಅವರ ತೊಡೆಗೆ ಚೂರಿಯಿಂದ ಇರಿದು ಬಳಿಕ ಇಬ್ಬರೂ ಕಾರಿನಲ್ಲಿ ಪರಾರಿಯಾಗಿದ್ದಾರೆ. ಗಂಭೀರ ಗಾಯಗೊಂಡಿದ್ದ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತು. ಸೋಮ ವಾರ ಬೆಳಗ್ಗೆ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.
ಸಿನೆಮಾದಲ್ಲೂ ನಟಿಸಿದ್ದರು
ಬೆಂಗಳೂರಿನಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ರಾಘವೇಂದ್ರ ಅವರು, ಕೆಲವು ವರ್ಷಗಳಿಂದ ಊರಾದ ಕುಂದಾಪುರಕ್ಕೆ ಬಂದು ಇಲ್ಲಿಯೇ ನೆಲೆಸಿದ್ದರು. ಮೃತರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ. “ಬನ್ಸ್ ರಾಘು’ ಎಂದೇ ಗುರುತಿಸಿಕೊಂಡಿದ್ದ ರಾಘವೇಂದ್ರ ಅವರು “ಸಂಚಲನ’ ಎನ್ನುವ ಸಿನೆಮಾ ದಲ್ಲಿಯೂ ನಟಿಸಿದ್ದರು.
ಎಸ್ಪಿ ಭೇಟಿ
ಘಟನ ಸ್ಥಳಕ್ಕೆ ಸೋಮವಾರ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಅರುಣ್ ಕೆ. ಅವರು ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಡಿವೈಎಸ್ಪಿ ಬೆಳ್ಳಿಯಪ್ಪ, ವೃತ್ತ ನಿರೀಕ್ಷಕ ನಂದ ಕುಮಾರ್, ಉಪನಿರೀಕ್ಷಕರು, ಸಿಬಂದಿ ಭೇಟಿ ನೀಡಿದ್ದಾರೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.
ಪತ್ತೆಗೆ 3 ವಿಶೇಷ ತಂಡ
ಮೇಲ್ನೋಟಕ್ಕೆ ಯಾವುದೋ ಪೂರ್ವ ದ್ವೇಷದಿಂದಲೇ ರಾಘವೇಂದ್ರ ಅವರ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂದು ಹೇಳಲಾಗುತ್ತಿದ್ದು, ಆರೋಪಿ ಶಿವಮೊಗ್ಗ ಮೂಲದವ ಎಂದು ತಿಳಿದುಬಂದಿದೆ.
ಆರೋಪಿಯ ಪತ್ತೆಗಾಗಿ ಪೊಲೀಸರು ವಿಶೇಷ ಕಾರ್ಯಾಚರಣೆಗಿಳಿದಿದ್ದಾರೆ. ಆರೋಪಿ ಪತ್ತೆಗಾಗಿ ಎಸ್ಪಿಯವರು ಕುಂದಾಪುರ ಡಿವೈಎಸ್‌ಪಿ ಬೆಳ್ಳಿಯಪ್ಪ, ವೃತ್ತ ನಿರೀಕ್ಷಕ ನಂದಕುಮಾರ್ ಹಾಗೂ ಬ್ರಹ್ಮಾವರ ವೃತ್ತ ನಿರೀಕ್ಷಕ ಪಿ.ಎಂ. ದಿವಾಕರ್ ನೇತೃತ್ವದಲ್ಲಿ 3 ವಿಶೇಷ ತಂಡಗಳನ್ನು ರಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ
ಸ್ವಚ್ಛತೆ, ಬಯಲು ಬಹಿರ್ದೆಸೆ ಮುಕ್ತ ಗ್ರಾಮ; ಕಾರ್ಕಳ ಪ್ರಥಮ, ಹೆಬ್ರಿಗೆ ದ್ವಿತೀಯ ಸ್ಥಾನ
Kaup: ಅಜ್ಜಿಯ ಅಂತ್ಯ ಸಂಸ್ಕಾರದಲ್ಲಿ ಮೆರೆದ ಸರ್ವಧರ್ಮ ಸಮನ್ವಯತೆ
ಗೋವಂಶ ಸುರಕ್ಷೆಗಾಗಿ ಕೋಟಿ ವಿಷ್ಣುಸಹಸ್ರನಾಮ ಪಠನ, ಜಪ ಅಭಿಯಾನ: ವಿವಿಧ ಮಠಾಧೀಶರ ಬೆಂಬಲ
Udupi: ಕೊಠಡಿಯಲ್ಲಿ ಮಲಗಿದ ಸ್ಥಿತಿಯಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Shimoga: ಜಮೀನಿನ ವಿದ್ಯುತ್ ಪರಿವರ್ತಕ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ
Los Angeles: ಮತ್ತೊಂದು ಕಾಡ್ಗಿಚ್ಚು; 30 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ
Threat Mail: ಹಾಸ್ಯ ನಟ ಕಪಿಲ್ ಶರ್ಮಾ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ
Donald Trump: ಚೀನಾ ಆಮದು ಮೇಲೆ ಶೇ.10 ಸುಂಕ… ನೂತನ ಅಧ್ಯಕ್ಷ ಟ್ರಂಪ್